ಈಗ ಲೋಕಸಭೆ ಚುನಾವಣೆ ನಡೆದರೆ ಮೋದಿಗೆ ಭರ್ಜರಿ ಗೆಲುವು
ಇಂಡಿಯಾ ಟಿವಿ ‘ವಾಯ್ಸ್ ಆಫ್ ದಿ ನೇಷನ್’ ಅಭಿಪ್ರಾಯ ಸಂಗ್ರಹ
Team Udayavani, Jul 30, 2022, 9:10 PM IST
ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ 362 ಲೋಕಸಭಾ ಸ್ಥಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಬಹುದು ಎಂದು ಇಂಡಿಯಾ ಟಿವಿ ‘ವಾಯ್ಸ್ ಆಫ್ ದಿ ನೇಷನ್’ ಅಭಿಪ್ರಾಯ ಸಂಗ್ರಹದ ಸಮೀಕ್ಷೆಯಲ್ಲಿ ಹೇಳಲಾಗಿದೆ.
‘ದೇಶ್ ಕಿ ಆವಾಜ್’ (ರಾಷ್ಟ್ರದ ಧ್ವನಿ) ಶೀರ್ಷಿಕೆಯ ಸಮೀಕ್ಷೆಯ ಫಲಿತಾಂಶಗಳನ್ನು ಇಂಡಿಯಾ ಟಿವಿ ಸುದ್ದಿ ವಾಹಿನಿಯಲ್ಲಿ ಶುಕ್ರವಾರ ಸಂಜೆಯಿಂದ ಪ್ರಸಾರ ಮಾಡಲಾಗಿದ್ದು, ಸಮೀಕ್ಷೆಯ ಪ್ರಕಾರ, ಈಗ ಸಾರ್ವತ್ರಿಕ ಚುನಾವಣೆಗಳು ನಡೆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಕೇವಲ 97 ಲೋಕಸಭಾ ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಅಂದಾಜಿಸಲಾಗಿದೆ, ಸಣ್ಣ, ಪ್ರಾದೇಶಿಕ ಪಕ್ಷಗಳು ಮತ್ತು ಸ್ವತಂತ್ರರು ಸೇರಿದಂತೆ ಇತರರು 84 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ ಎನ್ನಲಾಗಿದೆ.
ಈಗ ಚುನಾವಣೆ ನಡೆದರೆ ಎನ್‌ಡಿಎ ಶೇಕಡಾ 41, ಯುಪಿಎ ಶೇಕಡಾ 28 ಮತ್ತು ಇತರರು ಶೇಕಡಾ 31 ಮತಗಳನ್ನು ಗಳಿಸಬಹುದು ಎಂದು ಸಮೀಕ್ಷೆ ಹೇಳಿದೆ.
ಸಮೀಕ್ಷೆಯಲ್ಲಿ ನೀಡಲಾದ ರಾಜ್ಯವಾರು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶದಲ್ಲಿ, 80 ಸ್ಥಾನಗಳಲ್ಲಿ 76 ಸ್ಥಾನಗಳನ್ನು ಗೆಲ್ಲಬಹುದು, ಕಾಂಗ್ರೆಸ್ ಮತ್ತು ಇತರರು ತಲಾ ಎರಡು ಸ್ಥಾನಗಳನ್ನು ಮಾತ್ರ ಗೆಲ್ಲುವ ನಿರೀಕ್ಷೆಯಿದೆ. ಬಿಹಾರದಲ್ಲಿ ಎನ್‌ಡಿಎ ಒಟ್ಟು 40 ಸ್ಥಾನಗಳಲ್ಲಿ 35 ಮತ್ತು ಯುಪಿಎ ಐದು ಸ್ಥಾನಗಳನ್ನು ಗೆಲ್ಲಬಹುದು. ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ ಬಿಜೆಪಿ 23, ಕಾಂಗ್ರೆಸ್ 4 ಜೆಡಿಎಸ್(ಇತರೆ) 1 ಸ್ಥಾನ ಗೆಲ್ಲಬಹುದು ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಮಹಾರಾಷ್ಟ್ರದಲ್ಲಿ ಒಟ್ಟು 48 ಸ್ಥಾನಗಳಲ್ಲಿ ಎನ್‌ಡಿಎ 37 ಸ್ಥಾನಗಳನ್ನು ಗೆಲ್ಲಬಹುದು, ಆದರೆ ಬಿಜೆಪಿಯೇತರ ಪ್ರತಿಪಕ್ಷಗಳು ಉಳಿದ 11 ಸ್ಥಾನಗಳನ್ನು ಗೆಲ್ಲಬಹುದು.
ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನೇತೃತ್ವದ ಯುಪಿಎ ಒಟ್ಟು 39 ಸ್ಥಾನಗಳಲ್ಲಿ 38 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ, ಉಳಿದಿರುವ ಏಕೈಕ ಸ್ಥಾನವನ್ನು ಎನ್‌ಡಿಎಗೆ ಬಿಟ್ಟುಕೊಡುತ್ತದೆ. ಎಲ್‌ಡಿಎಫ್ ಆಡಳಿತದ ಕೇರಳದಲ್ಲಿ ಬಿಜೆಪಿಯೇತರ ಪ್ರತಿಪಕ್ಷಗಳು ರಾಜ್ಯದ ಎಲ್ಲಾ 20 ಸ್ಥಾನಗಳನ್ನು ಕ್ಲೀನ್ ಸ್ವೀಪ್ ಮಾಡಬಹುದು ಎನ್ನಲಾಗಿದೆ.
ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಒಟ್ಟು 42 ಸ್ಥಾನಗಳಲ್ಲಿ 26 ಸ್ಥಾನಗಳನ್ನು ಗೆಲ್ಲಲಿದೆ ಎಂದು ಅಂದಾಜಿಸಲಾಗಿದೆ, ಎನ್‌ಡಿಎ 14 ಮತ್ತು ಯುಪಿಎ ಎರಡು ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆಯಲ್ಲಿ ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.