ಕ್ರೀಮ್ ಚಿತ್ರದ ಶೂಟಿಂಗ್ ವೇಳೆ ಅವಘಡ : ನಟಿ ಸಂಯುಕ್ತಾ ಹೆಗಡೆಗೆ ಗಂಭೀರ ಗಾಯ
Team Udayavani, Jul 27, 2022, 11:14 PM IST
ಬೆಂಗಳೂರು : ಕಿರಿಕ್ ಪಾರ್ಟಿ ಖ್ಯಾತಿಯ ನಟಿ ಸಂಯುಕ್ತಾ ಹೆಗಡೆ ಅವರು ಚಿತ್ರೀಕರಣ ವೇಳೆ ಸಂಭವಿಸಿದ ಅವಘಡದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬುಧವಾರ ಸಂಜೆ ‘ಕ್ರೀಮ್’ ಚಿತ್ರದ ಶೂಟಿಂಗ್ ನಡೆಯುತ್ತಿದ್ದು ಫೈಂಟಿಂಗ್ ದೃಶ್ಯವನ್ನು ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ ಡ್ಯೂಪ್ ಬಳಕೆ ಮಾಡಲು ಚಿತ್ರತಂಡದವರು ನಿರ್ಧರಿಸಿದ್ದರು. ಆದರೆ ಇದಕ್ಕೆ ನಟಿ ಸಂಯುಕ್ತಾ ಒಪ್ಪಿರಲಿಲ್ಲ. ಹೀಗಾಗಿ, ಅವರೇ ಈ ಸ್ಟಂಟ್ ಮಾಡಲು ಮುಂದಾಗಿದ್ದು ಈ ವೇಳೆ ಅವಘಡ ಸಂಭವಿಸಿ ಬಲ ಕಾಲು ಹಾಗೂ ಹಣೆಗೆ ಗಾಯವಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.
ಅಭಿಷೇಕ್ ಬಸಂತ್ ನಿರ್ದೇಶನದ ʻಕ್ರೀಮ್ʼ ಚಿತ್ರದಲ್ಲಿ ಸಂಯುಕ್ತಾ ಹೆಗ್ಡೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಡಿ ಕೆ. ದೇವೇಂದ್ರ ಚಿತ್ರದ ನಿರ್ಮಾಪಕರಾಗಿದ್ದಾರೆ, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂಯುಕ್ತಾ ಹೆಗಡೆ ಚೇತರಿಸಿಕೊಂಡ ಬಳಿಕ ಚಿತ್ರೀಕರಣ ಮುಂದುವರೆಯಲಿದೆಯಂತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.