![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Jul 27, 2022, 12:02 PM IST
ಬೆಂಗಳೂರು : ಬೊಮ್ಮಾಯಿ ಈ ರಾಜ್ಯದ ಸಿಎಂ ಆಗಿ ನಾಳೆಗೆ ಒಂದು ವರ್ಷ. ಈ ಹಿನ್ನೆಲೆಯಲ್ಲಿ ಸಾಧನಾ ಸಮಾವೇಶ ಮಾಡಲು ಬೊಮ್ಮಾಯಿ ನಿರ್ಧರಿಸಿದ್ದಾರೆ ಆದರೆ ಈ ಸಮಾವೇಶ ಸರ್ಕಾರದ ಯಾವ ಸಾಧನೆಗಾಗಿ? ಗುತ್ತಿಗೆದಾರರಿಂದ 40% ಕಮೀಷನ್ ಪಡೆದಿದ್ದಕ್ಕೋ? ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದಕ್ಕೋ? ಅಥವಾ ಈಶ್ವರಪ್ಪರಿಗೆ ‘ಬಿ ರಿಪೋರ್ಟ್’ ಕೊಡಿಸಿದಕ್ಕೋ?? ಬೊಮ್ಮಾಯಿಯವರ ಒಂದು ವರ್ಷದ ಸಾಧನಾ ಸಮಾವೇಶ ಯಾವ ಪುರುಷಾರ್ಥಕ್ಕೆ? ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಪಿಎಸ್ ಐ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ ನಡೆಸಿದಕ್ಕೆ ಈ ಸಮಾವೇಶವೇ? ಬೊಮ್ಮಾಯಿಯವರು ಸಾಧನಾ ಸಮಾವೇಶ ಮಾಡುವ ಬದಲು ಹಗರಣದ ಸಮಾವೇಶ ನಡೆಸುವುದು ಸೂಕ್ತವಲ್ಲವೇ? ಹಗರಣದಿಂದಲೇ ಕುಖ್ಯಾತಿ ಗಳಿಸಿರುವ ಈ ಸರ್ಕಾರ ಯಾವ ಮುಖ ಇಟ್ಟುಕೊಂಡು ಸಾಧನೆಯ ಮಾತಾನಾಡುತ್ತಿದೆ? ಎಂದು ಪ್ರಶ್ನಿಸಿದ್ದಾರೆ.
ಸಿಎಂ ಆದ ಒಂದು ವರ್ಷದ ಅವಧಿಯಲ್ಲಿ ಬೊಮ್ಮಾಯಿಯವರು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಯಾವ ಯೋಜನೆ ತಂದಿದ್ದಾರೆ? ಹೋಗಲಿ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದಾರೆ? ಕ್ರಿಯೆಗೆ ಪ್ರತಿಕ್ರಿಯೆ ಇರಲಿದೆ ಎಂದು ಕೋಮುಗಲಭೆಗೆ ಪ್ರಚೋದಿಸಿ ಸಮಾಜ ಒಡೆದಿದ್ದು ಬೊಮ್ಮಾಯಿಯವರ ಸಾಧನೆಯೆ? ಎಂದಿದ್ದಾರೆ.
ಇದನ್ನೂ ಓದಿ: ಪ್ರವೀಣ್ ಹತ್ಯೆ: ಹಿಜಾಬ್ ಹಿಂದಿನ ಶಕ್ತಿಗಳೇ ಈ ಕೃತ್ಯದಲ್ಲಿ ಭಾಗಿ; ಆರಗ ಜ್ಞಾನೇಂದ್ರ
ಹಿಜಾಬ್, ಹಲಾಲ್ ವಿವಾದ ಸೃಷ್ಟಿಸಿದ್ದು ಸಾಧನೆಯೆ? ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಜಿಎಸ್‌ಟಿ ಬಾಕಿ ಕೊಡದೆ ಸತಾಯಿಸುತ್ತಿದೆ ಬೊಮ್ಮಾಯಿಯವರು ಎಷ್ಟು ಬಾರಿ ಕೇಂದ್ರದ ಬಳಿ ಜಿಎಸ್‌ಟಿ ಬಾಕಿ ಕೇಳಿದ್ದಾರೆ? ತಿಂಗಳಿಗೊಮ್ಮೆ ದೆಹಲಿ ಟ್ರಿಪ್ ಹೋಗುವ ಬೊಮ್ಮಾಯಿಯವರು ಒಂದೇ ಒಂದು ಸಾರಿಯಾದರೂ ಕೇಂದ್ರದಿಂದ ಆಗುತ್ತಿರುವ ಜಿಎಸ್‌ಟಿ ಅನ್ಯಾಯದ ಬಗ್ಗೆ ಬಾಯಿ ಬಿಟ್ಟಿದ್ದಾರೆಯೆ? ನಾಳೆಯ ಸಮಾವೇಶ ಯಾವ ಸಾಧನೆಗಾಗಿ? ಎಂದು ಹೇಳಿದ್ದಾರೆ.
ಬೊಮ್ಮಾಯಿ ಸಿಎಂ ಆದಾಗ ಜನರಿಗೆ ಒಂದಷ್ಟು ನಿರೀಕ್ಷೆಗಳಿದ್ದವು ಆದರೆ ಆ ನಿರೀಕ್ಷೆಗಳೆಲ್ಲಾ ಒಡೆದ ಬಲೂನ್‌ಗಳಾಗಿವೆ ಚುರುಕಿಲ್ಲದ ಆಡಳಿತ ಯಂತ್ರ, ವಿಲೇವಾರಿಯಾಗದ ಕಡತಗಳು, ಗುತ್ತಿಗೆದಾರರಿಗೆ ಬಿಡುಗಡೆಯಾಗದ ಬಿಲ್‌ಗಳು, ನೆರೆ ಪರಿಹಾರದಲ್ಲಿನ ಲೋಪ ಬೊಮ್ಮಾಯಿ ಸರ್ಕಾರದ ನಿಷ್ಕ್ರಿಯತೆಗೆ ಸಾಕ್ಷಿ. ಇಷ್ಟಾದರೂ ಸಮಾವೇಶ ಬೇಕೆ? ಎಂದು ಟ್ವೀಟ್ ಮೂಲಕ ಹೇಳಿದ್ದಾರೆ.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.