ಬೆಂಗಳೂರು ಬಂಟರ ಸಂಘದಲ್ಲಿ ವಿಶೇಷ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ
ಸಾಧಕರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು: ಜಯಪ್ರಕಾಶ್ ಹೆಗ್ಡೆ
Team Udayavani, Jul 28, 2022, 8:20 PM IST
ಬೆಂಗಳೂರು: ಕುಂದಾಪ್ರ ಸಂಸ್ಕೃತಿಯನ್ನ ಸದುದ್ದೇಶದಿಂದ ವಿಜೃಂಭಣೆ ಯಿಂದ ಆಚರಿಸಿ.ಆದರೆ ಮೂಲ ಆಶಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು.ಕುಂದಾಪುರ ಭಾಗದಲ್ಲಿ ಸಾಕಷ್ಟು ಜನ ಸಾಧಕರಿದ್ದಾರೆ. ಆದರೆ ಅವರನ್ನ ಕಂಡು ಖುಷಿಪಟ್ಟರಷ್ಟೇ ಸಾಲದು ಅವರಂತೆ ಆಗಲು ಪ್ರಯತ್ನಿಸಬೇಕು ಎಂದು ಬಂಟರ ಸಂಘದಲ್ಲಿ ನಡೆದ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ವೇಳೆ ಹಿಂದುಳಿದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು.
ಬೆಂಗಳೂರಿನ ಬಂಟರ ಸಂಘದ ಸಭಾಭವನದಲ್ಲಿ ವಿಶ್ವಕುಂದಾಪ್ರ ಕನ್ನಡ ದಿನವನ್ನು ವಿಶೇಷವಾಗಿ ಆಚರಿಸಲಾಯಿತು. ಕುಂದಾಪ್ರ ಕನ್ನಡ ಗೀತೆಯನ್ನು ಯುವ ಗಾಯಕಿ ಸಾನ್ವಿ ಶೆಟ್ಟಿ ಹಾಡಿ ಜನರನ್ನ ರಂಜಿಸಿದರು. ಚೇತನ್ ನೈಲಾಡಿ ನೇತೃತ್ವದಲ್ಲಿ ಹೆಂಗಸರ ಪಂಚಾಯ್ತಿ ಕಾರ್ಯಕ್ರಮದ ಮೂಲಕ ಸಂಸ್ಕೃತಿ ಬಿಂಬಿಸುತ್ತಾ ಹಾಸ್ಯದ ಮೂಲಕ ಭಾಷಿ, ಬದುಕನ್ನ ತೋರಿಸಿಕೊಟ್ಟರು.
ಕುಂದಾಪ್ರ ಕನ್ನಡದ ರಾಯಭಾರಿ ಎಂದೇ ಖ್ಯಾತಿಯಾಗಿರುವ ಮನು ಹಂದಾಡಿ ಕುಂದಾಪುರ ಭಾಷೆಯಲ್ಲಿ ಹಾಸ್ಯದ ಮೂಲಕವೇ ಭಾಷೆ ಮಹತ್ವ ಸಾರಿದರು. ತಮ್ಮ ಮಾತಿನ ಕೊನೆಯವರೆಗೂ ಪ್ರೇಕ್ಷಕರನ್ನು ನೆಗೆಗಡಲಲ್ಲಿ ತೇಲಿಸಿದರು.ಕುಂದಾಪ್ರ ಕಟ್ಕಟ್ಲೆ ಕಾರ್ಯಕ್ರಮದ ಮೂಲಕ ಈ ಭಾಗದ ಮಹತ್ವದ ಸಂಸ್ಕ್ರತಿಯನ್ನು ಪರಿಚಯಿಸಲಾಯಿತು.
ಬೆಂಗಳೂರಿನ ಹಲವರಿಗೆ ಕುಂದಾಪುರ ವೈಶಿಷ್ಟ್ಯ ವಿಭಿನ್ನ ಹಬ್ಬದ ಬಗೆಗಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನವರಾತ್ರಿಯ ಸಮಯದಲ್ಲಿನ ಕಟ್ಟೆ ಪೂಜೆ, ಹುಲಿ ವೇಷ ಆರ್ಭಟವನ್ನ ಪರಿಚಯಿಸಲಾಯಿತು. ಬಲೀಂದ್ರ ಪೂಜೆಯ ಮೌಲ್ಯವನ್ನು ಕಾರ್ಯಕ್ರಮದ ಮೂಲಕ ತಿಳಿಸಲಾಯ್ತು. ಇದೀಗ ವಿರಳವಾಗಿ ಕಾಣ ಸಿಗುವ ವಸಂತ ಕುಣಿತದ ಹೌದರಾಯನ ವಾಲಗದ ಕುಣಿತವನ್ನು ಬೆಂಗಳೂರನಲ್ಲಿ ಪ್ರದರ್ಶಿಸಿದ್ದು ವಿಶೇಷವಾಗಿತ್ತು.
ಹಾಗೇ ಭಜನಾ ಕುಣಿತವನ್ನು ಪ್ರದರ್ಶಿಸಿ ಭಕ್ತಿ ಭಾವ ಮೆರೆಯಲಾಯ್ತು.ಯಕ್ಷಗಾನ ಅಂದರೆ ಕರಾವಳಿ ಭಾಗದಲ್ಲಿ ಆರಾಧಿಸಿ ಪೂಜಿಸುವರಿದ್ದಾರೆ.ವಿಶ್ವಕುಂದಾಪ್ರ ದಿನದ ವಿಶೇಷ ಸಂದರ್ಭದಲ್ಲಿ ವೀರ ಅಭಿಮನ್ಯು ಕಾಳಗದ ಯಕ್ಷಗಾನದಲ್ಲಿ ಅಭಿಮನ್ಯುವನ್ನು ಯುದ್ದಭೂಮಿಗೆ ಸುಭದ್ರೆ ನೋವಿನಿಂದಲೇ ಕಳುಹಿಸಿಕೊಡುವ ಸಂದರ್ಭದ ಯಕ್ಷಗಾನ ತುಣುಕನ್ನು ತೋರಿಸಲಾಯಿತು. ದಿಮ್ಸಾಲ್, ತುಳಸಿ ಪೂಜೆ ಸೇರಿ ಸಂಸ್ಕೃತಿಯ ಅನಾವರಣವನ್ನು ಬೆಂಗಳೂರಿನಲ್ಲಿ ಪ್ರದರ್ಶಿಸಿಸಲಾಯಿತು. ಒಟ್ಟಿನಲ್ಲಿ ವಿಶ್ವಕುಂದಾಪ್ರ ಕನ್ನಡ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ
Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!
Communalization ಜತೆ ಆರೆಸ್ಸೆಸ್ ಆರಂಭ: ಬಿಳಿಮಲೆ ಹೇಳಿದ್ದು ವಿವಾದ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.