ಟಿಕೆಟ್ ಅಂತಿಮಗೊಳಿಸುವುದು ಸಂಸದೀಯ ಮಂಡಳಿ: ಸಿ.ಟಿ.ರವಿ
Team Udayavani, Jul 24, 2022, 11:26 PM IST
ಬೆಂಗಳೂರು : ನಮ್ಮಲ್ಲಿ ಪ್ರಧಾನಿಗೂ ಟಿಕೆಟ್ ಅಂತಿಮಗೊಳಿಸುವುದು ಪಕ್ಷದ ಸಂಸದೀಯ ಮಂಡಳಿ. ಇದು ಯಡಿಯೂರಪ್ಪ ಅವರಿಗೂ ಗೊತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಿಳಿಸಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೇವಲ ಸಲಹೆ ನೀಡಿದ್ದಾರೆ. ಅದನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ಇಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಅಂದಿದ್ದಾರೆಯೇ ಹೊರತು, ಸಕ್ರಿಯ ರಾಜಕೀಯದಿಂದ ದೂರ ಹೋಗುತ್ತೇನೆ ಎಂದಿಲ್ಲ. ಅವರೊಬ್ಬ ಜನನಾಯಕ. ಮುಖ್ಯಮಂತ್ರಿಗಳಾಗಿಯೂ ಕೆಲಸ ಮಾಡಿದವರು. ಪಕ್ಷವನ್ನು ಕಟ್ಟಿದವರಲ್ಲಿ ಅವರೂ ಒಬ್ಬರು ಎಂದರು.
ಮುಖವಾಡ ಕಳಚಿದ ರಮೇಶ್ ಕುಮಾರ್
ರಮೇಶ್ ಕುಮಾರ್ ಈ ಬಾರಿ ಸತ್ಯ ಹೇಳಿದ್ದಾರೆ. ಯಾವಾಗಲೂ ಮುಖವಾಡ ಧರಿಸಿರುವ ಅವರು ಈ ಬಾರಿ ಕಳಚಿದ್ದಾರೆ. ಜತೆಗೆ ಕಾಂಗ್ರೆಸ್ ಮುಖವಾಡವನ್ನು ಕಳಚಿದ್ದಾರೆ ಎಂದು ರವಿ ಹೇಳಿದರು.
ಒಕ್ಕಲಿಗರಲ್ಲಿ ಸಣ್ಣ ಮನಸ್ಥಿತಿಯಿಲ್ಲ
ಒಕ್ಕಲಿಗರು ಸಣ್ಣ ಮನಸ್ಥಿತಿಯಿಂದ ಯೋಚಿಸುವುದಿಲ್ಲ ಹಾಗೂ ಭ್ರಷ್ಟಾಚಾರವನ್ನು ಬಯಸುವುದಿಲ್ಲ. ಯಾರ ಯೋಗ್ಯತೆ ಏನು ಎಂಬುದು ಅವರಿಗೆ ಗೊತ್ತಿದೆ. ಒಕ್ಕಲಿಗರು ಇಷ್ಟಪಡೋದು ಸರ್ವಹಿತ ಬಯಸುವ ರಾಜಕೀಯವನ್ನು ಎಂದರು.
ಎಲ್ಲರಿಗೂ ಒಂದೇ ಕಾನೂನು
ಫ್ಲೆಕ್ಸ್ ಹಾಕಿದವರ ಮೇಲೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಪ್ರತಿಕ್ರಿಯಿ ಸಿದ ಅವರು, ನಾನು ಹುಟ್ಟುಹಬ್ಬದ ಫ್ಲೆಕ್ಸ್ ಹಾಕಲು ಹೇಳಿಲ್ಲ. ಹಾಕಿದ್ದನ್ನು ಸಮರ್ಥಿಸುವುದಿಲ್ಲ. ಅವರ ಮೇಲೆ ಕಾನೂನು ಪ್ರಕಾರ ಕ್ರಮ ಆಗಲಿ. ಕಾನೂನು ಸಿದ್ದರಾಮಯ್ಯ ಅವರಿಗೂ ಒಂದೇ; ಸಿಟಿ ರವಿಗೂ ಒಂದೇ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Boxing Day Test: ನೀಗಲಿ ಭಾರತದ ಬ್ಯಾಟಿಂಗ್ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್
Covid: ಎನ್-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ
Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ
Koteshwar: ಬೀಜಾಡಿಯ ಯೋಧ ಅನೂಪ್ ಪೂಜಾರಿ ಮೃತ್ಯು
Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್ ಸಿಂಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.