ಚಿಕ್ಕೋಡಿ: ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಜ್ಜು

ಯಡೂರ- ಚೆಂದೂರ ಭಾಗದಲ್ಲಿ ಚಿರತೆ ಪ್ರತ್ಯಕ್ಷ ; ಮೂರ್‍ನಾಲ್ಕು ನಾಯಿ-ಮೇಕೆ ಮೇಲೆ ದಾಳಿ

Team Udayavani, Jul 30, 2022, 2:57 PM IST

12

ಚಿಕ್ಕೋಡಿ: ಕೃಷ್ಣಾ ನದಿ ತಟದ ಚೆಂದೂರ, ಯಡೂರ ಮತ್ತು ಯಡೂರವಾಡಿ ಗ್ರಾಮದ ವ್ಯಾಪ್ತಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಳೆದ ಒಂದು ವಾರದಿಂದ ಜನ ಭಯ ಭೀತಿಯಲ್ಲಿದ್ದು, ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಕೃಷ್ಣಾ ನದಿ ತೀರದ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಚಿರತೆ ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದೆ ಎಂದು ಜನ ಅಲ್ಲಲ್ಲಿ ಮಾತನಾಡುವುದು ಕಂಡು ಬಂದಿತ್ತು. ಕುರಿ, ಆಡು ಮತ್ತು ನಾಯಿ ಮೇಲೆ ದಾಳಿ ಮಾಡಿದ ಮೇಲೆ ಚಿರತೆ ಇರುವುದು ಖಚಿತವಾಗಿತ್ತು. ಈಗಾಗಲೇ ಮೂರು ಗ್ರಾಮದಲ್ಲಿ ಎರಡರಿಂದ ಮೂರು ನಾಯಿ ಮತ್ತು ಮೇಕೆಗಳನ್ನು ಎಳೆದು ತಿಂದಿರುವುದು ಖಚಿತವಾಗಿದೆ.

ಸುದ್ದಿ ತಿಳಿದ ಕೂಡಲೇ ಚಿಕ್ಕೋಡಿ ಅರಣ್ಯ ಇಲಾಖೆ ಸಿಬ್ಬಂದಿಗಳು ಚೆಂದೂರ. ಚಂದೂರ ಟೇಕ ಮತ್ತು ಯಡೂರ ಗ್ರಾಮದಲ್ಲಿ ಸಂಚರಿಸಿ ಪರಿಶೀಲಿಸಿದ್ದು. ಚಿರತೆಯ ಹೆಜ್ಜೆ ಗುರ್ತು ಕಾಣಿಸಿವೆ. ನಿನ್ನೆ ರಾತ್ರಿ ಚಿರತೆ ನಾಯಿ ಮೇಲೆ ದಾಳಿ ಮಾಡಿರುವ ವಿಡಿಯೋ ವೈರಲ್‌ ಆಗಿದೆ. ಇದರಿಂದ ಅರಣ್ಯ ಇಲಾಖೆ ಸಿಬ್ಬಂದಿಗಳು ಮೂರು ಗ್ರಾಮದಲ್ಲಿ ಚಿರತೆ ಹಿಡಿಯುವ ಮೂರು ಬೋನ್‌ ಇಟ್ಟು ಹಿಡಿಯಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ರಾತ್ರಿ ಹೊತ್ತು ಜನರು ಹೊರಬರದಂತೆ ಡಂಗೂರ: ರಾತ್ರಿ ಹೊತ್ತು ಒಬ್ಬೊಬ್ಬರಾಗಿ ತಿರುಗಾಡಬಾರದೆಂದು ಆಯಾ ಗ್ರಾಮ ಪಂಚಾಯತಿ ವತಿಯಿಂದ ಡಂಗೂರ ಸಾರಿದ್ದಾರೆ. ಕೃಷ್ಣಾ ನದಿ ನೀರಿನ ಮಟ್ಟ ಇಳಿಕೆ ಕಂಡಿರುವುದರಿಂದ ಜಮೀನಿಗೆ ನೀರಿನ ಪಂಪ್‌ಸೆಟ್‌ ಚಾಲು ಮಾಡಲು ರೈತರು ಹೊಲಗಳತ್ತ ಹೋಗುತ್ತಾರೆ. ಚಿರತೆ ಇರುವುದರಿಂದ ಜನ ಆತಂಕಗೊಂಡಿದ್ದು. ರಾತ್ರಿ ಹೊತ್ತು ನಾಲ್ಕೈದು ಜನ ಕೂಡಿಕೊಂಡು ಹೊರಗೆ ಹೋಗಬೇಕೆಂದು ಡಂಗೂರ ಸಾರಿದ್ದಾರೆ. ‌

ಶೀಘ್ರವಾಗಿ ಹಿಡಿಯುತ್ತೇವೆ: ಯಡೂರ, ಚೆಂದೂರ ಮತ್ತು ಚೆಂದೂರ ಟೇಕ ಗ್ರಾಮಗಳಲ್ಲಿ ಚಿರತೆ ಇರುವುದು ನಿಜ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಎಲ್ಲ ಕ್ರಮ ಕೈಗೊಂಡಿದೆ. ಬೋನು ಮತ್ತು ಕ್ಯಾಮೆರಾ ಅಳವಡಿಸಿದ್ದು, ಶೀಘ್ರವಾಗಿ ಚಿರತೆ ಹಿಡಿಯುತ್ತೇವೆ. ಜನರು ಹೆದರುವ ಅವಶ್ಯಕತೆ ಇಲ್ಲ. –ಪ್ರಶಾಂತ ಗೌರಾಣಿ ಆರ್‌ಎಫ್‌ಒ, ಚಿಕ್ಕೋಡಿ

ಟಾಪ್ ನ್ಯೂಸ್

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

Hunasu-Accident

ಮೈಸೂರು-ಹುಣಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ: 6 ಮಂದಿಗೆ ತೀವ್ರ ಗಾಯ

yatnal–waqf

Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್‌

KSRTC

Ticket Price Hike: ನಾಲ್ಕು ನಿಗಮಗಳ ಬಸ್‌ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ

1-asasa

Viksit Bharat ‘ಯಂಗ್‌ ಲೀಡರ್ ಡೈಲಾಗ್‌’:ಉಡುಪಿಯ ಮನು ಶೆಟ್ಟಿ ಆಯ್ಕೆ

chowta-Rajnath

Request: ಮಂಗಳೂರಿನಲ್ಲಿ ಸೈನಿಕ ಶಾಲೆ, ಮಿಲಿಟರಿ ನೆಲೆ ಸ್ಥಾಪಿಸಿ: ಕ್ಯಾ.ಬ್ರಿಜೇಶ್‌ ಚೌಟ

1-us

Dating Apps; ಯುಎಸ್ ಮಾಡೆಲ್ ಎಂದು 700ಕ್ಕೂ ಹೆಚ್ಚು ಯುವತಿಯರಿಗೆ ವಂಚಿಸಿದವ ಕೊನೆಗೂ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; Dinner meeting does not need political significance: Satish Jarkiholi

Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್‌ ಜಾರಕಿಹೊಳಿ

President  ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

President ಮುರ್ಮು ಅವರಿಂದ ಇಂದು ಬೆಳಗಾವಿಯಲ್ಲಿ ಕೆಎಲ್‌ಇ ಕ್ಯಾನ್ಸರ್‌ ಆಸ್ಪತ್ರೆ ಉದ್ಘಾಟನೆ

ಮಗಳ ಮೇಲೆ ಎರಗಳು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

ಮಗಳ ಮೇಲೆ ಎರಗಲು ಹೋದ ಪತಿಯನ್ನೇ ಹತ್ಯೆಗೈದು ದೇಹವನ್ನು ತುಂಡರಿಸಿ ವಿಲೇವಾರಿ ಮಾಡಿದ ಪತ್ನಿ

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

Butterfly Park: ಬೆಳಗಾವಿಯ ಹಿಡಕಲ್‌ ಡ್ಯಾಂ ಬಳಿ ಅತಿ ದೊಡ್ಡ ತೆರೆದ ಚಿಟ್ಟೆ ಪಾರ್ಕ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ

puttige-6-

Udupi;ಗೀತಾರ್ಥ ಚಿಂತನೆ 146: ಚಾರ್ವಾಕ ಬಿಟ್ಟು ಉಳಿದೆಲ್ಲ ಮತಗಳಲ್ಲಿ ಪುಣ್ಯಪಾಪ ಕಲ್ಪನೆ

train-track

ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್‌ ಬಂದ್‌

1-ksde

CPCRI; ಅಡಿಕೆ ಉತ್ಪನ್ನ ಬಗ್ಗೆ ಸಂಶೋಧನೆ

Vimana 2

Air India Express; ಮಂಗಳೂರು-ಪುಣೆ ನೇರ ವಿಮಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.