ಸ್ವಾವಲಂಬನೆ ಬದುಕಿಗೆ ಎನ್‌ಇಪಿ ಪೂರಕ


Team Udayavani, Jul 30, 2022, 4:53 PM IST

ಸ್ವಾವಲಂಬನೆ ಬದುಕಿಗೆ ಎನ್‌ಇಪಿ ಪೂರಕ

ಮೈಸೂರು: ಹೊಸ ಶಿಕ್ಷಣ ನೀತಿಯು ಸ್ವಾವಲಂಬನೆ ಮತ್ತು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಪೂರಕವಾಗಿದೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದರು.

ನಗರ ಹೊರವಲಯದ ಬೋಗಾದಿಯ ಬಾಪೂಜಿ ಬಡಾವಣೆಯಲ್ಲಿ ಶುಕ್ರವಾರ ಜೆಎಸ್‌ಎಸ್‌ ಬಾಲಕಿಯರ ಪದವಿ ಪೂರ್ವ ಕಾಲೇಜು ಉದ್ಘಾಟಿಸಿ ಮಾತನಾಡಿದಅವರು, ಸಮಾಜಮುಖೀಯಾದ ಶಿಕ್ಷಣ ನೀತಿಯಿಂದ ಭವಿಷ್ಯದಲ್ಲಿ ಭಾರತವು ಪರಮ ಗುರು ಆಗಿ ರೂಪಗೊಳ್ಳಲಿದ್ದು, ಪರಿಪೂರ್ಣ ದೇಶವಾಗಿಯೂ ತನ್ನಕಾಲ ಮೇಲೆ ನಿಂತುಕೊಳ್ಳುವಷ್ಟು ಸ್ವಾವಲಂಬನೆಯಾಗಲಿದೆ ಎಂದು ವಿವರಿಸಿದರು.

ಪಾಲಕರ ಹೊಣೆಗಾರಿಕೆಯಿಂದ ವಿಮುಕ್ತ: ಇಂದಿನ ಶಿಕ್ಷಣವು ಆರ್ಥಿಕ ಮನುಷ್ಯರನ್ನು ಸೃಷ್ಟಿಸುತ್ತಿದೆಯೇ ಹೊರತು, ಸಾಮಾಜಿಕ ಮನುಷ್ಯರನ್ನು ತಯಾರು ಮಾಡುತ್ತಿಲ್ಲ. ವಿದ್ಯಾವಂತರು ಅಮೆರಿಕಾ, ಇಂಗ್ಲೆಂಡ್‌ ನಂತಹ ವಿದೇಶಗಳಿಗೆ ಅಥವಾ ಬೇರೆ ಊರಿನ ಕಡೆಗೆವಲಸೆ ಹೋಗುವ ಮೂಲಕ ತಮ್ಮ ಸಾಮಾಜಿಕ,ಪಾಲಕರ ಹೊಣೆಗಾರಿಕೆಯಿಂದ ವಿಮುಕ್ತರಾಗುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸ್ವಾವಲಂಬನೆ ಜೀವನ ವ್ಯವಸ್ಥೆ ಹಾಳು: ದೇಶವನ್ನು ಆಳಿದ ಬ್ರಿಟಿಷರು ಗುರುಕುಲ ಶಿಕ್ಷಣ ಪದ್ಧತಿಯನ್ನು ತೆಗೆದು ಹಾಕಿ, ಮೆಕಾಲೆ ಶಿಕ್ಷಣ ನೀತಿ ಜಾರಿಗೊಳಿಸಿದರು. ಇದರಿಂದ ಸ್ವಾತಂತ್ರ್ಯ ಮತ್ತು ಸ್ವಾವಲಂಬನೆ ಜೀವನ ವ್ಯವಸ್ಥೆಯನ್ನು ಹಾಳು ಮಾಡಿದರು. ಭಾರತೀಯರನ್ನು ಪರಾವಲಂಬನೆ ಮಾಡಲು ಏನು ಬೇಕೋ ಅದೆನ್ನೆಲ್ಲವನ್ನೂ ಮಾಡಿದರು. ಅವರಿಗೆ ಶಿಕ್ಷಣದಿಂದಪರಿವರ್ತನೆ ಬೇಕಿರಲಿಲ್ಲ. ಅವರಿಗೆ ತಮ್ಮ ಆಡಳಿತ ವ್ಯವಸ್ಥೆಗೆ ಕೆಲಸಗಾರರನ್ನು ಸೃಷ್ಟಿಸುವ ಶಿಕ್ಷಣವನ್ನು ಮಾತ್ರ ಉಳಿಸಿಕೊಂಡರು. ಇದನ್ನು ನಿವಾರಣೆ ಮಾಡುವುದು ಸ್ವಾತಂತ್ರ್ಯ ಹೋರಾಟಗಾರರ ಆಶಯವಾಗಿತ್ತು. ಬಳಿಕ ಬಂದ ಸರ್ಕಾರಗಳು ಈ ವಿಷಯದಲ್ಲಿ ನಿಧಾನ ಮಾಡಿದ್ದವು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ವಾವಲಂಬಿ ಭಾರತ ನಿರ್ಮಾಣಕ್ಕೂ ಪೂರಕ: 1968ರಲ್ಲಿ ಇಂದಿರಾ ಗಾಂಧಿ ಸರ್ಕಾರ ಮತ್ತು1986ರಲ್ಲಿ ರಾಜೀವ್‌ಗಾಂಧಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಯಿತು. ಆದರೆ, ಅದನ್ನು ಚರ್ಚೆಗೂ ಒಳಪಡಿಸಲಿಲ್ಲ. ಮಕ್ಕಳನ್ನೂಗಣನೆಗೆ ತೆಗೆದುಕೊಳ್ಳಲಿಲ್ಲ. ಆದರೆ, ಈ ಲೋಪವನ್ನು ನಿವಾರಣೆ ಮಾಡಿರುವ ಈಗಿನ ಕೇಂದ್ರ ಸರ್ಕಾರವು ನೂತನ ಶಿಕ್ಷಣ ನೀತಿಯನ್ನು ಮಕ್ಕಳ ಆಧಾರಿತವಾಗಿ ರೂಪಿಸಿದೆ. ಇದು ಸ್ವಾವಲಂಬಿ ಭಾರತ ನಿರ್ಮಾಣಕ್ಕೂ ಪೂರಕವಾಗಿದೆ ಎಂದು ವಿವರಿಸಿದರು.

ಗುಣಮಟ್ಟದ ಶಿಕ್ಷಣ: ಈಗಿನ ವ್ಯವಸ್ಥೆ ಕೆಟ್ಟುಹೋಗಿದೆ. ಸ್ವಾರ್ಥ ಹೆಚ್ಚಾಗಿ, ಅನೈತಿಕತೆ ವಿಜೃಂಭಿಸುತ್ತಿದೆ. ಮನುಷ್ಯ ಮನುಷ್ಯ ನಡುವೆ ನಂಬಿಕೆಯೇ ಇಲ್ಲವಾಗಿದೆ. ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರವು ಮಾಡಲು ಸಾಧ್ಯವಾಗದಂತಹ ಸಂಸ್ಕಾರಯುಕ್ತ ಕೆಲಸವನ್ನು ಸುತ್ತೂರು ಮಠ ಶಿಕ್ಷಣದ ಮೂಲಕ ಮಾಡುತ್ತಿವೆ. ಇದು ಮನುಷ್ಯರಿಗೆ ಬೇಕಾದ ಗುಣಮಟ್ಟದ ಶಿಕ್ಷಣನೀಡುತ್ತಿದೆ. ಜತೆಗೆ, ರಾಷ್ಟ್ರೀಯ ನೀತಿ ಅಳವಡಿಕೆಯಲ್ಲೂ ರಾಜ್ಯ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದಿದೆ ಎಂದು ಹೇಳಿದರು.

ಸಹ ಶಿಕ್ಷಣ ಪದ್ಧತಿಗೆ ಈಗಲೂ ಹಿಂದೇಟು: ಬಾಲಕ ಮತ್ತು ಬಾಲಕಿಯರು ಒಟ್ಟಿಗೆ ಕಲಿಯುವ ಸಹ ಶಿಕ್ಷಣ ಪದ್ಧತಿಗೆ (ಕೋ ಎಜುಕೇಷನ್‌) ಈಗಲೂ ಪಾಲಕರು ಹೆದರುತ್ತಾರೆ. ಇಂತಹ ಶಾಲಾ-ಕಾಲೇಜುಗಳಿಗೆ ಹೆಣ್ಣು ಮಕ್ಕಳನ್ನು ಕಳುಹಿಸಲು ಹಿಂದೇಟು ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಬಾಲಕಿಯರಿಗಾಗಿ ಜೆಎಸ್‌ಎಸ್‌ ಮಹಾ ವಿದ್ಯಾಪೀಠವು ಬಾಲಕಿಯರಿಗಾಗಿ ಹೊಸ ಕಾಲೇಜು ಕಟ್ಟಿದೆ. ಅದು ನಗರದ ಹೃದಯಭಾಗಕ್ಕೆ ಸೀಮಿತವಾಗದೆ, ನಗರ ಹೊರವಲಯದ ವಿದ್ಯಾರ್ಥಿ ಗಳಿಗೂ ಅನುಕೂಲ ಕಲ್ಪಿಸಿಕೊಟ್ಟಿದೆ ಎಂದು ಹೇಳಿದರು.

ಹೊಸ ಕಾಲೇಜಿನಲ್ಲಿ ಸುಸಜ್ಜಿತ ಪ್ರಯೋಗಾಲಯ, ಆಧುನಿಕ ತಂತ್ರಜ್ಞಾನ ಪರಿಕರಗಳು ಲಭ್ಯವಿವೆ. ಗುಣಮಟ್ಟದ ಶಿಕ್ಷಣವನ್ನು ಜೆಎಸ್‌ಎಸ್‌ ಸಂಸ್ಥೆಯು ನೀಡುವ ಮೂಲಕ ಮಾದರಿಯಾಗಿದೆ. ಅಂತಾ ರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಿದೆ ಎಂದರು.

ಕಾರ್ಯಕ್ರಮದಲ್ಲಿ ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮಾಜಿ ಎಂಎಲ್ಸಿ ಅರುಣ್‌ಶಹಾಪುರ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಜಿ.ಡಿ.ಹರೀಶ್‌ ಗೌಡ, ಜೆಎಸ್‌ಎಸ್‌ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ.ಸಿ.ಜಿ. ಬೆಟಸೂರಮಠ, ವೀಣಾ ನಾಗೇಶ್‌ ಇದ್ದರು.

ಟಾಪ್ ನ್ಯೂಸ್

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

DK-Shivakumar

Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ

Manipu: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Manipur: ಸಿಎಂ ಬಿರೇನ್‌ ಸಿಂಗ್‌ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.