ಮುಂಗಾರಿನಲ್ಲಿಯೇ ಮೈದುಂಬಿದ ಕೆರೆಗಳು
Team Udayavani, Jul 26, 2022, 3:45 PM IST
ಬೀದರ: ಮುಂಗಾರು ಮಳೆ ಈ ಬಾರಿ ಗಡಿನಾಡು ಬೀದರನ ಗ್ರಾಮೀಣ ಪ್ರದೇಶದ ಜನರಿಗೆ ಅದರಲ್ಲೂ ಅನ್ನದಾತರಲ್ಲಿ ಸಂತಸ ಹೆಚ್ಚಿಸಿದೆ. ಜಿಲ್ಲೆಯ 125 ಕೆರೆಗಳ ಪೈಕಿ ಈಗಾಗಲೇ 28 ಕೆರೆಗಳು ಮೈದುಂಬಿಕೊಂಡು ಕಂಗೊಳಿಸುತ್ತಿವೆ.
ಬಸವನ ಹುಳು ಬಾಧೆ ಜತೆಗೆ ಮಳೆ ಆರ್ಭಟದಿಂದ ಕೆಲವೆಡೆ ಬೆಳೆಗಳು ನೀರು ಪಾಲಾಗಿ ಆರ್ಥಿಕ ಸಂಕಷ್ಟ ತಂದೊಡ್ಡಿದ್ದರೂ ಬರುವ ದಿನಗಳಲ್ಲಿ ಜೀವಜಲ ಸಮಸ್ಯೆಗೆ ಪರಿಹಾರ ಸಿಕ್ಕಂತಾಗಿದೆ.
ಅತ್ತ ಜಿಲ್ಲೆಯ ಏಕೈಕ ಕಾರಂಜಾ ಜಲಾಶಯದಲ್ಲೂ ನೀರಿನ ಪ್ರಮಾಣ ಹೆಚ್ಚಿದ್ದರೆ ಇತ್ತ ಕೆರೆಗಳೂ ಮೈದುಂಬಿಕೊಳ್ಳುತ್ತಿರುವುದು ಗ್ರಾಮಗಳ ಚಿತ್ರಣ ಬದಲಾಯಿಸಿವೆ. ಬತ್ತಿ ಹೋಗಿದ್ದ ಕೊಳವೆಬಾವಿ ಮತ್ತು ಬಾವಿಗಳಲ್ಲಿ ಅಂತರ್ಜಲ ಹೆಚ್ಚುತ್ತಿದೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯಡಿ ಬೀದರ ಜಿಲ್ಲೆಯಲ್ಲಿ 125 ಕೆರೆಗಳಿದ್ದು, 2958 ಎಂಸಿಎಫ್‌ಟಿ ಗರಿಷ್ಠ ನೀರಿನ ಸಾಮರ್ಥ್ಯ (21,494 ಹೆಕ್ಟೇರ್) ಹೊಂದಿವೆ. ಇದರಲ್ಲಿ ಜುಲೈ 25ರವರೆಗೆ 31 ಕೆರೆಗಳು ನೀರಿನಿಂದ ಸಂಪೂರ್ಣ ಭರ್ತಿಯಾಗಿ ಕಣ್ಮನ ಸೆಳೆಯುತ್ತಿವೆ. 49 ಕೆರೆಗಳು ಶೇ.51ರಿಂದ 99 ಭರ್ತಿಯಾಗಿದ್ದರೆ, 17 ಕೆರೆಗಳು ಶೇ.31ರಿಂದ 50 ಮತ್ತು 31 ಕೆರೆಗಳಲ್ಲಿ ಶೇ.30 ನೀರು ಸಂಗ್ರಹವಾಗಿವೆ.
ಕಳೆದ ಎರಡ್ಮೂರು ವರ್ಷಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆ ಹಿನ್ನೆಲೆ ಕೆರೆಗಳ ಸ್ಥಿತಿ ಉತ್ತಮವಾಗಿದ್ದು, ಇದರಿಂದ ಅನೇಕ ಗ್ರಾಮಗಳ ನೀರಿನ ಸಮಸ್ಯೆ ನಿವಾರಣೆಯಾಗುವುದರ ಜತೆಗೆ ಜಾನುವಾರುಗಳಿಗೂ ಸಹಾಯವಾಗಿದೆ. ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಅಂತ್ಯಕ್ಕೆ ಇಲ್ಲವೇ ನಂತರ ಉತ್ತಮ ಮಳೆಯಾದರೆ ಕೆರೆಗಳು ತುಂಬಿಕೊಳ್ಳುತ್ತಿದ್ದವು. ಆದರೆ ಈ ವರ್ಷ ಉತ್ತಮ ಮಾನ್ಸೂನ್ ಇದ್ದು, ಮುಂಗಾರು ಋತುವಿನಲ್ಲೇ ಮಳೆ ಆರ್ಭಟದಿಂದ ಭಾರಿ ಪ್ರಮಾಣದಲ್ಲಿ ಕೆರೆ-ಕಟ್ಟೆಗಳಿಗೆ ನೀರು ಹರಿದು ಬಂದಿವೆ. ಈಗಾಗಲೇ ಜಿಲ್ಲೆಯ ಶೇ.30 ಕೆರೆಗಳು ಸಂಪೂರ್ಣ ಭರ್ತಿಯಾಗಿದ್ದು, ಮತ್ತೆ ಮಳೆಯಾದರೆ ಇನ್ನುಳಿದ ಕೆರೆಗಳು ತುಂಬಿಕೊಳ್ಳಲಿವೆ. ಅತಿವೃಷ್ಟಿಯಿಂದ ಕೃಷಿಕರು ಬೆಳೆ ಕಳೆದುಕೊಂಡರೂ ಕೆರೆಗಳ ಭರ್ತಿ ನೆಮ್ಮದಿ ತಂದಿದೆ.
ಕಳೆದೆರಡು ವರ್ಷಗಳಿಂದ ಉತ್ತಮ ಮಳೆಯಿಂದಾಗಿ ಬೀದರ ಜಿಲ್ಲೆಯ ಕೆರೆಗಳು ಉತ್ತಮ ಸ್ಥಿತಿಯಲ್ಲಿವೆ. ಈ ವರ್ಷದ ಮುಂಗಾರು ಋತುವಿನಲ್ಲೇ 124 ಕೆರೆಗಳ ಪೈಕಿ 26 ಕೆರೆಗಳು ಈಗಾಗಲೇ ಸಂಪೂರ್ಣ ಭರ್ತಿಯಾಗಿವೆ. ಅಂತರ್ಜಲ ವೃದ್ಧಿ ಜತೆಗೆ ಮುಂದೆ ಬೆಳೆಗಳಿಗೆ ನೀರು, ಜನ-ಜಾನುವಾರುಗಳ ದಾಹ ನೀಗಿಸಲು ಸಹಕಾರಿಯಾಗಲಿದೆ. ಯಾವುದೇ ಕೆರೆ ಅಪಾಯ ಮಟ್ಟದಲ್ಲಿಲ್ಲ. ನೀರಿನ ಒಳಹರಿವು ಗಮನಿಸಿ ಕೆರೆ ಗೇಟ್ ತೆಗೆದು ನೀರು ಬಿಟ್ಟು ಒತ್ತಡ ಹೆಚ್ಚಾಗದಂತೆ ನೋಡಿಕೊಳ್ಳಲಾಗುವುದು. -ಸುರೇಶ ಮೇದಾ, ಇಇ, ಸಣ್ಣ ನೀರಾವರಿ ಇಲಾಖೆ, ಬೀದರ
-ಶಶಿಕಾಂತ ಬಂಬುಳಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್ ಖಂಡ್ರೆ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು
Lokayukta Raid: ಜಿಲ್ಲಾ ತರಬೇತಿ ಕೇಂದ್ರದ ಅಧಿಕಾರಿ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ
Waqf Issue: ಬೀದರ್ ರೈತ ಸಂಘ, ಬಿಜೆಪಿಯಿಂದ ಬೃಹತ್ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.