ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ

ಪುರಸಭೆ ಸಾಮಾನ್ಯ ಸಭೆ; 2.61 ಕೋಟಿ ರೂ. ಕ್ರಿಯಾಯೋಜನೆಗೆ ಅನುಮೋದನೆ

Team Udayavani, Jul 28, 2022, 4:59 PM IST

15

ಮಹಾಲಿಂಗಪುರ: ಪಟ್ಟಣದ ಸ್ವಚ್ಛತೆ, ಕುಡಿವ ನೀರು, ಪರಿಸರ ರಕ್ಷಣೆ ಸೇರಿದಂತೆ ಪಟ್ಟಣದ ಸಮಗ್ರ ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರಿಗೆ ಅಗತ್ಯ ಮೂಲ ಸೌಲಭ್ಯಗಳಿಗೆ ಆದ್ಯತೆ ನೀಡುವುದಾಗಿ ಪುರಸಭೆ ನೂತನ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಹೇಳಿದರು.

ಪುರಸಭೆ ಸಭಾಭವನದಲ್ಲಿ ಜರುಗಿದ ಪ್ರಥಮ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಟ್ಟಣದ 23 ವಾರ್ಡ್‌ಗಳಿಗೂ ತಾರತಮ್ಯವಿಲ್ಲದೇ ಸಮಾನವಾಗಿ ಅನುದಾನ ಹಂಚಲಾಗಿದೆ. ಇದಕ್ಕೆ ಎಲ್ಲ ಸದಸ್ಯರು ಪಕ್ಷಭೇದ ಮರೆತು ಸಹಕಾರ ನೀಡಿದ್ದು, ಬಿಜೆಪಿ ಸೇರಿದಂತೆ ಎಲ್ಲ ಸದಸ್ಯರು ಜೊತೆಗೂಡಿ ಪಟ್ಟಣ ಅಭಿವೃದ್ಧಿ ಮಾಡೋಣ ಎಂದರು.

ಕಾಂಗ್ರೆಸ್‌ ಸದಸ್ಯ ಜಾವೇದ್‌ ಬಾಗವಾನ ಮಾತನಾಡಿ, 5 ವರ್ಷಗಳ ಕಾಲ ಆಡಿಟ್‌ ಆಗದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಕಳೆದ 5 ವರ್ಷದ ಪ್ರತಿ ವಾರ್ಡಿನ ಅನುದಾನ, ಟೆಂಡರ್‌, ಕಾಮಗಾರಿಗಳ ಸಂಪೂರ್ಣ ಮಾಹಿತಿ ಕೇಳಿದರಲ್ಲದೇ, ಕಳಪೆ ಕಾಮಗಾರಿಗಳ ರಿಕವರಿ ಆಗದಿರುವ ಬಗ್ಗೆ ಆಕ್ಷೇಪಿಸಿದರು. ಕೆಲವು ಸಂಭಾವಿತ ಸದಸ್ಯರ ವಾರ್ಡ್‌ಗಳಿಗೆ ಅನುದಾನ ಸರಿಯಾಗಿ ನೀಡಿಲ್ಲವೇಕೆಂದು ಪ್ರಶ್ನಿಸಿದರು.

ಪುರಸಭೆ ಸದಸ್ಯ ಶೇಖರ ಅಂಗಡಿ ಮಾತನಾಡಿದರು. ಇದೇ ಸಂದರ್ಭದಲ್ಲಿ 15ನೇ ಹಣಕಾಸು ಯೋಜನೆಯಡಿ 1.88 ಕೋಟಿ ರೂ. ಹಾಗೂ ಎಸ್‌ ಎಫ್‌ಸಿ ನಿ ಧಿಯ 73 ಲಕ್ಷ ರೂ. ಸೇರಿದಂತೆ ಒಟ್ಟು 2.61 ಕೋಟಿ ರೂ. ಮೊತ್ತದ ಕ್ರಿಯಾಯೋಜನೆಗೆ ಅನುಮೋದಿಸಲಾಯಿತು. ಸಭೆ ಪ್ರಾರಂಭದಲ್ಲಿ ನೂತನ ರಾಷ್ಟ್ರಪತಿ, ಬುಡಕಟ್ಟು ಜನಾಂಗದ ಪ್ರಥಮ ಮಹಿಳಾ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರದ ಪ್ರಯುಕ್ತ ಸದನದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಕಣ್ಣೀರಿಟ್ಟ ಕಾವಲುಗಾರ: ಪಟ್ಟಣದ ಸ್ಮಶಾನ ಕಾವಲುಗಾರ ಯಮನಪ್ಪ ಸಾಮಾನ್ಯ ಸಭೆ ಆವರಣಕ್ಕೆ ಆಗಮಿಸಿ ನನಗೆ ವಯಸ್ಸಾಗಿದ್ದು, ಸ್ಮಶಾನ ಕಾಯುತಿದ್ದೇನೆ ಹಾಗೂ ಮನೆ ಇಲ್ಲದೇ ಆಂಜನೇಯನ ದೇವಸ್ಥಾನದಲ್ಲಿ ಜೀವನ ಸಾಗಿಸುತ್ತಿದ್ದೇನೆ, ದಯಮಾಡಿ ಮನೆ ಒದಗಿಸಿ ಎಂದು ಕಣ್ಣೀರಿಟ್ಟನು. ಇದಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಬಸವರಾಜ ಹಿಟ್ಟಿನಮಠ ಮತ್ತು ಸದಸ್ಯರು ಶೀಘ್ರ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.

ಈ ವೇಳೆ ಪುರಸಭೆ ಉಪಾಧ್ಯಕ್ಷೆ ಗೋದಾವರಿ ಬಾಟ, ಮುಖ್ಯಾಧಿ ಕಾರಿ ಜಗದೀಶ ಈಟಿ, ಸದಸ್ಯರಾದ ಯಲ್ಲನಗೌಡ ಪಾಟೀಲ, ಮುಸ್ತಾಕ್‌ ಚಿಕ್ಕೋಡಿ, ರವಿ ಜವಳಗಿ, ಸುಜಾತ ಮಾಂಗ, ಬಲವಂತಗೌಡ ಪಾಟೀಲ, ಲಕ್ಷ್ಮೀ ಮುದ್ದಾಪುರ, ಬಸಪ್ಪ ಬುರುಡ, ಸ್ನೇಹಲ ಅಂಗಡಿ, ಡಾ| ಸವಿತಾ ಕೋಳಿಗುಡ್ಡ, ಸರಸ್ವತಿ ರಾಮೋಜಿ, ಬಸವರಾಜ ಯರಗಟ್ಟಿ, ಬಿ.ಎಲ್‌. ಚಮಕೇರಿ, ರಾಜು ಗೌಡಪ್ಪಗೋಳ, ಭಾವನಾ ಪಾಟೀಲ, ಸವಿತಾ ಹುರಕಡ್ಲಿ, ಚಾಂದಿನಿ ನಾಯಕ, ಶೀಲಾ ಭಾವಿಕಟ್ಟಿ, ನಾಮ ನಿರ್ದೇಶಿತರಾದ ಜಯವಂತ ಕಾಗಿ, ಈರಪ್ಪ ಚುನಮರಿ, ಅರ್ಜುನ ಮೋಪಗಾರ, ಹನುಮಂತ ಯರಗಟ್ಟಿ, ತಿಪ್ಪಣ್ಣ ಬಂಡಿವಡ್ಡರ, ಮ್ಯಾನೇಜರ್‌ ರಾಘು ನಡುವಿನಮನಿ, ಅಭಿಯಂತರ ರಾಜ್ಯ ಚವ್ಹಾಣ, ಕಂದಾಯ ಅಧಿಕಾರಿ ಎನ್‌.ಎ. ಲಮಾಣಿ, ಎಸ್‌.ಎನ್‌. ಪಾಟೀಲ, ವಿ.ಜಿ. ಕುಲಕರ್ಣಿ, ಸಿದ್ದು ಅಳ್ಳಿಮಟ್ಟಿ, ರಾಜು ಹೂಗಾರ, ರಾಜೇಶ್ವರಿ ಸೋರಗಾವಿ, ರಾಮು ಮಾಂಗ ಇದ್ದರು.

ಟಾಪ್ ನ್ಯೂಸ್

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

1-bagalkote

Bagalkote: ಹೇರ್ ಡ್ರೈಯರ್ ಸ್ಪೋಟಗೊಂಡು ಮಹಿಳೆಯ ಎರಡು ಕೈ ತುಂಡು

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.