ಸೋನಿಯಾ ಗಾಂಧಿ ವಿಚಾರಣೆ ವಿರುದ್ಧ ಸಿಡಿದ ಕೈ: ರಾಹುಲ್ ಸೇರಿ 50ಕ್ಕೂ ಹೆಚ್ಚು ಸಂಸದರು ವಶಕ್ಕೆ
ರಾಷ್ಟ್ರಪತಿ ಭವನಕ್ಕೆ ತೆರಳುತ್ತಿದ್ದ ಸಂಸದರಿಗೆ ತಡೆ
Team Udayavani, Jul 26, 2022, 9:24 PM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದನ್ನು ಖಂಡಿಸಿ ಮಂಗಳವಾರ ನವದೆಹಲಿಯಲ್ಲಿ ಸಂಸದ ರಾಹುಲ್ ಗಾಂಧಿ ಸೇರಿದಂತೆ ಐವತ್ತಕ್ಕೂ ಹೆಚ್ಚು ಮಂದಿ ಸಂಸದರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿ ಎದುರು ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರು-ಕಾರ್ಯಕರ್ತರ ನಡುವೆ ಒಂದು ರೀತಿಯ ಶಕ್ತಿ ಪ್ರದರ್ಶನವೇ ನಡೆಯಿತು. ರಾಹುಲ್ ಗಾಂಧಿ ಭಾರತ ಪೊಲೀಸ್ ರಾಜ್ಯವಾಗಿದೆ ಎಂದು ಆರೋಪಿಸಿದ್ದಾರೆ.
ಸಂಸತ್ ಭವನದ ಆವರಣದಲ್ಲಿ ಇರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಿಂದ ವಿಜಯ ಚೌಕ್ ವರೆಗೆ ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಆರಂಭವಾಗಿತ್ತು. ಅವರು ರಾಷ್ಟ್ರಪತಿ ಭವನದ ವರೆಗೆ ತೆರಳಿ, ಸೋನಿಯಾ ಅವರನ್ನು ವಿನಾಕಾರಣ ಗುರಿ ಮಾಡಲಾಗುತ್ತಿದೆ ಎಂಬ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ ಮತ್ತು ಮುಂದಕ್ಕೆ ತೆರಳದಂತೆ ಮನವಿ ಮಾಡಿದ್ದಾರೆ.
ರಸ್ತೆಯಲ್ಲೇ ಕುಳಿತ ರಾಹುಲ್:
ಸರಿ ಸುಮಾರು ಮೂವತ್ತು ನಿಮಿಷಗಳ ಕಾಲ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ವಾಗ್ವಾದ ನಡೆಯಿತು. ವಯನಾಡ್ ಸಂಸದ ಪೊಲೀಸರ ಕ್ರಮ ಖಂಡಿಸಿ ರಸ್ತೆಯಲ್ಲಿಯೇ ಕುಳಿತುಬಿಟ್ಟರು. ನಂತರ ಪೊಲೀಸರು ಅವರನ್ನು ಮಾತ್ರ ಪ್ರತ್ಯೇಕ ವಾಹನದಲ್ಲಿ ಕರೆದುಕೊಂಡು ಹೋದರು. “ಭಾರತ ಈಗ ಪೊಲೀಸ್ ರಾಜ್ಯವಾಗಿದೆ. ಮೋದಿಜಿ ಅದಕ್ಕೆ ರಾಜ’ ಎಂದು ಇದೇ ಸಂದರ್ಭದಲ್ಲಿ ಆರೋಪಿಸಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ತೆರಳುವ ಉದ್ದೇಶ ನಮ್ಮದಾಗಿತ್ತು. ಅದಕ್ಕೆ ಪೊಲೀಸರು ಅವಕಾಶ ನೀಡಿಲ್ಲ ಎಂದರು ರಾಹುಲ್.
ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್ ಟ್ವೀಟ್ ಮಾಡಿ “ನಮ್ಮ ಪಕ್ಷದ ಎಲ್ಲಾ ಸಂಸದರನ್ನು ವಿಜಯ ಚೌಕ್ ಬಳಿ ತಡೆದಿದ್ದಾರೆ. ಬಸ್‌ನಲ್ಲಿ ಇರುವ ನಮ್ಮನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರಿಗೆ ಮಾತ್ರ ಗೊತ್ತಿದೆಯೇನೋ? ಎಂದು ಬರೆದುಕೊಂಡಿದ್ದರು.
ಪ್ರಿಯಾಂಕಾ ಆಕ್ರೋಶ:
ವಿಚಾರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ “ಬಿಜೆಪಿ ನಿರಂಕುಶವಾದಿಯಂತೆ ವರ್ತಿಸುತ್ತಿದೆ. ಜತೆಗೆ ಪ್ರತಿಪಕ್ಷಗಳ ನಿಲುವನ್ನು ಹತ್ತಿಕ್ಕಲು ಮುಂದಾಗಿದೆ. ಸಂಸತ್‌ನಲ್ಲಿ ಜನರ ಸಮಸ್ಯೆಗಳನ್ನು ಚರ್ಚಿಸಲು ಅವಕಾಶವೇ ನೀಡಲಾಗುತ್ತಿಲ್ಲ’ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ, ಕಾಂಗ್ರೆಸ್ ಟ್ವಿಟರ್ ಹ್ಯಾಂಡಲ್‌ನಲ್ಲಿ ಇಂದಿರಾ ಗಾಂಧಿಯವರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿದ್ದ ಫೋಟೋ ಮತ್ತು ರಾಹುಲ್ ಗಾಂಧಿ ಕುಳಿತ ಫೋಟೋ ಟ್ವೀಟ್ ಮಾಡಿದೆ. ಜತೆಗೆ “ಇತಿಹಾಸದ ಪುನರಾವರ್ತನೆಯಾಗುತ್ತಿದೆ. ಸರಪಣಿಯನ್ನು ತಾ ಮತ್ತು ನನ್ನನ್ನು ಬಂಧಿಸು’ ಎಂದು ಹಿಂದಿಯಲ್ಲಿ ಬರೆದುಕೊಳ್ಳಲಾಗಿದೆ.
ದೇಶಾದ್ಯಂತ:
ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶಾದ್ಯಂತ ವಿವಿಧ ಭಾಗಗಳಲ್ಲಿ ಸೋನಿಯಾ ವಿಚಾರಣೆ ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಶ್ರೀನಿವಾಸ್ ತಲೆಕೂದಲು ಎಳೆದ ಪೊಲೀಸರು
ಯುವ ಕಾಂಗ್ರೆಸ್ ಅಧ್ಯಕ್ಷ, ಕನ್ನಡಿಗ ಬಿ.ವಿ.ಶ್ರೀನಿವಾಸ್ ಅವರನ್ನು ಬಂಧಿಸುವ ಸಂದರ್ಭದಲ್ಲಿ ಪೊಲೀಸರು ತಲೆ ಕೂದಲು ಹಿಡಿದು ಎಳೆದಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಭಟನಾ ನಿರತ ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಅವರನ್ನು ವಶಕ್ಕೆ ಪಡೆಯುವ ವೇಳೆ ಈ ಘಟನೆ ನಡೆದಿದೆ. “ಪೊಲೀಸರು ನನ್ನನ್ನು ಹಿಡಿದು ಎಳೆದರು ಮತ್ತು ತಲೆಕೂದಲು ಹಿಡಿದು ಎಳೆದಿದ್ದಾರೆ’ ಆರೋಪಿಸಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು, ಇಂಥ ಘಟನೆಗೆ ಕಾರಣರಾದ ಸಿಬ್ಬಂದಿಯನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Supreme Court: ಬೇಕಾಬಿಟ್ಟಿ ಖಾಸಗಿ ಆಸ್ತಿ ಸ್ವಾಧೀನ ಸಲ್ಲ;ವಿಶೇಷ ಪ್ರಕರಣದಲ್ಲಷ್ಟೇ ಸ್ವಾಧೀನ
Madarsa Act: ಯುಪಿ ಮದರಸಾ ಕಾಯ್ದೆ ಸಿಂಧುತ್ವ ಎತ್ತಿಹಿಡಿದ ಸುಪ್ರೀಂ
Kharge: ಬೆಂಗಳೂರಿಗೆ ಬಂದು ನನ್ನ ಜತೆ ಚರ್ಚೆಗೆ ನಿಲ್ಲಿ: ಪ್ರಧಾನಿ ಮೋದಿಗೆ ಖರ್ಗೆ ಸವಾಲು
MUST WATCH
ಹೊಸ ಸೇರ್ಪಡೆ
Afro-Asia Cup: 2 ದಶಕಗಳ ಬಳಿಕ ಆಫ್ರೋ -ಏಷ್ಯಾ ಕಪ್?
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.