ಸರ್ವಾಧಿಕಾರಿಗಳ ವಿರುದ್ಧ ವಿದ್ಯಾರ್ಥಿ ಹೋರಾಟ ನಿರಂತರ

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಮಾವೇಶಕ್ಕೆ ಚಾಲನೆ ರ್ಯಾಲಿಯಲ್ಲಿ ಪ್ಲೇ ಕಾರ್ಡ್‌ ತೋರಿಸದಂತೆ ಪೊಲೀಸರ ಆಕ್ಷೇಪ

Team Udayavani, Jul 26, 2022, 5:51 PM IST

20

ಗಂಗಾವತಿ: ವಿಶ್ವದ ಇತಿಹಾಸ ಗಮನಿಸಿದರೆ ಸರ್ವಾಧಿಕಾರಿಗಳ ಧೋರಣೆಗಳ ವಿರುದ್ಧ ಮುಂಚೂಣಿಯಲ್ಲಿ ನಿಂತು ವಿದ್ಯಾರ್ಥಿಗಳ ಸಂಘಟನೆಗಳೇ ಹೋರಾಟ ನಡೆಸಿ ನಿರಂಕುಶ ಪ್ರಭುತ್ವಗಳನ್ನು ಕೊನೆಗಾಣಿಸಿವೆ. ಭಾರತದಲ್ಲಿ ಪ್ರಸ್ತುತ ಜನ ವಿರೋಧಿ ಪ್ಯಾಸಿಸ್ಟ್‌ ಸರಕಾರದ ವಿರುದ್ಧ ವಿದ್ಯಾರ್ಥಿಗಳು ಮತ್ತು ಯುವ ಸಮೂಹ ಹೋರಾಟ ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ರಾಜ್ಯಾಧ್ಯಕ್ಷ ಹತಾವುಲ್ಲಾ ಪುಂಜಲ್‌ ಕಟ್ಟೆ ಹೇಳಿದರು.

ಅವರು ಕರ್ನೂಲ್‌ ಬಾಬಾ ದರ್ಗಾ ಆವರಣದಲ್ಲಿ ಆಯೋಜಿಸಿದ್ದ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆಯ ಸದಸ್ಯತ್ವ ಅಭಿಯಾನ ಸಮಾವೇಶಕ್ಕೆ ಚಾಲನೆ ನೀಡಿ ಮಾತನಾಡಿದರು.

ನಮ್ಮ ದೇಶದ ಇತಿಹಾಸ ಗಮನಿಸಿದರೆ ಪ್ರಭುತ್ವದ ದಮನಕಾರಿ ನೀತಿಗಳ ವಿರುದ್ಧವೂ ವಿದ್ಯಾರ್ಥಿ ಮತ್ತು ಯುವ ಸಮೂಹ ಹೋರಾಟ ನಡೆಸಿ ಯಶಸ್ವಿಯಾಗಿದೆ. 2014ರಿಂದ ಸಂವಿಧಾನ ಆಶಯಗಳಿಗೆ ಮಾರಕವಾಗುವಂತಹ ಆಡಳಿತ ಜಾರಿಯಲ್ಲಿದೆ. ಪ್ರಜಾಪ್ರಭುತ್ವ ಸಂವಿಧಾನ ಬದ್ಧವಾಗಿ ಜನಪರ ಹೋರಾಟ ನಡೆಸುವವರನ್ನು ಜೈಲಿನಲ್ಲಿರಿಸಲಾಗಿದೆ. ಸಂವಿಧಾನದ ಆಶಯಗಳನ್ನು ಉಳಿಸಲು ದೇಶದ ಸಮಗ್ರತೆ ಉಳಿವಿಗಾಗಿ ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ದೇಶಾದ್ಯಂತ ವಿದ್ಯಾರ್ಥಿ ಸಂಘಟನೆಯ ಮೂಲಕ ಕಾರ್ಯ ಮಾಡಲಾಗುತ್ತಿದೆ ಎಂದರು.

ರಾಜ್ಯ ಮುಖಂಡ ಸಫìರಾಜ್‌ ಮಾತನಾಡಿ, ದೇಶದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷಗಳು ಶೈಕ್ಷಣಿಕವಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ. ಇತ್ತೀಚೆಗೆ ಪಿಎಸ್‌ಐ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಬರೀ ಅಧಿಕಾರಿಗಳು ಬಂಧನವಾಗಿದ್ದು ಇದರಲ್ಲಿ ಪಾಲ್ಗೊಂಡಿರುವ ಜನಪ್ರತಿನಿಧಿ ಗಳನ್ನು ಬಂಧಿಸಬೇಕು. ಎಲ್ಲ ಸಮಸ್ಯೆಗಳ ಕುರಿತು ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳನ್ನು ಸಂಘಟಿಸುವ ಕಾರ್ಯ ಮಾಡುತ್ತಿದೆ ಎಂದರು.

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ ರಾಜ್ಯ ಮುಖಂಡರಾದ ಅನೀಸ್‌ ಕುಂಬ್ರಾ, ಚಾಂದ ಸಲ್ಮಾನ್‌, ನಾಸೀರಾ, ಅತೀಕುರ್‌ ರಹೆಮಾನ್‌ ಸೇರಿ ಅನೇಕರಿದ್ದರು.

ಕ್ಯಾಂಪಸ್‌ ಫ್ರಂಟ್‌ ಆಫ್‌ ಇಂಡಿಯಾ ಸಂಘಟನೆ 2022-23ರ ಸದಸ್ಯತ್ವ ಅಭಿಯಾನದ ನಿಮಿತ್ತ ನಗರದ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ರ್ಯಾಲಿ ನಡೆಸುವ ಸಂದರ್ಭದಲ್ಲಿ ಕೇಂದ್ರ-ರಾಜ್ಯ ಸರಕಾರಗಳ ವಿರುದ್ಧ ಭ್ರಷ್ಟಾಚಾರ ನಡೆದಿರುವುದು, ಪಿಎಸ್‌ಐ ಹಗರಣ ಮತ್ತು ಸಂವಿಧಾನ ಪ್ರಜಾಪ್ರಭುತ್ವ ಉಳಿಸಿ ಎಂದು ಬರೆಯಲಾಗಿದ್ದ ಪ್ಲೇ ಕಾರ್ಡ್‌ ಪ್ರದರ್ಶನಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿದಾಗ ಸಂಘಟಕರು ಮತ್ತು ಪಿಐ ಟಿ. ವೆಂಕಟಸ್ವಾಮಿ ಮಧ್ಯೆ ವಾಗ್ವಾದ ಜರುಗಿತು.

ಟಾಪ್ ನ್ಯೂಸ್

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Cricket: ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಲ್ಲೇ ಖಚಿತ; ತನ್ನ ನಿರ್ಧಾರ ತಿಳಿಸಿದ ಬಿಸಿಸಿಐ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Aligarh ಮುಸ್ಲಿಮ್‌ ವಿವಿ  ಅಲ್ಪಸಂಖ್ಯಾತ ಸ್ಥಾನಮಾನ ವಿಚಾರ ಹೊಸ ಪೀಠ ನಿರ್ಧರಿಸಲಿದೆ:ಸುಪ್ರೀಂ

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ

Tragedy: KTM ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಯುವಕರು ಸ್ಥಳದಲ್ಲೇ ಮೃತ್ಯು

Tragedy: ಭೀಕರ ಬೈಕ್‌ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ

Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

Koppala: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ರೀಲ್‌ನಿಂದ ರಿಯಲ್‌ ಕೃಷಿಯತ್ತ ಚಿತ್ರೋದ್ಯಮಿ ಚಿತ್ತ; ‌ಬಸವರಾಜ ಚಿತ್ರ ಮಂದಿರದ ಮಾಲೀಕ ಕೋಳೂರು!

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

ದೋಟಿಹಾಳ: ಅನುದಾನವಿಲ್ಲದೆ ಮುಚ್ಚುವ ಹಂತಕ್ಕೆ ತಾಂಡಾ ನಿಗಮದ ಗ್ರಂಥಾಲಯಗಳು

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

10

Kaup ಒಳಚರಂಡಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಸಭೆ

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

ಬಾಗಲಕೋಟೆ: ಸರ್ಕಾರಿ ಕಚೇರಿ-ಆಶ್ರಯ ಮನೆಗಳೂ ವಕ್ಫ್ ಆಸ್ತಿ!

9

Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗ‌ಳಲ್ಲೇ ಬಸ್‌ ನಿಲುಗಡೆ; ಅನಾಹುತಕ್ಕೆ ಎಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.