ನಗ್ನ ಚಿತ್ರ :ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸಲು ಅರ್ಜಿ
ಮಹಿಳೆಯರ ಭಾವನೆಗಳಿಗೆ ಧಕ್ಕೆ ಎಂದು ಆಕ್ರೋಶ
Team Udayavani, Jul 25, 2022, 10:06 PM IST
ಮುಂಬಯಿ: ಸಾಮಾಜಿಕ ಮಾಧ್ಯಮದಲ್ಲಿ ತನ್ನ ನಗ್ನ ಛಾಯಾಚಿತ್ರಗಳ ಮೂಲಕ “ಮಹಿಳೆಯರ ಭಾವನೆಗಳಿಗೆ ಧಕ್ಕೆ ತಂದಿರುವ” ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಮುಂಬಯಿ ಪೊಲೀಸರಿಗೆ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.
ಪೂರ್ವ ಮುಂಬಯಿ ಉಪನಗರದಲ್ಲಿರುವ ಎನ್‌ಜಿಒ ಪದಾಧಿಕಾರಿಯೊಬ್ಬರು ಚೆಂಬೂರ್ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಲ್ಲಿಸಿದ್ದಾರೆ. ನಟ ತನ್ನ ಛಾಯಾಚಿತ್ರಗಳ ಮೂಲಕ ಮಹಿಳೆಯರ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ಅವರ ನಮ್ರತೆಗೆ ಅವಮಾನ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಟನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ದೂರುದಾರರು ಒತ್ತಾಯಿಸಿದ್ದಾರೆ.
“ಸೋಮವಾರ ಎನ್‌ಜಿಒಗೆ ಸಂಬಂಧಿಸಿದ ವ್ಯಕ್ತಿಯಿಂದ ನಾವು ಅರ್ಜಿಯನ್ನು ಸ್ವೀಕರಿಸಿದ್ದೇವೆ. ಇಲ್ಲಿಯವರೆಗೆ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ನಾವು ವಿಚಾರಿಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.