ಬಸವಕಲ್ಯಾಣದಲ್ಲಿ ಮಾದರಿ ಅನುಭವ ಮಂಟಪ ಉದ್ಘಾಟನೆ
ಭಕ್ತರು ಇದನ್ನು ಬೆಳಗ್ಗೆಯಿಂದ ಸಂಜೆವರೆಗೆ ವೀಕ್ಷಿಸಬಹುದಾಗಿದೆ
Team Udayavani, Jul 30, 2022, 5:49 PM IST
ಬಸವಕಲ್ಯಾಣ: ನಗರದ ಹೊರವಲಯದಲ್ಲಿರುವ ಡಾ| ಜಯದೇವಿತಾಯಿ ಲಿಗಾಡೆ ಸಮಾಧಿ ಸ್ಥಳದ ಹತ್ತಿರ ಸಿದ್ಧಪಡಿಸಿದ ಮಾದರಿ ಅನುಭವ ಮಂಟಪವನ್ನು ಶುಕ್ರವಾರ ಶಾಸಕ ಶರಣು ಸಲಗರ ವಿವಿಧ ಪೂಜ್ಯರ ಸಮ್ಮುಖದಲ್ಲಿ ಉದ್ಘಾಟಿಸಿದರು.
ಇದಕ್ಕೂ ಮುನ್ನ ಅನುಭವ ಮಂಟಪದ ಸಂಚಾಲಕ ಶಿವಾನಂದ ದೇವರು ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ವಿವಿಧ ಪೂಜ್ಯರು, ಬಿಡಿಪಿಸಿ ಪದಾ ಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಬಸವಾಭಿಮಾನಿಗಳು ಭಾಗವಹಿಸಿದ್ದರು.
ನಂತರ ಮಾತನಾಡಿದ ಶಾಸಕ ಶರಣು ಸಲಗರ, ಶರಣರ ಕಾಯಕ ಭೂಮಿ ಬಸವಕಲ್ಯಾಣದಲ್ಲಿ ರಾಜ್ಯ ಸರ್ಕಾರ 612 ಕೋಟಿ ರೂ. ವೆಚ್ಚದಲ್ಲಿ ನೂತನ ಅನುಭವ ಮಂಟಪ ನಿರ್ಮಿಸಲು ಮುಂದಾಗಿದ್ದು ಈಗಾಗಲೇ ಕಾಮಗಾರಿ ಆರಂಭಿಸಲಾಗಿದೆ. ಈ ನೂತನ ಅನುಭವ ಮಂಟಪ ಬಸವಾಭಿಮಾನಿಗಳಿಗೆ ಮಾದರಿಯಾಗಲಿದೆ ಎಂದರು.ಮುಂದಿನ ದಿನಗಳಲ್ಲಿ ನಿತ್ಯ ಸಾವಿರಾರು ಜನರು ಕಲ್ಯಾಣ ನೋಡಲು ಆಗಮಿಸುತ್ತಾರೆ.
ಈಗಾಗಲೇ ನಮ್ಮ ಸಂಸತ್ತು ಭವನಕ್ಕೆ ಯಾವ ಮಾದರಿ ಕಲ್ಲುಗಳನ್ನು ಬಳಸಿ ಕಟ್ಟಲಾಗುತ್ತಿದೆಯೋ ಅದೇ ಮಾದರಿ ಕಲ್ಲುಗಳನ್ನು ನೂತನ ಅನುಭವ ಮಂಟಪಕ್ಕೆ ಬಳಸಿದರೆ ಉತ್ತಮ. ಸಂಸತ್ತು ಭವನ ಕಟ್ಟುತ್ತಿರುವವರನ್ನು ಒಂದು ಬಾರಿ ಭೇಟಿಯಾಗಿ ಅವರಿಂದ ಸಲಹೆ ಪಡೆಯುವಂತೆ ಒತ್ತಾಯಿಸಿದರು.
ಅನುಭವ ಮಂಟಪ ಅನುಷ್ಠಾನ ಸಮಿತಿ ಅಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಮಾತನಾಡಿ, ನೂತನ ಅನುಭವ ಮಂಟಪ ಯಾವ ರೀತಿಯಲ್ಲಿ ನಿರ್ಮಾಣಗೊಳ್ಳಲಿದೆ ಎಂದು ಮಾದರಿ ತಯಾರಿಸಲಾಗಿದೆ. ಭಕ್ತರು ಇದನ್ನು ಬೆಳಗ್ಗೆಯಿಂದ ಸಂಜೆವರೆಗೆ ವೀಕ್ಷಿಸಬಹುದಾಗಿದೆ ಎಂದರು. ಹುಲಸೂರನ ಡಾ| ಶಿವಾನಂದ ಸ್ವಾಮೀಜಿ, ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು, ಹರಳಯ್ಯ ಗವಿಯ ಡಾ| ಗಂಗಾಂಬಿಕಾ ಅಕ್ಕ ಮಾತನಾಡಿದರು.
ಹಾರಕೂಡನ ಡಾ| ಚನ್ನವೀರ ಶಿವಾಚಾರ್ಯರು, ಬಸವ ಮಹಾಮನೆಯ ಶ್ರೀ ಸಿದ್ರಾಮೇಶ್ವರ ಸ್ವಾಮೀಜಿ, ಬೇಲೂರನ ಉರಲಿಂಗ ಪೆದ್ದಿ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ಬಸವರಾಜ ಧನ್ನೂರ, ಸಹಾಯಕ ಆಯುಕ್ತ ರಮೇಶ ಕೋಲಾರ, ತಹಶೀಲ್ದಾರ್ ಸಾವಿತ್ರಿ ಸಲಗರ, ಬಿಕೆಡಿಬಿ ತಹಶೀಲ್ದಾರ್ ಮೋಸಿನ್, ಬಿಡಿಎ ಅಧ್ಯಕ್ಷ ರಾಜಕುಮಾರ ಬಿರಾದಾರ ಸಿರಗಾಪೂರ, ಬಿಡಿಪಿಸಿ ಅಧ್ಯಕ್ಷ ಅನೀಲ ರಗಟೆ, ಉಪಾಧ್ಯಕ್ಷ ಅಶೋಕ ನಾಗರಾಳೆ, ಸಹ ಕಾರ್ಯದರ್ಶಿ ಬಸವರಾಜ ಬಾಲಕಿಲೆ, ಕೋಶಾಧ್ಯಕ್ಷ ಸುಭಾಷ ಹೊಳಕುಂದೆ, ನಿರ್ದೇಶಕ ಬಸ್ಸು ಕೋರಕೆ, ಡಾ|ಮಹೇಶ ಪಾಟೀಲ, ಶಿವಕುಮಾರ ಬಿರಾದಾರ, ಅರವಿಂದ ಮುತ್ತೆ, ಸಿದ್ದು ಬಿರಾದಾರ, ಬಾಬಾಸಾಹೇಬ ಗಡ್ಡೆ, ಮಹಾದೇವಪ್ಪ ಇಜಾರೆ ಸೇರಿ ಗಣ್ಯರು, ಬಸವಾಭಿಮಾನಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contractor Sachin Case: ಎರಡನೇ ದಿನವೂ ತನಿಖೆ ಮುಂದುವರಿಸಿದ ಸಿಐಡಿ ತಂಡ
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Bidar; ಗುತ್ತಿಗೆದಾರ ಸಚಿನ್ ಕೇಸ್; ತನಿಖೆ ಆರಂಭಿಸಿದ ಸಿಐಡಿ ತಂಡ
Bidar: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಮೊದಲು ಹೊಟೇಲ್ ನಲ್ಲಿ ಓಡಾಡಿದ ದೃಶ್ಯ ಸೆರೆ
ಗುತ್ತಿಗೆದಾರ ಸಚಿನ್ ಕೇಸ್: ಪ್ರಕರಣ ಮುಚ್ಚಿಹಾಕಲು ಸರ್ಕಾರದ ಯತ್ನ: ಸಹೋದರಿ ಆರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.