ಮಂಗಳೂರು: ಬ್ಯಾಂಕ್ ನಿವೃತ್ತ ಉದ್ಯೋಗಿಯ ಶವ ನದಿಯಲ್ಲಿ ಪತ್ತೆ
Team Udayavani, Jul 24, 2022, 8:55 PM IST
ಮಂಗಳೂರು: ರಕ್ತದೊತ್ತಡ ಪರೀಕ್ಷೆ ಮಾಡಿಸಲು ಆಸ್ಪತ್ರೆಗೆಂದು ಹೋಗಿದ್ದ ಬ್ಯಾಂಕ್ ನಿವೃತ್ತ ಉದ್ಯೋಗಿ, ಕಣ್ಣೂರು ಚೆಕ್ಪೋಸ್ಟ್ ಬಳಿಯ ಬೀಡು ನಿವಾಸಿ ವಿಶ್ವನಾಥ (65) ಅವರ ಮೃತದೇಹ ರವಿವಾರ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಆಡಂಕುದ್ರು ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಶನಿವಾರ ಬೆಳಗ್ಗೆ 9 ಗಂಟೆಗೆ ರಕ್ತದೊತ್ತಡ ಪರೀಕ್ಷೆ ಮಾಡಿಸಲು ಹೋಗುವುದಾಗಿ ತಿಳಿಸಿ ಮನೆಯಿಂದ ತೆರಳಿದ್ದರು. ಮಧ್ಯಾಹ್ನ 12.25ಕ್ಕೆ ಅವರ ಪತ್ನಿ ಕರೆ ಮಾಡಿದಾಗ ಸಂಬಂಧಿಕರಾದ ಸರೋಜಿನಿ ಅವರು ಕರೆ ಸ್ವೀಕರಿಸಿ ವಿಶ್ವನಾಥ ಅವರು ಮೊಬೈಲ್ ಹಾಗೂ ಪರ್ಸ್ ಬಿಟ್ಟು ನದಿಯ ಕಡೆಗೆ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ವಿಶ್ವನಾಥ ಅವರಿಗಾಗಿ ಹುಡುಕಾಟ ನಡೆಸಿದರೂ ಪ್ರಯೋಜನವಾಗದೆ ಪೊಲೀಸರಿಗೆ ದೂರು ನೀಡಲಾಗಿತ್ತು.
ನೀರಿಗೆ ಹಾರಿರುವ ಶಂಕೆಯಿಂದ ರವಿವಾರ ನದಿಯಲ್ಲಿ ಹುಡುಕಾಟ ನಡೆಸಲಾಗಿದ್ದು ನೇತ್ರಾವತಿ ಸೇತುವೆ ಬಳಿ ಶವ ಪತ್ತೆಯಾಗಿದೆ. ಯಾವುದೋ ಕಾರಣದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Moodbidri: ಆಳ್ವಾಸ್ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ
Mangalore: ಪ್ರಯಾಣಿಕರಿಗಾಗಿ ಸಿಗ್ನಲ್ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.