ಸುರತ್ಕಲ್ ನಲ್ಲಿ ದಾಳಿಗೊಳಗಾಗಿದ್ದ ಯುವಕ ಸಾವು; ಸೆಕ್ಷನ್ 144 ಜಾರಿ

ಮಂಗಳೂರಿಗೆ ಹೆಚ್ಚುವರಿ ಪೊಲೀಸರು; ಸುಳ್ಳು ಸುದ್ದಿ ಹರಡುವುದು ಬೇಡ: ಪೊಲೀಸ್ ಕಮಿಷನರ್

Team Udayavani, Jul 28, 2022, 9:23 PM IST

1-asddsadad

ಮಂಗಳೂರು : ಸುರತ್ಕಲ್ ನ ಹೃದಯ ಭಾಗದಲ್ಲಿ ಗುರುವಾರ ರಾತ್ರಿ ದುಷ್ಕರ್ಮಿಗಳಿಂದ ಮಾರಕಾಯುಧಗಳಿಂದ ದಾಳಿಗೊಳಗಾದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಕೋಮು ಉದ್ವಿಗ್ನತೆ ಇನ್ನಷ್ಟು ತೀವ್ರವಾಗಿದ್ದು, ವ್ಯಾಪಕ ಕಟ್ಟೆಚ್ಚರ ವಹಿಸಲಾಗುತ್ತಿದೆ.

ಮಂಗಳ ಪೇಟೆಯ ಫಾಝಿಲ್ (23) ಎಂಬ ಯುವಕನ ಮೇಲೆ ತಲವಾರು ದಾಳಿ ನಡೆಸಲಾಗಿತ್ತು. ನಾಳೆ ಹುಟ್ಟು ಹಬ್ಬದ ಆಚರಣೆಗೆಂದು ಚಪ್ಪಲಿ ಮತ್ತು ಸ್ಮಾರ್ಟ್ ವಾಚ್ ಖರೀದಿಗೆ ಬಂದಿದ್ದ ಫಾಝಿಲ್ ಮೇಲೆ ರಾತ್ರಿ  ಅಂಗಡಿಯ ಎದುರಿನ ಜಗಲಿಯಲ್ಲೇ ಮಾರಕಾಯುಧಗಳಿಂದ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದರು. ತಪ್ಪಿಸಿಕೊಳ್ಳಲು ಯತ್ನಿಸಿದರೂ ಸಾಧ್ಯವಾಗಲಿಲ್ಲ.

ಭಾರೀ ಪ್ರಮಾಣದಲ್ಲಿ ರಕ್ತ ಸ್ರಾವ ವಾಗಿದ್ದು, ಗಂಭೀರ ಸ್ಥಿತಿಯಲ್ಲಿರುವ ಫಾಝಿಲ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಮೊಯಿದ್ದೀನ್ ಬಾವಾ, ನಾಲ್ವರು ದುಷ್ಕರ್ಮಿಗಳು ಬಿಳಿ ಕಾರಿನಲ್ಲಿ ಬಂದು ಹತ್ಯೆ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗುತ್ತಿದ್ದು, ಪೊಲೀಸರು ಭಾರಿ ಕಟ್ಟೆಚ್ಚರ ವಹಿಸಿದ್ದಾರೆ. ಸಿಎಂ ಮಂಗಳೂರಿಗೆ ಭೇಟಿ ನೀಡಿ ಪ್ರವೀಣ್  ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಬೆಂಗಳೂರಿಗೆ ವಾಪಾಸಾಗುವ ಮುನ್ನವೇ ಕರಾವಳಿಯಲ್ಲಿ ನೆತ್ತರು ಹರಿದಿರುವುದು ಕಾನೂನು ಸುವ್ಯವಸ್ಥೆಯ ಕುರಿತು ಪ್ರಶ್ನೆ ಮೂಡಿಸುವಂತೆ ಮಾಡಿದೆ.

ಸುಳ್ಳು ಸುದ್ದಿ ಹರಡುವುದು ಬೇಡ

ನಗರ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಜಪೆ, ಪಣಂಬೂರು, ಮುಲ್ಕಿ ಮತ್ತು ಸುರತ್ಕಲ್ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗಿನ ವರೆಗೆ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾತ್ರಿ  8  ಗಂಟೆ ಸಮಯದಲ್ಲಿ ಕೃತ್ಯ ನಡೆದಿದ್ದು, ಇದಕ್ಕೆ ಕಾರಣರಾದವರನ್ನು ಆದಷ್ಟು ಬೇಗ ತನಿಖೆ ಮಾಡಿ ಪತ್ತೆ ಹಚ್ಚಲಾಗುತ್ತದೆ. ಸುಳ್ಳು ಸುದ್ದಿ ಹರಡುವುದು ಬೇಡ , ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪ್ರತ್ಯಕ್ಷ ದರ್ಶಿಗಳೊಂದಿಗೆ ಮಾತನಾಡಿ, ಆಸ್ಪತ್ರೆಗೂ ಭೇಟಿ ನೀಡಿದ್ದೇನೆ, ಯಾವೊಂದು ಕಾರಣಕ್ಕೆ ಕೃತ್ಯ ನಡೆದಿದೆ ಎನ್ನುವುದು ಸ್ಪಷ್ಟ ಇಲ್ಲ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…ಡ್ರೋನ್‌ ಏರ್‌ಟ್ಯಾಕ್ಸಿ

Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್‌ಟ್ಯಾಕ್ಸಿ-ಏನಿದರ ವಿಶೇಷ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Australia’s assistant coach to skip Perth test because of the IPL auction!

BGT 2024: ಐಪಿಎಲ್‌ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Putturu-Police

Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್‌ ಕುಮಾರ್‌ ರೈ ಭೇಟಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

PCB: Five coaches in a year; Aaqib Javed has been selected as Pakistan’s white ball coach

PCB: ಒಂದು ವರ್ಷದಲ್ಲಿ ಐದು ಕೋಚ್; ‌ಪಾಕಿಸ್ತಾನ ವೈಟ್ ಬಾಲ್ ಕೋಚ್ ಆಗಿ ಆಖಿಬ್‌ ಜಾವೇದ್ ಆಯ್ಕೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Muddebihal: ತೆರೆದ ಬಾವಿಯಲ್ಲಿ ತಾಯಿ-ಮಗಳ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.