ಸಿಬ್ಬಂದಿ ಕೊರತೆ, ಸೊರಗಿದ ಪಶು ಇಲಾಖೆ
ಸಕಾಲದಲ್ಲಿ ಯೋಜನೆಗಳ ಅನುಷ್ಠಾನ ಅಸಾಧ್ಯ ಸಮರ್ಪಕ ಸೇವೆಯ ಕೊರತೆ
Team Udayavani, Jul 26, 2022, 4:28 PM IST
ಗದಗ: ಪಶುಗಳಿಗೆ ಚಿಕಿತ್ಸೆ ನೀಡಬೇಕಾದ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಿಬ್ಬಂದಿ ಕೊರತೆಯಿಂದ ಸೊರಗಿ ಹೋಗಿದೆ.
ಮಂಜೂರಾದ ಒಟ್ಟು ಎ,ಬಿ,ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಶೇ.65 ಹುದ್ದೆಗಳು ಖಾಲಿಯಿದ್ದು, ಸರ್ಕಾರ ಆದಷ್ಟು ಬೇಗ ಇಲಾಖೆಗೆ ಶಸ್ತ್ರಚಿಕಿತ್ಸೆ ಮಾಡಬೇಕಿದೆ.
ಪಶು ಇಲಾಖೆಯಲ್ಲಿ ಪ್ರತಿ ವರ್ಷ ಒಂದೊಂದು ಹೊಸ ಯೋಜನೆಗಳು ಸೇರ್ಪಡೆಯಾಗುತ್ತಿದ್ದು, ಇರುವ ಸಿಬ್ಬಂದಿಯೇ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕಾದ ಹೊಣೆ ಹೊತ್ತಿದೆ. ಆದರೆ ಹೆಚ್ಚಿನ ಕೆಲಸದ ಒತ್ತಡದ ಪರಿಣಾಮ ಅವುಗಳನ್ನು ಸಕಾಲಕ್ಕೆ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಸಮರ್ಪಕ ಸೇವೆ ಒದಗಿಸುವಲ್ಲಿ ವಿಫಲವಾಗುತ್ತಿದೆ.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಜಿಲ್ಲೆಯ 384 ಸರ್ಕಾರಿ ಮಂಜೂರಾತಿ ಹುದ್ದೆಗಳಿವೆ. ಇವುಗಳಲ್ಲಿ ಕೇವಲ 121 ಹುದ್ದೆಗಳು ಮಾತ್ರ ಭರ್ತಿಯಾಗಿದ್ದು, 263 ಹುದ್ದೆಗಳು ಖಾಲಿ ಉಳಿದಿವೆ. ಕಳೆದ 10 ವರ್ಷಗಳಿಂದ ವೈದ್ಯರ, ಸಿಬ್ಬಂದಿಯ ಕೊರತೆ ಅನುಭವಿಸುತ್ತಿದೆ.
ವರ್ಷದಲ್ಲಿ ನಾಲ್ಕು ಬಾರಿ ಲಸಿಕೆ ಅಭಿಯಾನ ನಡೆಸುವುದು, ಸಭೆಗಳಿಗೆ ಹಾಜರಾಗಿ ಜನಪ್ರತಿನಿ ಧಿಗಳಿಗೆ ಮಾಹಿತಿ ಒದಗಿಸುವುದು, ಕುರಿ, ಮೇಕೆ, ಜಾನುವಾರು ಆಕಸ್ಮಿಕವಾಗಿ ಮೃತಪಟ್ಟರೆ ಮಹಜರ್ ನಡೆಸಿ ವರದಿ ನೀಡುವುದು ಸೇರಿ ವಿಮೆ ದೃಢೀಕರಣ ಕೆಲಸವನ್ನು ವೈದ್ಯರು ಮಾಡಬೇಕಿದೆ. ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ಲಸಿಕಾ ಅಭಿಯಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಹುದ್ದೆಗಳು ಖಾಲಿ ಇರುವುದರಿಂದ ಕಾಲು ಬಾಯಿ ಜ್ವರ ಹಾಗೂ ಇತರೆ ಕಾಯಿಲೆಗಳ ನಿಯಂತ್ರಣ ಸವಾಲಿನ ಕೆಲಸವಾಗಿದೆ.
ಜಿಲ್ಲೆಯಲ್ಲಿ ರೈತರು ಪ್ರಮುಖವಾಗಿ ಒಕ್ಕಲುತನ, ಹೈನುಗಾರಿಕೆ, ಕುರಿ ಸಾಕಾಣಿಕೆ ನಡೆಸುತ್ತಿದ್ದು, ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ಜಾನುವಾರುಗಳಿಗೆ ಸಾಮಾನ್ಯವಾಗಿ ಗಂಟಲು ಬೇನೆ, ಕಾಲುಬೇನೆ, ಕರಳು ಬೇನೆಗೆ ತುತ್ತಾಗುತ್ತವೆ. ರೈತರು ಜಾನುವಾರು, ಕುರಿ-ಮೇಕೆಗಳ ಚಿಕಿತ್ಸೆಗೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯಬೇಕಾದ ಪರಿಸ್ಥಿತಿ ಎದುರಾಗಿದೆ.
ಎರಡೇ ವರ್ಷದಲ್ಲಿ 10 ಹುದ್ದೆ ಖಾಲಿ
ಕಳೆದ ಎರಡೇ ವರ್ಷಗಳ ಅವ ಧಿಯಲ್ಲಿ ಕೋವಿಡ್ ಸೇರಿ ನಾಲ್ವರು ಸಿಬ್ಬಂದಿ ಮೃತಪಟ್ಟಿದ್ದಾರೆ. ನಿವೃತ್ತಿ, ವರ್ಗಾವಣೆ ಸೇರಿ ಜಿಲ್ಲೆಯಲ್ಲಿ 10 ಹುದ್ದೆಗಳು ಖಾಲಿಯಾಗಿವೆ. ಒಬ್ಬರು ಮಾತ್ರ ಬೇರೆ ಜಿಲ್ಲೆಯಿಂದ ವರ್ಗಾವಣೆಗೊಂಡು ಬಂದಿದ್ದಾರೆ ಎಂದು ಪಶುಪಾಲನೆ, ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ|ಜಿ.ಪಿ. ಮನಗೂಳಿ “ಉದಯವಾಣಿ’ಗೆ ಮಾಹಿತಿ ನೀಡಿದರು.
88 ಪಶು ಆಸ್ಪತ್ರೆ-ಚಿಕಿತ್ಸಾಲಯಗಳು
ಜಿಲ್ಲೆಯ ಗದಗ ತಾಲೂಕಿನಲ್ಲಿ 27, ಶಿರಹಟ್ಟಿ 13, ರೋಣ 23, ಮುಂಡರಗಿ 16, ನರಗುಂದ ತಾಲೂಕಿನ 9 ಸೇರಿ ಒಟ್ಟು 88 ಪಶು ಆಸ್ಪತ್ರೆ-ಚಿಕಿತ್ಸಾಲಯಗಳಿವೆ.
8 ಸಂಚಾರಿ ಪಶು ಚಿಕಿತ್ಸಾ ವಾಹನ
ಜಿಲ್ಲೆಯಲ್ಲಿ ತಾಲೂಕಿಗೊಂದರಂತೆ 7, ಗದಗ-ಬೆಟಗೇರಿ ಅವಳಿ ನಗರದ ಪಶು ವೈದ್ಯ ಪಾಲಿಕ್ಲಿನಿಕ್‌ಗೆ ಒಂದು ಸೇರಿ ಒಟ್ಟು 8 ಸಂಚಾರಿ ಪಶು ಚಿಕಿತ್ಸಾ ವಾಹನಗಳು ಆಗಮಿಸಿವೆ. ಪ್ರತಿಯೊಂದು ವಾಹನದಲ್ಲಿ ಪಶು ವೈದ್ಯಾಧಿಕಾರಿ, ಸಹಾಯಕ ಹಾಗೂ ಡ್ರೈವರ್ ಸೇರಿ ಮೂವರು ಸಿಬ್ಬಂದಿ ಇರಲಿದ್ದು, ಕೆಲವೇ ದಿನಗಳಲ್ಲಿ ಆ ಹುದ್ದೆಗಳು ನೇಮಕವಾಗಲಿವೆ.
ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ಜರ್ಸಿ ಹಸುಗಳು, ಎಮ್ಮೆಗಳನ್ನು ಸಾಕುತ್ತಾರೆ. ಸದ್ಯ ಮಳೆಗಾಲ ಆರಂಭವಾಗಿರುವುದರಿಂದ ಜಾನುವಾರು ಹಾಗೂ ಕುರಿ-ಮೇಕೆಗಳಿಗೆ ವಿವಿಧ ಕಾಯಿಲೆಗಳು ಬರುತ್ತವೆ. ಪಶು ಚಿಕಿತ್ಸಾ ಕೇಂದ್ರದಲ್ಲಿ ವೈದ್ಯರ-ಸಿಬ್ಬಂದಿ ಕೊರತೆಯಿಂದ ಹೈನುಗಾರರು ಒಂದು ಕಡೆಯಿಂದ ಮತ್ತೂಂದು ಕಡೆಗೆ ಅಲೆದಾಡುವಂತಾಗಿದೆ. –ಶರಣಪ್ಪ ಜೋಗಿನ, ತಿಮ್ಮಾಪುರ ಗ್ರಾಮದ ರೈತ.
ವರ್ಷದಿಂದ ವರ್ಷಕ್ಕೆ ವೈದ್ಯರ ಕೊರತೆ ಕಾಡುತ್ತಿದೆ. ಈಗಾಗಲೇ ರಾಜ್ಯದ ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ 400 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆ ಪೈಕಿ ಕನಿಷ್ಟ 25 ಹುದ್ದೆಗಳನ್ನು ಜಿಲ್ಲೆಗೆ ನೀಡುವಂತೆ ಸಚಿವರಲ್ಲಿ ಮನವಿ ಮಾಡಲಾಗಿದೆ. –ಡಾ|ಜಿ.ಪಿ. ಮನಗೂಳಿ, ಉಪ ನಿರ್ದೇಶಕರು, ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆ.
-ಅರುಣಕುಮಾರ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.