![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
![Yakshagana-Academy](https://www.udayavani.com/wp-content/uploads/2025/02/Yakshagana-Academy-415x249.jpg)
Team Udayavani, Jul 27, 2022, 6:55 AM IST
ನವದೆಹಲಿ: ಪ್ರಸಕ್ತ ಸಾಲಿನಲ್ಲಿ ಮುಂಗಾರು ತೃಪ್ತಿಕರವಾಗಿದ್ದರೂ, ಭತ್ತವನ್ನು ಬೆಳೆಯುವ ಪ್ರಮಾಣದಲ್ಲಿ ಕುಂಠಿತವಾಗಿದೆ. ಕೇಂದ್ರ ಸರ್ಕಾರವೇ ಜೂ.22ರವ ವರೆಗೆ ದೇಶಾದ್ಯಂತ ವಿವಿಧ ಆಹಾರ ಬೆಳೆಗಳಿಗೆ ಸಂಬಂಧಿಸಿದ ಬಿತ್ತನೆ ವಲಯದ ಬಗ್ಗೆ ಸಿದ್ಧಪಡಿಸಿದ ಮಾಹಿತಿಯಲ್ಲಿ ಈ ಅಂಶ ವ್ಯಕ್ತವಾಗಿದೆ.
ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಮಳೆ ಪ್ರಮಾಣ ಶೇ.45ರಿಂದ ಶೇ.60 ಕೊರತೆಯಾಗಿದೆ. ಹೀಗಾಗಿ, ಆ ರಾಜ್ಯಗಳಲ್ಲಿ ಭತ್ತದ ಬಿತ್ತನೆ ಪ್ರಮಾಣ ಕಡಿಮೆಯಾಗಿದೆ.
ಆ ರಾಜ್ಯಗಳಲ್ಲಿನ ರೈತರು ಇತರ ಬೆಳೆಗಳತ್ತ ಆಸಕ್ತಿ ವಹಿಸಿರುವುದೇ ಇದಕ್ಕೆ ಕಾರಣ.ಜು.15ಕ್ಕೆ ಮುಕ್ತಾಯವಾದಂತೆ ದೇಶದ ವಿವಿಧ ಭಾಗಗಳಲ್ಲಿ 12.8 ಮಿಲಿಯ ಹೆಕ್ಟೇರ್ ಪ್ರದೇಶದಲ್ಲಿ ಪ್ರಸಕ್ತ ವರ್ಷ ಭತ್ತವನ್ನು ಬಿತ್ತನೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಬೆಳೆಯ ಪ್ರಮಾಣ ಶೇ.17ರಷ್ಟು ಕಡಿಮೆಯಾಗಿದೆ. ಈ ವರ್ಷ ಹೆಚ್ಚಿನ ಪ್ರಮಾಣದಲ್ಲಿ ಬಿಸಿಲ ಬೇಗೆಯಿಂದಾಗಿ ಗೋಧಿಯ ಬೆಳೆಯಲ್ಲಿ ಕೂಡ ಶೇ.5 ಇಳಿಕೆಯಾಗಿದೆ.
ಜು.22ಕ್ಕೆ ಮುಕ್ತಾಯವಾದಂತೆ ಬೇಳೆ-ಕಾಳುಗಳು, ರಾಗಿ, ಎಣ್ಣೆ ಬೀಜಗಳ ಬಿತ್ತನೆ ಹೇರಳವಾಗಿ ನಡೆಸಲಾಗಿದೆ. ಶೇ.6.49 ಪ್ರದೇಶದಲ್ಲಿ ಬೇಳೆ-ಕಾಳುಗಳ ಬಿತ್ತನೆ ನಡೆಸಲಾಗಿದೆ. ಶೇ.15.7ರಷ್ಟು ಪ್ರದೇಶದಲ್ಲಿ ರಾಗಿ ಬಿತ್ತನೆ ನಡೆಸಲಾಗಿದೆ. ಇದ ಹೊರತಾಗಿಯೂ ಕಳೆದ ವರ್ಷದ ಪ್ರಮಾಣಕ್ಕೆ ಹೋಲಿಕೆ ಮಾಡಿದರೆ ಕಡಿಮೆಯೇ ಎಂದು ಕೇಂದ್ರ ಕೃಷಿ ಸಚಿವಾಲಯದ ಮೂಲಗಳನ್ನು ಉಲ್ಲೇಖಿಸಿ “ದ ಹಿಂದುಸ್ತಾನ್ ಟೈಮ್ಸ್’ ವರದಿ ಮಾಡಿದೆ.
ಉಕ್ರೇನ್ ಸಂಘರ್ಷದ ಕಾರಣದಿಂದಾಗಿ ಜಗತ್ತಿನ ಕೆಲವು ಭಾಗಗಳಲ್ಲಿ ಆಹಾರದ ಕೊರತೆಯ ಅನುಭವ ಉಂಟಾಗಿರುವುದರಿಂದ ಮುಂದಿನ ವರ್ಷವನ್ನು ಗಮನದಲ್ಲಿ ಇರಿಸಿಕೊಂಡು ಹೆಚ್ಚಿನ ಪ್ರಮಾಣದಲ್ಲಿ ವಿವಿಧ ರೀತಿಯ ಆಹಾರ ವಸ್ತುಗಳ ಉತ್ಪಾದನೆ ಗರಿಷ್ಠ ಮಟ್ಟದಲ್ಲಿ ಆಗಬೇಕಾಗುವ ಅನಿವಾರ್ಯತೆ ಸೃಷ್ಟಿಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
You seem to have an Ad Blocker on.
To continue reading, please turn it off or whitelist Udayavani.