ಪ್ರವೀಣ್ ಹತ್ಯೆ ; 10 ಜನರನ್ನು ವಶಕ್ಕೆ ಪಡೆಯಲಾಗಿದೆ: ಆರಗ ಜ್ಞಾನೇಂದ್ರ
ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲೀಸರು ಸಫಲರಾಗುತ್ತಾರೆ
Team Udayavani, Jul 27, 2022, 4:21 PM IST
ಬೆಂಗಳೂರು : ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚೆ ನಡೆಸಲಾಗಿದ್ದು, ಇದುವರೆಗೆ ಹತ್ತು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬುಧವಾರ ಹೇಳಿದ್ದಾರೆ.
ಘಟನೆಗೆ ಸಂಬಂಧಪಟ್ಟಂತೆ ಸಿಎಂ ಬೊಮ್ಮಾಯಿ, ಡಿಜಿಪಿ ಪ್ರವೀಣ್ ಸೂದ್ ಹಾಗೂ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣ ಸಂಬಂಧ ಏನೆಲ್ಲ ಬೆಳವಣಿಗೆಯಾಗಿದೆ ಅದನ್ನ ಪ್ರವೀಣ್ ಸೂದ್ ವಿವರಿಸಿದ್ದಾರೆ.ಶಾಂತಿ ಸುವ್ಯವಸ್ಥೆ ಕಾಪಾಡಲು ಮನವಿ ಮಾಡಿದ್ದೇವೆ.ಸದ್ಯ 10 ಜನರನ್ನ ವಶಕ್ಕೆ ಪಡೆದಿದ್ದಾರೆ ಎಂದು ಹೇಳಿದರು.
ನಮ್ಮ ಅಧಿಕಾರಿಗಳು ಕೇರಳಕ್ಕೆ ತೆರಳಿ ಸಹ ಹುಡುಕಾಟ ಮಾಡುತ್ತಿದ್ದಾರೆ.ಪ್ರಕರಣವನ್ನು ಎನ್ಐಎಗೆ ವಹಿಸುವ ವಿಚಾರ ಸದ್ಯಕ್ಕಿಲ್ಲ. ಪ್ರಕರಣದ ತನಿಖೆ ನಡೆಯುತ್ತಿದೆ. ಅದನ್ನ ಗಮನಿಸುತ್ತೇವೆ. ಪೊಲೀಸರು ಕೊಡಬೇಕು ಅಂದರೆ ಕೊಡಲು ತಯಾರಿದ್ದೇವೆ, ಮುಂದೆ ಈ ಬಗ್ಗೆ ತೀರ್ಮಾನ ಮಾಡುತ್ತೇವೆ. ಆರೋಪಿಗಳ ಬಂಧನಕ್ಕೆ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದ್ದೇವೆ ಎಂದರು.
ಈತರಹದ ಘಟನೆ ನಡೆದಾಗ ಯಾವ ಕೇಸ್ ಸಹ ಬಿಟ್ಟಿಲ್ಲ.ಹಿಂದಿನ ಸರ್ಕಾರದಲ್ಲಿ ಕೆಲವು ಕೇಸ್ ತೆನಿಖೆ ಆಯ್ತು, ಕೆಲವು ತೆನಿಖೆ ಮಾಡಲಿಲ್ಲ.ನಮ್ಮ ಸರ್ಕಾರದಲ್ಲಿ ಎಲ್ಲವೂ ತೆನಿಖೆ ನಡೆಸುತ್ತಿದ್ದೇವೆ. ಕರಾವಳಿಯಲ್ಲಿ ಕೇರಳದಿಂದ ಬರುವುದೆಲ್ಲ ನಡೆಯುತ್ತಿದೆ. ಕೇರಳ ಸರಕಾದ ಜತೆ ನಮ್ಮ ಡಿಜಿ ಮಾತನಾಡಿದ್ದಾರೆ. ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತೇವೆ. ಅಪರಾಧಿಗಳನ್ನ ಹಿಡಿದು ತರುವಲ್ಲಿ ನಮ್ಮ ಪೊಲೀಸರು ಸಫಲರಾಗುತ್ತಾರೆ ಎಂದರು.
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿ, ಅದು ಸಹಜ ಅಮಾಯಕರ ಮೇಲೆ ಹತ್ಯೆಯಾದಗ ನೋವಾಗುತ್ತದೆ. ಮನಸ್ಸು ಕಲಕುತ್ತದೆ .ಸಿಟ್ಟು ಬರುತ್ತದೆ,ಭಾವನೆಗಳು ಕೆದುಕುತ್ತದೆ.ಆರೋಪಿಗಳನ್ನ ಬಂಧಿಸಿದ ಮೇಲೆ ಆಕ್ರೋಶ ಕಡಿಮೆಯಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.