ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉತ್ತರ ಕನ್ನಡ ಜನರ ಹೋರಾಟ: ಬೆಂಬಲ ನೀಡಿದ ಕುಮಾರಸ್ವಾಮಿ
Team Udayavani, Jul 25, 2022, 9:49 AM IST
ಬೆಂಗಳೂರು: ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ನೀಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ ಎಂದಿದ್ದಾರೆ.
ಇದನ್ನೂ ಓದಿ:ಸೇನೆ ಸೇರುವ ಯುವಕ ಯುವತಿಯರಿಗೆ ಉಚಿತ ತರಬೇತಿ ನೀಡುವ ಮಾಜಿ ಸೈನಿಕರು
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರಕಾರ ಕಣ್ತೆರೆಯಲೇಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಇನ್ನೆಷ್ಟು ಆಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ @BJP4Karnataka ಸರಕಾರ ಕಣ್ತೆರೆಯಲೇಬೇಕು. 5/6
— H D Kumaraswamy (@hd_kumaraswamy) July 25, 2022
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟೆಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಎಚ್ ಡಿಕೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.