ಮಳೆಗಾಲದಲ್ಲಿ ರಸ್ತೆಗಳ ಬಣ್ಣ ಬಯಲು; ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳು

ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ.

Team Udayavani, Jul 29, 2022, 6:21 PM IST

ಮಳೆಗಾಲದಲ್ಲಿ ರಸ್ತೆಗಳ ಬಣ್ಣ ಬಯಲು; ಕಳಪೆ ಕಾಮಗಾರಿಯಿಂದ ರಸ್ತೆಗಳು ಹಾಳು

ಬಂಗಾರಪೇಟೆ: ಹಾಕಿದ ಬಣ್ಣ ಮಳೆ ನೀರಿನಲ್ಲಿ ಕಳಚಿ ಹೋಗುತ್ತದೆ ಎಂಬ ಗಾದೆ ಮಾತಿನಂತೆ ಗ್ರಾಮೀಣ ಪ್ರದೇಶದ ರಸ್ತೆಗಳ ಬಣ್ಣ ಸಹ ಮಳೆಗಾಲದಲ್ಲಿ ಬಯಲಿಗೆ ಬರಲಿದೆ ಎಂಬುದಕ್ಕೆ ಪಟ್ಟಣದಿಂದ ಬಂಗಾರಪೇಟೆಯಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆಯೇ ಸಾಕ್ಷಿಯಾಗಿದೆ.

ಪಟ್ಟಣದಿಂದ ಕೇವಲ 15 ಕಿ.ಮೀ ದೂರವಿರುವ ಕಾಮಸಮುದ್ರ ಹೋಬಳಿ ಕೇಂದ್ರಕ್ಕೆ ಹೋಗುವ ಮುಖ್ಯ ರಸ್ತೆ ಅರ್ಧದಷ್ಟು ಭಾಗ ಸಂಪೂರ್ಣ ಹಾಳಾಗಿ, ವಾಹನಗಳ ಸಂಚಾರಕ್ಕೆ ಸಂಚಕಾರ ತಂದಿದೆ. ಒಂಡೆದೆ ಲೋಕೋಪಯೋಗಿ ಇಲಾಖೆ ಅನುದಾನ ಕೊರತೆಯ ನಡುವೆಯೂ ಗ್ರಾಮೀಣ ರಸ್ತೆ ಹಾಗೂ ಪ್ರಮುಖ ರಸ್ತೆಗಳಿಗೆ ಡಾಂಬರು ಭಾಗ್ಯ ಕಾಣಿಸಿ, ರಸ್ತೆಗಳ ಗುಣಮಟ್ಟಕ್ಕೆ ಶ್ರಮಿಸುತ್ತಿದ್ದರೆ. ಮತ್ತೂಂದೆಡೆ ಗುತ್ತಿಗೆದಾರರ ಕಳಪೆ ಕಾಮಗಾರಿಯಿಂದ ಡಾಂಬರು
ಕಂಡ ರಸ್ತೆಗಳು, ಕೆಲವೇ ತಿಂಗಳಲ್ಲಿ ಮತ್ತೆ ಹಳೇ ಸ್ಥಿತಿಗೆ ಮರುಳುತ್ತಿರುವುದು ವಿಪರ್ಯಾಸವಾಗಿದೆ ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

ವಾಹನ ಸವಾರರ ಪರದಾಟ: ಪಟ್ಟಣದಿಂದ ಕಾಮಸಮುದ್ರಕ್ಕೆ ಹೋಗುವ ರಸ್ತೆ ದಿನ್ನಕೊತ್ತೂರು ಗ್ರಾಮದ ಬಳಿ ಸಂಪೂರ್ಣ ಹಾಳಾಗಿ, ಹಳ್ಳಗಳಿಂದ ಕೂಡಿದೆ. ಮೊದಲೇ ವಾಹನಗಳ ಸಂಚಾರಕ್ಕೆ ಸಾಹಸ ಮಾಡಿಕೊಂಡು ಹೋಗಬೇಕು. ಇನ್ನು ಮಳೆ ಬಂದರಂತೂ ಯಾವುದು ರಸ್ತೆ, ಯಾವುದು ಹಳ್ಳ ಎಂಬ ವ್ಯತ್ಯಾಸ ತಿಳಿಯದೆ ವಾಹನ ಸವಾರರು ಪರದಾಡುವಂತಾಗಿದೆ. ಈ ರಸ್ತೆಯನ್ನು ಇದುವರೆಗೂ 10 ಬಾರಿ ತೇಪೆ ಕೆಲಸ ಮಾಡಲಾಗಿದೆ. ಆದರೆ, ಅದು ಕೇವಲ ವಾರದೊಳಗೆ ಕಿತ್ತು ಮತ್ತೆ ಹಳೇ ಸ್ಥಿತಿಗೆ ಬಂದರೂ, ಲೋಕೋಪಯೋಗಿ ಇಲಾಖೆ ಮಾತ್ರ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ.

ಇದೇ ಮಾರ್ಗದಲ್ಲಿ ಪರವನಹಳ್ಳಿ ಕೆರೆ ಕಟ್ಟೆ ಬಳಿ ಹಾಗೂ ಪುತ್ರಸೊಣ್ಣೆನಹಳ್ಳಿ ಬಳಿಯಂತೂ ಹೇಳ ತೀರದಾಗಿದೆ. ವರದಾಪುರ ಗೇಟ್‌ ಬಳಿಯೂ ವಾಹನಗಳ ಸವಾರರು ಜನಪ್ರತಿನಿಧಿಗಳನ್ನು ಶಪಿಸಿಕೊಂಡೇ ಹೋಗುವುದು ನಿತ್ಯ ಕಾಯಕವಾಗಿದೆ.

ಎಂಜಿನಿಯರ್‌ ಬರುವುದೇ ಅಪರೂಪ: ರಾತ್ರಿ ವೇಳೆ ರಸ್ತೆ ಮಧ್ಯದಲ್ಲಿರುವ ಗುಂಡಿಗಳು ತಿಳಿಯದೆ ಹಲವು ದ್ವಿಚಕ್ರ ವಾಹನಗಳ ಸವಾರರು ಬಿದ್ದು, ಗಾಯ ಗೊಂಡಿರುವ ಉದಾಹರಣೆಗಳಿವೆ. ಇಲ್ಲಿನ ಸಹಾಯಕ ಎಂಜಿನಿಯರ್‌ ಆಗಿರುವ ಚಂದ್ರಯ್ಯ ಕಚೇರಿಗೆ ಬರುವುದೇ ಅಪರೂಪವಾಗಿದೆ. ಯಾವುದಾದರೂ ಕಾಮಗಾರಿ ಬಿಲ್‌ ಮಾಡಬೇಕಾದರೆ ಮಾತ್ರ ಕಚೇರಿ ಸಿಗಲಿದ್ದಾರೆ ಎಂದು ಆರೋಪ ಕೇಳಿ ಬರುತ್ತಿದೆ.

ಕಳಪೆ ಕಾಮಗಾರಿ ಕಂಡರೆ ಅಂತಹ ಗುತ್ತಿಗೆ ದಾರರನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಹಲವು ಬಾರಿ ಶಾಸಕರು ಹೇಳಿದ್ದರೂ ಇದುವರೆಗೂ ಯಾವ ಗುತ್ತಿಗೆದಾರರು ಅಂತಹ ಪಟ್ಟಿಯಲ್ಲಿ ಹೆಸರು ಪಡೆದಿಲ್ಲ. ರಸ್ತೆಗಳು ಮಾತ್ರ ಕಳಪೆ ಕಾಮಗಾರಿಯಿಂದ ಕೂಡಿರುವುದು ಕಣ್ಣಿಗೆ ರಾಚುತ್ತಿದೆ. ಇನ್ನಾದರೂ ಅಧಿಕಾರಿಗಳು ಗುಣಮಟ್ಟದ ರಸ್ತೆಗಳಿಗೆ ಆದ್ಯತೆ ನೀಡಲಿ, ಅವ್ಯವಸ್ಥೆಯಿಂದ ಕೂಡಿರುವ ರಸ್ತೆಗಳಿಗೆ ಮೋಕ್ಷ ಕಲ್ಪಿಸಿ, ವಾಹನಗಳು ಮುಕ್ತವಾಗಿ ಸಂಚರಿಸಲು ಅನುವು ಮಾಡಿಕೊಡಲಿ ಎಂಬುದು ವಾಹನ ಸವಾರರು ಒತ್ತಾಯಿಸಿದ್ದಾರೆ.

ಹಲವು ಬಾರಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇದೊಂದೇ ಸ್ಥಳದಲ್ಲಿ ತೇಪೇ ಕೆಲಸ ಮಾಡಿದ್ದರೂ ಪ್ರಯೋಜನವಾಗುತ್ತಿಲ್ಲ. ಈ ಜಾಗದಲ್ಲಿ ಹಲವು ಬಾರಿ ಅಪಘಾತಗಳು ಸಂಭವಿ ಸಿದ್ದರೂ ಇದುವರೆಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಸಾರ್ವಜನಿಕರು ಹೇಳಿ ಹೇಳಿ ಸಾಕಾಗಿದೆ.
●ಕೆ.ಎಂ.ಮಂಜುನಾಥ್‌,
ಮಾಜಿ ಅಧ್ಯಕ್ಷ, ಕೆಸರನಹಳ್ಳಿ ಗ್ರಾಪಂ

ಆಯ್ದ ಭಾಗಗಳಲ್ಲಿ ರಸ್ತೆ ಅಭಿವೃದ್ಧಿಗೆ 8 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ರಸ್ತೆ ಅಭಿವೃದ್ಧಿಯನ್ನು ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (ಎಸ್‌ಎಚ್‌ಡಿಪಿ) ಇವರು ನಿರ್ವಹಣೆ ಮಾಡಲಿದ್ದಾರೆ. ಈ ಕಾಮಗಾರಿಯು ಶೀಘ್ರದಲ್ಲೇ ಆರಂಭಗೊಳ್ಳಲಿದೆ.
●ಎಂ.ಸರಸ್ವತಿ, ಎಇಇ, ಲೋಕೋಪಯೋಗಿ
ಇಲಾಖೆ, ಬಂಗಾರಪೇಟ

●ಎಂ.ಸಿ.ಮಂಜುನಾಥ್‌

ಟಾಪ್ ನ್ಯೂಸ್

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

2

Puttur: ಚೆನ್ನಾಗಿ ಮಳೆ ಬಂದರೂ ಕುಸಿದ ಅಂತರ್ಜಲ ಮಟ್ಟ

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

1

Belthangady: ಕಡೆಗೂ ಬಂತು ಇಂದಿರಾ ಕ್ಯಾಂಟೀನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.