ನಮ್ಮದು ಹೈಕಮಾಂಡ್ ಪಕ್ಷ, ಸೋನಿಯಾ- ರಾಹುಲ್ ನಮ್ಮ ನಾಯಕರು: ಡಿಕೆಶಿ ಗೆ ಜಮೀರ್ ಟಾಂಗ್
Team Udayavani, Jul 25, 2022, 3:00 PM IST
ಹಾವೇರಿ: ಮುಂದಿನ ಸಿಎಂ ವಿಚಾರವಾಗಿ ನಾನು ನನ್ನ ಅಭಿಪ್ರಾಯ ಹೇಳಿದ್ದೇನೆ ಮಾತ್ರ. ನಮ್ಮದು ಹೈಕಮಾಂಡ್ ಪಕ್ಷ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ನಮ್ಮ ನಾಯಕರು. ಯಾರು ಮುಖ್ಯಮಂತ್ರಿ ಎನ್ನುವುದನ್ನು ಅವರು ತೀರ್ಮಾನ ಮಾಡುತ್ತಾರೆ. ಅವರು ಹಾಕಿದ ಗೆರೆಯನ್ನು ನಾವು ದಾಟುವುದಿಲ್ಲ. ನನ್ನ ಅಭಿಪ್ರಾಯ ಹೇಳಿ ಬಿಟ್ಟಿದ್ದೇನೆ. ಅದರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಜಮೀರ್ ಅಹಮ್ಮದ ಖಾನ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಜನ್ಮದಿನವನ್ನೂ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರ ಹುಟ್ಟುಹಬ್ಬವನ್ನು ನಾವೆಲ್ಲ ಸೇರಿ ಇದೇ ರೀತಿ ಮಾಡುತ್ತೇವೆ. ಅಭಿಮಾನಿಗಳ ಒತ್ತಡದಿಂದ ಹುಟ್ಟುಹಬ್ಬ ಆಚರಣೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷದಿಂದ ಮಾಡುತ್ತಿರುವುದು, ಅವರ ಅಭಿಮಾನಿಗಳು ಮಾಡುತ್ತೇವೆ. ಅದರಲ್ಲಿ ಕಾಂಗ್ರೆಸ್ ಪಕ್ಷದವರು ಸೇರಿಕೊಂಡಿದ್ದಾರೆ. ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ, ಎಂ.ಬಿ.ಪಾಟೀಲ ಸೇರಿದಂತೆ ಕಾಂಗ್ರೆಸ್ ನ ಎಲ್ಲ ನಾಯಕರು ಬರುತ್ತಿದ್ದಾರೆ ಎಂದರು.
ಇದನ್ನೂ ಓದಿ:ಪ್ರಿಯಕರನ ಬಳಿ ಖರ್ಚಿಗೆ ಹಣವಿಲ್ಲವೆಂದು ದೊಡ್ಡಪ್ಪನ ಮನೆಯನ್ನೇ ದೋಚಿದಳು! ಪ್ರೇಮಿಗಳು ಅರೆಸ್ಟ್
ಹಾವೇರಿ ಕಾಂಗ್ರೆಸ್ ನ ಭದ್ರಕೋಟೆ. ಸಿದ್ದರಾಮಯ್ಯ ಎಂದೂ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿಲ್ಲ. ನಾವು ದೆಹಲಿಗೆ ಹೋದಾಗ ಸಿದ್ದರಾಮಯ್ಯಗೆ ಸಾಕಷ್ಟು ಪೋನ್ ಬಂದವು. ಜನರ ಒತ್ತಡ ಜಾಸ್ತಿಯಾದಾಗ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಲ್ಪಸಂಖ್ಯಾತರು ಬರಬೇಕೆಂದು ನಾನು ಓಡಾಡುತ್ತಿದ್ದೇನೆ. ಸಿದ್ದರಾಮಯ್ಯ ನವರ ಋಣ ತೀರಿಸಬೇಕಿದೆ. ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸಿದ್ದರಾಮಯ್ಯ ಕಾಲದಲ್ಲಿ ಸಾಕಷ್ಟು ಹಣ ಕೊಟ್ಟಿದ್ದಾರೆ. ನಾವೆಲ್ಲ ಅವರ ಋಣ ತೀರಿಸಬೇಕೋ ಬೇಡವೇ ಎಂದು ಜಮೀರ್ ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.