ಉಡುಪಿ: ಸಂಘಟನೆಯ ಪ್ರಮುಖರಿಗೆ ಎಚ್ಚರ ವಹಿಸಲು ಸಂದೇಶ
Team Udayavani, Jul 29, 2022, 7:41 AM IST
ಉಡುಪಿ: ಬೆಳ್ಳಾರೆಯ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಹತ್ಯೆಯ ಅನಂತರ ಗುರುವಾರ ಸಂಜೆ ಸುರತ್ಕಲ್ನಲ್ಲಿ ಇನ್ನೋರ್ವ ಯುವಕನ ಕೊಲೆ ನಡೆದಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಪ್ರವೀಣ್ ಹತ್ಯೆಯಿಂದ ಇಡೀ ಕರಾವಳಿ ಬೆಚ್ಚಿಬಿದ್ದಿದ್ದು, ಈಗ ಮತ್ತೂಂದು ಕೊಲೆ ನಡೆದಿರುವುದರಿಂದ ಪೊಲೀಸ್ ಇಲಾಖೆ ಕೂಡ ವಿಶೇಷ ಕಾರ್ಯಾಚರಣೆ ನಡೆಸುತ್ತಿದೆ. ಹಾಗೆಯೇ ಸಂಘ ಪರಿವಾರ ಸಹಿತವಾಗಿ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದ ಇರುವಂತೆ ಹಾಗೂ ರಾತ್ರಿ ವೇಳೆಯಲ್ಲಿ ಒಬ್ಬೊಬ್ಬರಾಗಿ ಸುತ್ತಾಡದಂತೆ ಸಲಹೆ ರವಾನೆ ಮಾಡಿದೆ ಎಂದು ಹೇಳಲಾಗುತ್ತಿದೆ.
ಬೀಟ್ ವ್ಯವಸ್ಥೆ ಬಿಗಿ :
ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗ ಸೇರಿದಂತೆ ಸೂಕ್ಷ್ಮ ಪ್ರದೇಶ, ಚೆಕ್ಪೋಸ್ಟ್ಗಳಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದೆ. ಅನುಮಾನಾಸ್ಪದ ನಡೆಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾ ಗುತ್ತದೆ. ಸಾರ್ವಜನಿಕರು ಕೂಡ ಈ ಬಗ್ಗೆ ಯಾವುದೇ ಮಾಹಿತಿ ಇದ್ದರೂ ಪೊಲೀಸ್ ಇಲಾಖೆಗೆ ನೀಡಬಹುದು. ಚೆಕ್ಪೋಸ್ಟ್ಗಳಲ್ಲಿ ನಿರಂತರ ತಪಾಸಣೆ ನಡೆಯುತ್ತಿದೆ. –ಎನ್.ವಿಷ್ಣುವರ್ಧನ್, ಎಸ್ಪಿ, ಉಡುಪಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.