![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 25, 2022, 1:51 PM IST
ವಿಜಯಪುರ : ರಾಜ್ಯದಲ್ಲಿ ಕಾಂಗ್ರೆಸ್ ಇನ್ನೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಈ ಸತ್ಯವನ್ನು ಅರ್ಥ ಮಾಡಿಕೊಳ್ಳದೇ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿ ಕುರ್ಚಿಗಾಗಿ ಕಿತ್ತಾಟ ನಡೆಸಿದ್ದಾರೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಲೇವಡಿ ಮಾಡಿದರು.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಗಾಗಿ ಈಗಲೇ ಕಿತ್ತಾಟ ಆರಂಭಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡಿಲ್ಲ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಮುಖ್ಯಮಂತ್ರಿ ಆಗಲು ಸಾಧ್ಯವಿಲ್ಲ. ಸಿಎಂ ಆಗಬೇಕೆಂದು ಇನ್ಯಾರೋ ಹಂಬಲಿಸುತ್ತಿದ್ದಾರೆ. ಅವರು ಹಂಬಲಿಸುತ್ತಲೇ ಇರಲಿ. ಚುನಾವಣೆ ಆಗುವ ವರೆಗೂ ಅವರ ಮಾತಿನ ಚಟ ತೀರಿಸಿಕೊಳ್ಳಲಿ ಎಂದು ಕುಟುಕಿದರು.
ರಾಜ್ಯದಲ್ಲಿ ಬಿಜೆಪಿ ಉತ್ತಮ ಸರ್ಕಾರ ನೀಡಿರುವ ಕಾರಣ ಮರಳಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರುತ್ತದೆ. ಮುಂದೆಯೂ ಒಳ್ಳೆ ಸರ್ಕಾರ ಕೊಟ್ಟು ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಿದ್ದೇವೆ ಎಂದು ಸಚಿವ ಕತ್ತಿ ವಿಶ್ವಾಸ ವ್ಯಕ್ತಪಡಿಸಿದರು.
ಕುಟುಂಬ ರಾಜಕಾರಣಕ್ಕೆ ಸಮರ್ಥನೆ
ನಾನೂ ಕೂಡ ಕುಟುಂಬ ರಾಜಕೀಯ ಹಿನ್ನೆಲೆಯಿಂದಲೇ ಬಂದವನು. ಕುಟುಂಬ ರಹಿತ ರಾಜಕಾರಣ ಅಸಾಧ್ಯ. ಹೀಗಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಮಗನಿಗೆ ತವರು ಕ್ಷೇತ್ರ ಬಿಟ್ಟು ಕೊಡುವುದಾಗಿ ಘೋಷಿಸಿದ್ದರಲ್ಲಿ ತಪ್ಪೇನಿದೆ ಎಂದು ಅರಣ್ಯ ಸಚಿವ ಉಮೇಶ ಕತ್ತಿ ಪ್ರಶ್ನಿಸಿದ್ದಾರೆ.
ಬಿಜೆಪಿ ಪಕ್ಷದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಚುನಾವಣೆ ಸ್ಪರ್ಧೆಯಿಂದ ರಾಜಕೀಯ ನಿವೃತ್ತಿ ನಿಯಮ ರೂಪಿಸಲಾಗಿದೆ ಅವಕಾಶವಿಲ್ಲ. ಯಡಿಯೂರಪ್ಪ ಅವರಿಗೆ 80 ವರ್ಷ ವಯಸ್ಸಾಗಿದೆ. ಹೀಗಾಗಿ ರಾಜಕೀಯ ನಿವೃತ್ತಿ ಹಂತದಲ್ಲಿ ತಮ್ಮ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರ ಅವರಿಗೆ ಅವಕಾಶ ಕೊಡಿ ಎಂದು ಯಡಿಯೂರಪ್ಪ ಹೇಳಿದ್ದರಲ್ಲಿ ಯಾವ ತಪ್ಪಿಲ್ಲ ಎಂದು ಸಮರ್ಥಿಸಿದರು.
ಯಡಿಯೂರಪ್ಪ ಅವರು ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರೂ, ಅವರಲ್ಲಿ ಇನ್ನೂ ಪಕ್ಷಕ್ಕಾಗಿ ದುಡಿಯುವ ತಾಕತ್ತಿದೆ. ಆದರೂ ಪಕ್ಷದ ನಿಯಮಕ್ಕೆ ಬದ್ಧವಾಗಿ ರಾಜಕೀಯ ನಿವೃತ್ತಿ ಘೋಷಿಸಿ, ಮಗ ವಿಜೇಂದ್ರ ಅವರನ್ನು ರಾಜಕೀಯವಾಗಿ ಬೆಳೆಸಲು ಕ್ಷೇತ್ರವನ್ನ ಮಗನಿಗೆ ಬಿಟ್ಟುಕೊಟ್ಟಿದ್ದಾರೆ ಎಂದರು.
ಇನ್ನು ಬಿಜೆಪಿ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಎಂಬ ಚರ್ಚೆ ಸಹಜವೇ. ಆದರೆ ನಾನೂ ಕುಟುಂಬ ರಾಜಕಾರಣದ ಹಿನ್ನೆಲೆಯಿಂದ ಬಂದಿದ್ದೇನೆ. ಹಾಗಾಗಿ ಕುಟುಂಬ ರಾಜಕಾರಣ ಇರುವುದು ಸಹಜ. ಪ್ರಧಾನಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣ ವಿಷಯದಲ್ಲಿ ಅಪವಾದ ಎನಿಸಿದ್ದಾರೆ ಎಂದರು.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.