ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ನಾಯಕರು
Team Udayavani, Jul 26, 2022, 12:22 PM IST
ವಾಡಿ: ಚಿತ್ತಾಪುರ ಮೀಸಲು ಮತಕ್ಷೇತ್ರದ ಬಿಜೆಪಿ ಮುಖಂಡರು ಹಾಗೂ ಬಂಜಾರಾ ಸಮಾಜದ ಯುವ ನಾಯಕರು ಶಾಸಕ ಪ್ರಿಯಾಂಕ್ ಖರ್ಗೆ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲಿಂ ಐಮದ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ವಾಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಮಹೆಮೂದ್ ಸಾಹೇಬ ಅವರ ನೇತೃತ್ವದಲ್ಲಿ ಸೋಮವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ಬಿಜೆಪಿ ಇಂಗಳಗಿ ಮಂಡಲದ ಅಧ್ಯಕ್ಷ ಬಸವಂತರಾವ ಪಾಟೀಲ (ಗುಂಡುಗೌಡ), ಅಖೀಲ ಭಾರತ ಬಂಜಾರಾ ಸೇವಾ ಸಂಘದ ವಾಡಿ ವಲಯ ಅಧ್ಯಕ್ಷ ಶಂಕರ ಜಾಧವ, ಬಿಜೆಪಿ ಒಬಿಸಿ ಮೋರ್ಚಾದ ಮಾಜಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಶೈಲ ನಾಟೀಕಾರ ಇಂಗಳಗಿ, ಆರ್ಯ ಈಡಿಗ ಸಮಾಜದ ತಾಲೂಕು ಉಪಾಧ್ಯಕ್ಷ ಸಂಗಯ್ಯ ಗುತ್ತೇದಾರ, ಪುರಸಭೆ ಮಾಜಿ ಸದಸ್ಯ ವಿಜಯ್ ನಾಯಕ, ಬಂಜಾರಾ ಮುಖಂಡರಾದ ಹಣಮಂತ ಚವ್ಹಾಣ ಕಡಬೂರ, ರಾಜೇಂದ್ರ ಪವಾರ, ಬಾಬು ನಾಯಕ, ಕಿಶನ್ ನಾಯಕ, ಅಶೋಕ ಚವ್ಹಾಣ, ವೆಂಕಟೇಶ ಜಾಧವ, ಹೇಮಂತ ನಾಯಕ, ದಶರಥ ರಾಠೊಡ ಅವರು ಅಧಿ ಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೆಮೂದ್ ಸಾಹೇಬ ಮಾತನಾಡಿ, ಬಿಜೆಪಿ ತೊರೆದು ಬಂದ ಮುಖಂಡರನ್ನು ಪ್ರಿಯಾಂಕ್ ಖರ್ಗೆ ಅವರು ಸಾಂಕೇತಿಕವಾಗಿ ಪಕ್ಷಕ್ಕೆ ಸ್ವಾಗತಿಸಿದ್ದಾರೆ. ಮುಂದಿನ ದಿನಗಳಲ್ಲಿ ವಾಡಿ ನಗರದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗುತ್ತಿದ್ದು, ಆ ವೇಳೆ ಅದ್ಧೂರಿಯಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಅಲ್ಲದೆ ಇವರೊಂದಿಗೆ ಇನ್ನೂ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಶಾಸಕ ಪ್ರಿಯಾಂಕ್ ಅವರ ಜಾತ್ಯತೀತ ನಿಲುವು ಮತ್ತು ಅಭಿವೃದ್ಧಿಯ ದೂರ ದೃಷ್ಟಿಯನ್ನು ಮನಗಂಡು ಪಕ್ಷಕ್ಕೆ ಆಕರ್ಷಿತರಾಗಿರುವುದು ಪಕ್ಷಕ್ಕೆ ಮತ್ತಷ್ಟು ಶಕ್ತಿ ನೀಡಲಿದೆ ಎಂದರು.
ಬಿಜೆಪಿ ತೊರೆದು ಬಂದ ಮುಖಂಡರೆಲ್ಲರನ್ನೂ ಕಾಂಗ್ರೆಸ್ ಪಕ್ಷದ ಶಾಲು ಹೊದಿಸುವ ಮೂಲಕ ಶಾಸಕ ಪ್ರಿಯಾಂಕ್ ಖರ್ಗೆ ಅವರು ಪಕ್ಷಕ್ಕೆ ಸ್ವಾಗತಿಸಿದರು. ಕಾಂಗ್ರೆಸ್ ಸಾಮಾಜಿಕ ಜಾಲತಾಣದ ರಾಜ್ಯ ಉಪಾಧ್ಯಕ್ಷ ಮನ್ಸೂರ್ ಖಾನ್ ಈ ಸಂದರ್ಭದಲ್ಲಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.