ಸ್ವಚ್ಛತೆಯಿಂದ ಡೆಂಘೀ ನಿಯಂತ್ರಣ ಸಾಧ್ಯ: ಬಿಇಒ ಮಜ್ಜಗಿ
ತಾಲೂಕು ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ; ಮಕ್ಕಳಿಗೆ ಪರಿಸರ ಕಾಳಜಿ ಮೂಡಿಸಲು ಸಲಹೆ
Team Udayavani, Jul 30, 2022, 5:53 PM IST
ನರಗುಂದ: ದೇಶದ ಭಾವಿ ಪ್ರಜೆಗಳಾದ ಇಂದಿನ ಮಕ್ಕಳಿಗೆ ಈಗಿನಿಂದಲೇ ಪರಿಸರ ಬಗ್ಗೆ ಕಾಳಜಿ ಮೂಡಿಸಬೇಕಾಗಿದೆ ಎಂದು ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಫ್. ಮಜ್ಜಗಿ ಹೇಳಿದರು.
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ಡೆಂಘೀ ವಿರೋಧಿ ಮಾಸಾಚರಣೆ ಅಂಗವಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿನಿಯರಿಗೆ ಡೆಂಘೀ ನಿಯಂತ್ರಣದಲ್ಲಿ ಪರಿಸರ ಸ್ವಚ್ಛತೆ ಹಾಗೂ ನನ್ನ ಪಾತ್ರ ಕುರಿತು ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರದಿಂದ ಆಗುವ ಹಾನಿಯಿಂದ ಹತ್ತು ಹಲವು ರೋಗ ರುಜಿನಗಳು ಹರಡಿ ಆರೋಗ್ಯವಂತ ಸಮಾಜ ಹಾಳು ಮಾಡುತ್ತಿವೆ. ಅದಕ್ಕಾಗಿ ಮಕ್ಕಳಲ್ಲಿ ಇಂತಹ ಸ್ಪರ್ಧೆಗಳನ್ನು ಏರ್ಪಡಿಸಿ ಅವರಿಗೆ ಸೊಳ್ಳೆಗಳಿಂದ ಹರಡುವ ಡೆಂಘೀ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಿಂದ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ಹೇಳಿದರು.
ಜಿಲ್ಲಾ ಹಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ ಈರಣ್ಣ ಚಲ್ಮಿ ಇವರು ಮಾತನಾಡಿ, ಡೆಂಘೀ ಜ್ವರ ಈಡೀಸ್ ಈಜಿಪ್ಟೆ ಹೆಣ್ಣು ಸೊಳ್ಳೆ ಕಚ್ಚುವಿಕೆಯಿಂದ ಹರಡುವ ಸಾಂಕ್ರಾಮಿಕ ರೋಗವಾಗಿದೆ. ಡೆಂಘೀ ವಿರೋಧಿ ಮಾಸಾಚರಣೆ ಮಾಡಿ ಸಾರ್ವಜನಿಕರಲ್ಲಿ, ಮಕ್ಕಳಲ್ಲಿ ಅರಿವು ಮೂಡಿಸಲು ಚಿತ್ರ ಬಿಡುಸುವ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಸ್ವಚ್ಛ ನೀರಿನಲ್ಲೇ ಸೊಳ್ಳೆಗಳು ಸಂತಾನೊತ್ಪತ್ತಿ ಮಾಡುತ್ತವೆ. ಸೊಳ್ಳೆಗಳ ನಿಯಂತ್ರಣ ಮಾಡುವ ಕುರಿತು ಜಾಗೃತಿ ಮೂಡಿಸುವುದೇ ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಜಿ.ವಿ. ಕೊಣ್ಣೂರ ಮಾತನಾಡಿ, ಸೊಳ್ಳೆಗಳ ಜೀವನ ಚಕ್ರ, ಸೊಳ್ಳೆಗಳ ಸಂತಾನ ಅಭಿವೃದ್ಧಿ ಮಾಡುವ ವಿಧಾನ, ಸೊಳ್ಳೆ ಕಡಿತದಿಂದ ಹರಡುವ ರೋಗಗಳು, ಅವುಗಳ ಲಕ್ಷಣ, ಸೊಳ್ಳೆಗಳ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರದ ಬಗ್ಗೆ ತಿಳಿಸಿದರು.
ರಕ್ಷಣಾ ಕಾರ್ಯ: ಸೊಳ್ಳೆಗಳ ಕಡಿತದಿಂದ ತಪ್ಪಿಸಿಕೊಳ್ಳಲು ಮನೆಗಳಲ್ಲಿ ಮಾರುಕಟ್ಟೆಗಳಲ್ಲಿ ಸಿಗುವ ಸೊಳ್ಳೆಯ ಬತ್ತಿ, ಬ್ಯಾಟ್, ಲಿಕ್ವಡ್, ಸೊಳ್ಳೆ ಪರದೇ ಬಳಸುವುದು. ಮನೆಗಳಲ್ಲಿ ಕಿಟಕಿ ಬಾಗಿಲುಗಳಿಗೆ ಸೊಳ್ಳೆ ನಿರೋಧಕ ಗ್ಯಾಲರಿ ಅಳವಡಿಸುವುದು. ಮೈತುಂಬಾ ಬಟ್ಟೆ ಧರಿಸುವುದು, ಸಂಜೆ ಬೇವಿನ ಸೊಪ್ಪಿನ ಹೊಗೆ ಹಾಕುವುದು. ಘನತ್ಯಾಜ್ಯ ವಸ್ತುಗಳ ಸರಿಯಾದ ವಿಲೇವಾರಿ ಮಾಡಬೇಕು. ಡೆಂಘೀ ಲಕ್ಷಣಗಳು: ತೀವ್ರ ಜ್ವರ, ತಲೆನೋವು, ಕಣ್ಣಿನ ಹಿಂಭಾಗದಲ್ಲಿ ನೋವು, ಮಾಂಸ ಖಂಡ, ಕೀಲುಗಳಲ್ಲಿ ವಿಪರಿತ ನೋವು, ರಕ್ತಸ್ರಾವ ಕಂಡು ಬಂದರೆ ಆರೋಗ್ಯ ಇಲಾಖೆ ಸಿಬ್ಬಂದಿ ಅಥವಾ ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು. ಡೆಂಘೀ ನಿಯಂತ್ರಣದಲ್ಲಿ ಸಾರ್ವಜನಿಕರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎನ್.ಆರ್. ನಿಡಗುಂದಿ, ಶಾಲೆಯ ಶಿಕ್ಷಕರಾದ ಎಸ್.ಐ. ಅಂಕಲಿ, ಎಸ್. ಎಸ್. ತಳವಾರ, ಪ್ರೌಢಶಾಲಾ ಚಿತ್ರಕಲಾ ಶಿಕ್ಷಕರು, ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸಿ.ಎಫ್. ಕುಂಬಾರ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ನಾಗರಾಜ ವಿಠ್ಠಪ್ಪನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.