ರಾಜ್ಯದಲ್ಲಿ 600ಕ್ಕೂ ಹೆಚ್ಚು ಹುಲಿ?: ನಂ.1 ಸ್ಥಾನ ನಿರೀಕ್ಷೆ

ಇಂದು ವಿಶ್ವ ಹುಲಿ ದಿನ : 2021-22ರ ಹುಲಿಗಣತಿ ವರದಿ ಆ.15ರಂದು ಬಿಡುಗಡೆ ಸಾಧ್ಯತೆ ; ನಾಲ್ಕು ವರ್ಷದಲ್ಲಿ 100 ಹುಲಿ ಹೆಚ್ಚಳ

Team Udayavani, Jul 29, 2022, 11:41 AM IST

7

ಮೈಸೂರು: ಹುಲಿಗಳ ನಾಡು ಕರುನಾಡು ಎಂಬ ಖ್ಯಾತಿ ಹೊಂದಿರುವ ಕರ್ನಾಟಕ ರಾಜ್ಯ ನಾಲ್ಕು ವರ್ಷಗಳ ಬಳಿಕ ಅಗ್ರಸ್ಥಾನಕ್ಕೇರುವ ನಿರೀಕ್ಷೆಯಲ್ಲಿದೆ. ಈಗಾಗಲೇ 5ನೇ ಹುಲಿ ಗಣತಿ ವರದಿ ಕೇಂದ್ರ ಸರ್ಕಾರದ ಕೈ ಸೇರಿದ್ದು, ಆ.15ರಂದು ವರದಿ ಬಿಡುಗಡೆಯಾಗುವ ಸಾಧ್ಯತೆಯಿದೆ.

2021-22ರಲ್ಲಿ ದೇಶದ ಎಲ್ಲಾ ರಾಜ್ಯಗಳಲ್ಲೂ ನಡೆದ 5ನೇ ಹುಲಿಗಣತಿ ವರದಿ ಆ.15 ಸ್ವಾತಂತ್ರ್ಯ ದಿನಾಚರಣೆಯಂದು ಹೊರ ಬೀಳುವ ಸಾಧ್ಯತೆ ಇದ್ದು, ಈ ವರದಿ ಪ್ರಕಾರ ಕರ್ನಾಟಕ ಅಗ್ರಸ್ಥಾನ ಕಾಯ್ದುಕೊಳ್ಳುವ ಭರವಸೆ ಅಧಿಕಾರಿಗಳು ಹೊಂದಿದ್ದಾರೆ.

2019ರಲ್ಲಿ ಬಿಡುಗಡೆಯಾದ ಗಣತಿ ವರದಿಯಲ್ಲಿ 2 ಹುಲಿಗಳ ವ್ಯತ್ಯಾಸದಿಂದ ಕರ್ನಾಟಕ 2ನೇ ಸ್ಥಾನ ಅಲಂಕರಿಸಿತ್ತು. ಇದಾದ ಬಳಿಕ ಅರಣ್ಯ ಇಲಾಖೆ ಕೈಗೊಂಡ ಬಿಗಿ ಕ್ರಮ, ಬಫ‌ರ್‌ ಜೋನ್‌ ವಿಸ್ತರಣೆಯಿಂದ ರಾಜ್ಯದಲ್ಲಿ ಹುಲಿಗಳ ಸಾವು ನಿಯಂತ್ರಣಕ್ಕೆ ಬಂದಿರುವುದರ ಜೊತೆಗೆ ವ್ಯಾಘ್ರಗಳ ಸಂಖ್ಯೆ ಗಣನೀಯವಾಗಿ ಏರಿಕೆ ಕಂಡಿದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ರಾಜ್ಯದಲ್ಲಿ 600ಕ್ಕೂ ಹೆಚ್ಚು ಹುಲಿ: ಕಳೆದ ಬಾರಿಯ ಹುಲಿ ಗಣತಿಯಲ್ಲಿ ಮಧ್ಯಪ್ರದೇಶ 526 ಹುಲಿಗಳ ಹೊಂದುವ ಮೂಲಕ ಅಗ್ರಸ್ಥಾನ ಪಡೆದುಕೊಂಡರೆ, ಕರ್ನಾಟಕ 524 ಹುಲಿಗಳಿಂದ 2ನೇ ಸ್ಥಾನ ಪಡೆದು ಕೊಂಡಿತ್ತು. ಆದರೆ, ಕಳೆದ ನಾಲ್ಕು ವರ್ಷಗಳಲ್ಲಿ ನೂರಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಏರಿಕೆಯಾಗಿದ್ದು, 600ಕ್ಕೂ ಹೆಚ್ಚು ಹುಲಿಗಳು ರಾಜ್ಯದಲ್ಲಿವೆ ಎಂದು ಅಧಿಕಾರಿಗಳು ಉದಯವಾಣಿಗೆ ತಿಳಿಸಿದ್ದಾರೆ.

ಬಂಡೀಪುರ, ನಾಗರಹೊಳೆ, ಭದ್ರಾ, ಅಣಶಿ- ದಾಂಡೇಲಿ ಹಾಗೂ ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯ ಪ್ರದೇಶಗಳಲ್ಲಿ 2014ರಲ್ಲಿ ನಡೆಸಿದ ಹುಲಿ ಗಣತಿಯಲ್ಲಿ 408 ಹುಲಿಗಳು ಪತ್ತೆಯಾದರೆ, 2018ರ ಗಣತಿಯಲ್ಲಿ 524 ಹುಲಿಗಳು ಕಂಡುಬಂದಿದ್ದವು. ಈ ಬಾರಿಯ ಗಣತಿಯಲ್ಲಿ 100ಕ್ಕೂ ಹೆಚ್ಚು ಹುಲಿಗಳ ಸಂಖ್ಯೆ ಏರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.

ಹುಲಿ ಸಾವಿನಲ್ಲಿ ಮೂರನೇ ಸ್ಥಾನ: ದೇಶದಲ್ಲಿಯೇ ಅತಿ ಹೆಚ್ಚು ಹುಲಿಗಳು ಸಾವನ್ನಪ್ಪಿರುವ ರಾಜ್ಯಗಳ ಪೈಕಿ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಹುಲಿಗಳ ರಾಜ್ಯ ಎಂದೇ ಖ್ಯಾತಿ ಪಡೆದಿದ್ದ ಮಧ್ಯಪ್ರದೇಶದಲ್ಲಿ ಒಂದೇ ವರ್ಷದಲ್ಲಿ 74 ಹುಲಿಗಳು ಮೃತಪಟ್ಟಿವೆ. ಈ ಮೂಲಕ ಹುಲಿಗಳ ಸಾವಿನಲ್ಲೂ ಮಧ್ಯಪ್ರದೇಶ ಅಗ್ರಸ್ಥಾನ ಪಡೆದುಕೊಂಡಿದೆ. ಉಳಿದಂತೆ ಮಹಾರಾಷ್ಟ್ರದಲ್ಲಿ 15, ಕರ್ನಾಟಕದಲ್ಲಿ 11 ಹಾಗೂ ಅಸ್ಸಾಂನಲ್ಲಿ 03 ಹುಲಿ ಗಳು ಮೃತಪಟ್ಟಿವೆ ಎಂದು ರಾಷ್ಟ್ರೀಯ ಹುಲಿ ಸಂರ ಕ್ಷಣಾ ಪ್ರಾಧಿಕಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಹುಲಿ ರಾಜ್ಯಕ್ಕಾಗಿ ಪೈಪೋಟಿ: ದೇಶದಲ್ಲಿ ಹುಲಿಗಣತಿ ಆರಂಭವಾದಗಿನಿಂದಲೂ ಹುಲಿರಾಜ್ಯ ಪಟ್ಟಕ್ಕಾಗಿ ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ಪೈಪೋಟಿ ನಡೆಯುತ್ತಿದೆ. 2006ರಲ್ಲಿ ಮಧ್ಯ ಪ್ರದೇಶ 300 ಹುಲಿಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಕರ್ನಾಟಕ 290 ಹುಲಿ ಹೊಂದುವ ಮೂಲಕ 2ನೇ ಸ್ಥಾನದಲ್ಲಿತ್ತು. ಬಳಿಕ 2010ರ ವರದಿಯಲ್ಲಿ ಕರ್ನಾಟಕ 300 ಹುಲಿಗಳ ಮೂಲಕ ಅಗ್ರಸ್ಥಾನಕ್ಕೇರಿದರೆ, 257 ಹುಲಿಗಳೊಂದಿಗೆ ಮಧ್ಯಪ್ರದೇಶ 2ನೇ ಸ್ಥಾನಕ್ಕೆ ಕುಸಿದಿತ್ತು. ನಂತರ 2014 ಹುಲಿ ಗಣತಿಯಲ್ಲಿ ಕರ್ನಾಟಕ ರಾಜ್ಯ 406 ಹುಲಿಗಳನ್ನು ಹೊಂದುವ ಮೂಲಕ ಮತ್ತೆ ಅಗ್ರಸ್ಥಾನ ಕಾಯ್ದುಕೊಂಡರೆ, ಮಧ್ಯಪ್ರದೇಶದಲ್ಲಿ 308 ಹುಲಿಗಳ ಮೂಲಕ 2ನೇ ಸ್ಥಾನದಲ್ಲಿಯೇ ಉಳಿದಿತ್ತು. ಆದರೆ, 2018ರ ಹುಲಿಗಣತಿಯಲ್ಲಿ ಮಧ್ಯಪ್ರದೇಶ ಪರಿಣಾಮಕಾರಿಯಾಗಿ ಕ್ಯಾಮೆರಾ ಟ್ರ್ಯಾಪ್‌ ಬಳಸಿ ಹುಲಿ ಗಣತಿ ಮಾಡಿದ್ದರಿಂದ 2019ರ ವರದಿಯಲ್ಲಿ 526 ಹುಲಿಗಳೊಂದಿಗೆ ಮೊದಲ ಸ್ಥಾನಕ್ಕೆ ಏರಿತ್ತು.

ಸಧ್ಯಕ್ಕೆ ಕರ್ನಾಟಕದಲ್ಲಿ ಈ ಬಾರಿ ಬಫ‌ರ್‌ ಜೋನ್‌ ನಲ್ಲಿಯೂ ಅರಣ್ಯ ಇಲಾಖೆ ಕ್ಯಾಮೆರಾ ಅಳವಡಿಸಿ ಯಶಸ್ವಿಯಾಗಿ ಹುಲಿ ಗಣತಿ ನಡೆಸಿದ್ದು, ಅಂದಾಜು 610ಕ್ಕೂ ಹೆಚ್ಚು ಹುಲಿಗಳಿರುವ ಬಗ್ಗೆ ತಿಳಿದುಬಂದಿದೆ.

ಭಾರತದಲ್ಲಿ ಶೇ.70 ಹುಲಿ: ಜಾಗತಿಕ ಮಟ್ಟದ ಹುಲಿ ಗಣತಿ ವರದಿ ಪ್ರಕಾರ ಜಗತ್ತಿನಲ್ಲಿ 4500ಕ್ಕೂ ಹೆಚ್ಚು ಹುಲಿಗಳಿದ್ದು, ಈ ಪೈಕಿ ಶೇ.70 ಭಾರತದಲ್ಲಿರುವುದು ಗಮನಾರ್ಹ. 2019ರ ವರದಿ ಪ್ರಕಾರ ದೇಶದಲ್ಲಿ 2967 ಹುಲಿಗಳಿದ್ದು, ಮಧ್ಯಪ್ರದೇಶದಲ್ಲಿ 526, ಕರ್ನಾಟಕದಲ್ಲಿ 524, ಉತ್ತರಾಖಂಡ-442, ಮಹಾರಾಷ್ಟ್ರ-312, ತಮಿಳುನಾಡು-262 ಹುಲಿಗಳನ್ನು ಹೊಂದಿದ್ದವು. ಆದರೆ, ಈ ಬಾರಿ ಗಣತಿಯಲ್ಲಿ ಹುಲಿಗಳ ಪ್ರಮಾಣ ಮತ್ತಷ್ಟು ಹೆಚ್ಚಾಗಿದೆ ಎಂದು ಅಂದಾಜಿಸಲಾಗಿದೆ.

ಪ್ರತಿ 4 ವರ್ಷಕೊಮ್ಮೆ ದೇಶದಲ್ಲಿ ಹುಲಿ ಗಣತಿ ನಡೆಸಲಾಗುತ್ತಿದೆ. ರಾಜ್ಯದಲ್ಲೂ ಹುಲಿ ಸಂರಕ್ಷಿತ ಪ್ರದೇಶ, ರಾಷ್ಟ್ರೀಯ ಉದ್ಯಾನಗಳಲ್ಲೂ 2021-22ರಲ್ಲಿ ಹುಲಿ ಗಣತಿ ನಡೆಸಲಾಗಿದೆ. 60 ಲಕ್ಷ ಫೋಟೋ ಎನ್‌ಟಿಸಿಗೆ ನೀಡಿದ್ದೇವೆ. ಈ ಆಧಾರದ ಮೇಲೆ ಎಷ್ಟು ಹುಲಿಗಳಿವೆ ಎಂಬುದನ್ನು ಕೇಂದ್ರ ಸರ್ಕಾರ ಶೀಘ್ರ ಪ್ರಕಟಿಸಲಿದೆ. ನಮ್ಮಲ್ಲಿ ಹುಲಿ ಸಂಖ್ಯೆ ಹೆಚ್ಚಿರುವುದು ಕಂಡು ಬಂದಿದೆ. –ಕುಮಾರ್‌ ಪುಷ್ಕರ್‌, ಅಪರ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ವನ್ಯಜೀವಿ).

ದೇಶದಲ್ಲಿ ಹುಲಿ ಆವಾಸಸ್ಥಾನವನ್ನು ಸಮರ್ಪ ಕವಾಗಿ ನಿರ್ವಹಿಸಿದ್ದರೆ 10 ರಿಂದ 15 ಸಾವಿರ ಹುಲಿ ಇರುತ್ತಿದ್ದವು. ಆದರೆ, ಇಲಾಖೆ ಆ ಕೆಲಸ ಮಾಡದೇ ಕೇವಲ 3 ಸಾವಿರ ಹುಲಿ ತೋರಿಸಿ, ನಮ್ಮಲ್ಲೇ ಹುಲಿ ಇವೆ ಎಂದು ಬಿಂಬಿಸಿಕೊಳ್ಳುತ್ತಿರುವುದು ಅರ್ಥಹೀನ. – ಉಲ್ಲಾಸ್‌ ಕಾರಂತ್‌, ವನ್ಯಜೀವಿ ತಜ್ಞರು.

● ಸತೀಶ್‌ ದೇಪುರ

ಟಾಪ್ ನ್ಯೂಸ್

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

8-udupi

Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್‌.ಆರ್‌.

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.