ಸಿಎಂ ಭೇಟಿ ಮಾಡಿದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್
ಸೈಬರ್ ಸುರಕ್ಷತಾ ನೀತಿ ಮತ್ತು ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ
Team Udayavani, Jul 29, 2022, 7:09 PM IST
ಬೆಂಗಳೂರು: ಆಸ್ಟೇಲಿಯಾದ ನ್ಯೂ ಸೌತ್ ವೇಲ್ಸ್ ಪ್ರೀಮಿಯರ್ ಡೊಮಿನಿಕ್ ಪೆರೊಟ್ವೆಟ್ ಅವರ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿತು.
ಆಸ್ಟ್ರೀಲಿಯಾ ಸರ್ಕಾರವು ಇಂಡಿಯಾ ಆರ್ಥಿಕ ಕಾರ್ಯತಂತ್ರಕ್ಕಾಗಿ 280 ಮಿಲಿಯನ್ ಡಾಲರ್ ಗಳ ಅನುದಾನವನ್ನು ಒದಗಿಸಿದೆ. ಭಾರತದೊಂದಿಗೆ ಆರ್ಥಿಕ ಪಾಲುದಾರಿಕೆಯನ್ನು ವೃದ್ಧಿಸಲು ಈ ಕಾರ್ಯತಂತ್ರ ಸಹಕಾರಿಯಾಗಲಿದೆ ಎಂದು ಡೊಮಿನಿಕ್ ಪೆರೊಟ್ವೆಟ್ ತಿಳಿಸಿದರು.
ಕರ್ನಾಟಕದಲ್ಲಿ ಸೈಬರ್ ಸುರಕ್ಷತಾ ನೀತಿ ಹಾಗೂ ಶ್ರೇಷ್ಠತಾ ಕೇಂದ್ರಗಳ ಬಗ್ಗೆ ಉತ್ಸುಕತೆ ತೋರಿದ ಅವರು ಆಸ್ಟ್ರೇಲಿಯಾ ಬೆಂಗಳೂರು ಟೆಕ್ ಸಮ್ಮಿಟ್ ನಲ್ಲಿ ಆಸ್ಟ್ರೇಲಿಯಾ ಸತತವಾಗಿ ನಾಲ್ಕು ವರ್ಷಗಳೂ ಭಾಗಿಯಾಗಿದೆ. ಈ ವರ್ಷವೂ ಭಾಗವಹಿಸಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಗತ್ತಿನ ವಿವಿಧ ದೇಶಗಳ ಮುಖ್ಯಸ್ಥರು ಹಿಂದೆ ನವದೆಹಲಿಗೆ ಭೇಟಿ ನೀಡುತ್ತಿದ್ದರು. ಆದರೆ ಈಗ ಅವರೆಲ್ಲರೂ ಬೆಂಗಳೂರಿಗೆ ಇನ್ಫೋಸಿಸ್ ಹಾಗೂ ವಿಪ್ರೋ ಮುಂತಾದ ಸಂಸ್ಥೆಗಳಿಗೆ ಭೇಟಿ ನೀಡುತ್ತಾರೆ. ಜ್ಞಾನವೇ ಶಕ್ತಿ ಎನ್ನುವುದು ಈ ಮೂಲಕ ನಿರೂಪಿತವಾಗಿದೆ. ಕರ್ನಾಟಕ ರಾಜ್ಯ ಆರ್ ಅಂಡ್ ಡಿ, ಜೆನಿಟಿಕ್ಸ್, ಏರೋಸ್ಪೇಸ್, ಶಿಕ್ಷಣ ಆರೋಗ್ಯ, ನಾವೀನ್ಯತೆ, ಎಲೆಕ್ಟ್ರಿಕ್ ವೆಹಿಕಲ್, ಮುಂತಾದ ವಲಯಗಳಲ್ಲಿ ಮುಂಚೂಣಿಯಲ್ಲಿದ್ದು ಹೂಡಿಕೆಗಳಿಗೆ ಪ್ರಶಸ್ತ ಸ್ಥಳ ಎಂದು ವಿವರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಣೆ ಕಾಣುತ್ತಿದ್ದು, ರಸ್ತೆ ಸಂಪರ್ಕಗಳು ಉತ್ತಮಗೊಂಡಿವೆ. ಶಾಲೆ, ಆರೋಗ್ಯ ಹಾಗೂ ಡಿಜಿಟಲ್ ಸಂಪರ್ಕಗಳನ್ನೂ ಇನ್ನೂ ಹೆಚ್ಚಿನ ರೀತಿಯಲ್ಲಿ ಸುಧಾರಿಸಲು ನಮ್ಮ ಸರ್ಕಾರ ಕ್ರಮಗಳನ್ನು ಕೈಗೊಂಡಿದೆ ಎಂದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳ ಮಧ್ಯೆ ಅಸಮಾನತೆ ಇದ್ದು, ಅದರ ನಿವಾರಣೆಗೆ ಸರ್ಕಾರ ನಿರ್ದಿಷ್ಟ ಕ್ರಮಗಳನ್ನು ಕೈಗೊಂಡಿದೆ. ಗ್ರಾಮೀಣ ಪ್ರದೇಶದಲ್ಲಿರುವವರಿಗೆ ಉದ್ಯೋಗಾವಕಾಶಗಳನ್ನು ಒದಗಿಸಿ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸುವುದು ನಮ್ಮ ಗುರಿ ಎಂದರು.
ಕರ್ನಾಟಕ ಸಂಪದ್ಭರಿತ ರಾಜ್ಯವಾಗಿದ್ದು, ಹತ್ತು ಕೃಷಿ ಹವಾಮಾನ ವಲಯಗಳನ್ನು ಹೊಂದಿದೆ. ಇಲ್ಲಿನ ಜನ ಉದ್ಯಮಶೀಲರಾಗಿದ್ದಾರೆ ಎಂದರು. ಬೆಂಗಳೂರಿನಲ್ಲಿರಬಹುದಾದ ಸವಾಲುಗಳ ಬಗ್ಗೆ ಡೊಮಿನಿಕ್ ಪೆರೊಟ್ವೆಟ್ ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬೆಂಗಳೂರಿನ ವಾಹನಗಳ ಸಂಖ್ಯೆ ಹಾಗೂ ಸಂಚಾರ ದಟ್ಟಣೆ ಸವಾಲುಗಳಾಗಿವೆ. ಸಂಚಾರ ದಟ್ಟಣೆಯನ್ನು ನಿವಾರಿಸಲು ಸಬ್ ಅರ್ಬನ್ ರೈಲು ಹಾಗೂ ಮೆಟ್ರೋ ಯೋಜನೆಗಳು ಸಹಕಾರಿಯಾಗಿವೆ ಎಂದರು.
ನಿಯೋಗದಲ್ಲಿ ಆಸ್ಟ್ರೇಲಿಯಾ ಕೌನ್ಸಿಲ್ ಜನರಲ್ ಸಾರಾ ಕಿಲ್ರ್ಯೂ, ಮೈಕಲ್ ಕೌಟ್ಸ್ ಟ್ರಾಟ್ಟರ್, ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.