ಕಬ್ಬಿನ ಬಾಕಿ ಹಣ ಪಾವತಿಸದಿದ್ದರೆ ಧರಣಿ


Team Udayavani, Jul 31, 2022, 1:10 PM IST

6cane-‘

ಹುಮನಾಬಾದ: ಕಬ್ಬಿನ ಬಾಕಿ ಹಣ ಪಾವತಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬೊಮ್ಮಾಯಿ, ಬಿಎಸ್‌ ಎಸ್‌ಕೆ ಕಾರ್ಖಾನೆ ಅಧ್ಯಕ್ಷ ಸುಭಾಷ ಕಲ್ಲೂರ್‌ ಮನೆ ಎದುರು ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸುವ ಕುರಿತು ಶನಿವಾರ ರೈತರು ಚರ್ಚೆ ನಡೆಸಿದರು.

ಹಳ್ಳಿಖೇಡ (ಬಿ) ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಆವರಣದಲ್ಲಿ ರೈತ ಸಂಘದ ಪದಾಧಿ ಕಾರಿಗಳು ಕರೆದ ಸಭೆಯಲ್ಲಿ ಕಬ್ಬು ಪೂರೈಕೆ ಮಾಡಿದ ರೈತರು ಮಾತನಾಡಿ, ಕಾರ್ಖಾನೆಗೆ ನಂಬಿಕೊಂಡು ಕಬ್ಬು ಪೂರೈಸಿದ ರೈತರಿಂದು ಅನೇಕ ಸಂಕಷ್ಟಗಳು ಎದುರಿಸುವ ಸ್ಥಿತಿ ಬಂದಿದೆ. ನಿಗದಿತ ಅವಧಿಯಲ್ಲಿ ಹಣ ಪಾವತಿಸುವ ಭರವಸೆ ನೀಡಿದ ಆಡಳಿತ ಮಂಡಳಿ ಸುಳ್ಳು ನೆಪ ಹೇಳಿಕೊಂಡು ಕಾಲ ಕಳೆಯುತ್ತಿದೆ. ಕೂಡಲೇ ರೈತರ ಬಾಕಿ ಹಣ ಪಾವತಿಸಬೇಕು. ಇಲ್ಲವೇ ಕಬ್ಬು ಪೂರೈಸಿದ ಎಲ್ಲ ರೈತರು ಪ್ರತಿಭಟನೆ, ಧರಣಿ ನಡೆಸಲು ಮುಂದಾಗಬೇಕು ಎಂದು ಹೇಳಿದರು.

ಸುಭಾಷ ಗಂಗಾ ಮಾತನಾಡಿ, ಕೂಲಿ ಆಳುಗಳಿಗೆ ಸಂಬಳ ನೀಡುವುದು ಕಷ್ಟವಾಗಿದೆ. ಕಬ್ಬು ಬೆಳೆಸುವುದು, ಕಾರ್ಖಾನೆಗೆ ಪೂರೈಸುವುದು ನಂತರ ಹಣ ಬರುವುದು ಕಷ್ಟವಾಗಿದೆ. ಕಬ್ಬು ಬೆಳೆಸುವರ ಸಂಕಷ್ಟಗಳು ಆಡಳಿತ ನಡೆಸುವರಿಗೆ ಗೊತ್ತಾಗುತ್ತಿಲ್ಲ. ಅಧಿಕಾರಕ್ಕೆ ತರುವುದು ಗೊತ್ತು, ಅಧಿಕಾರದಿಂದ ಇಳಿಸುವುದು ಗೊತ್ತು. ಈಗಾಗಲೇ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದು, ಕೂಡಲೇ ಸ್ಪಂದಿಸದಿದ್ದರೆ ಮುಂದಿನ ಯೋಜನೆಗಳನ್ನೂ ಹಾಕಿಕೊಂಡಿದ್ದೇವೆ ಎಂದರು.

ಬಳವಂತ ಪಾಟೀಲ ಮಾತನಾಡಿ, ಪದೇ ಪದೆ ಅಧ್ಯಕ್ಷರಿಗೆ ಹಣ ಪಾವತಿ ಕುರಿತು ಕರೆ ಮಾಡುತ್ತಿದ್ದು, ಸುಳ್ಳು ನೆಪ ಹೇಳಿ ಕಾಲ ಕಳೆಯುತ್ತಿದ್ದಾರೆ. ರೈತರ ಕಷ್ಟ ಅವರಿಗೆ ಅರ್ಥವಾಗುವುದಲ್ಲ. ಅವರನ್ನು ಮನೆಯಲ್ಲಿ ಕೂಡಿ ಹಾಕಿ ಧರಣಿ ಮಾಡಬೇಕು ಎಂದರು.

ಸಂತೋಷ ಹುಣಸಗೇರಾ ಮಾತನಾಡಿ, ಕಬ್ಬಿನ ಹಣ ಬರುವ ನಿಟ್ಟಿನಲ್ಲಿ ಸಾಲ ಮಾಡಿದ್ದು, ಸಾಲಗಾರರು ತೊಂದರೆ ಕೊಡುತ್ತಿದ್ದಾರೆ. ರೈತರ ಹೋರಾಟಕ್ಕೆ ನಾನೂ ಸಹಮತ ನೀಡುತ್ತೇನೆ ಎಂದರು.

ಸುಭಾಷ್‌ ಮುತ್ತಂಗಿ ಮಾತನಾಡಿ, ಕಬ್ಬಿನ ಹಣ ಬಾಕಿ ಉಳಿದರೆ ಮನೆ-ಹೊಲ ಮಾರಿ ಪಾವತಿ ಮಾಡುತ್ತೇನೆ ಎಂದು ಹೇಳಿದ ಕಾರ್ಖಾನೆ ಅಧ್ಯಕ್ಷರು ಇದೀಗ ತಮ್ಮ ಹೊಲ-ಮನೆ ಮಾರಿ ರೈತರ ನೆರವಿಗೆ ಧಾವಿಸಬೇಕು. ರೈತರ ಬಾಕಿ ಹಣ ಪಾವತಿಸಿ ನುಡಿದಂತೆ ನಡೆಯಬೇಕು ಎಂದರು.

ರೈತ ಸಂಘದ ಮುಖಂಡರಾದ ಸಿದ್ರಾಮಪ್ಪ ಅಣದೂರೆ, ಸತೀಶ್‌ ನನ್ನೂರೆ, ಚಂದ್ರಶೇಖರ ಜಮಖಂಡಿ ಮಾತನಾಡಿ, ವಾರ ಕಾಲ ಕಾದು ನೋಡಿ. ಇನ್ನೊಂದು ಬಾರಿ ಮುಖ್ಯಮಂತ್ರಿ ಭೇಟಿ ಮಾಡಿ ಮನವರಿಕೆ ಮಾಡೋಣ. ನಿಗದಿತ ಅವ ಧಿಯಲ್ಲಿ ಹಣ ಪಾವತಿಸದಿದ್ದರೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ನಿವಾಸದೆದರು ಧರಣಿ ನಡೆಸೋಣ ಎಂದರು. ಇದಕ್ಕೆ ಎಲ್ಲ ರೈತರು ಒಪ್ಪಿಗೆ ಸೂಚಿಸಿದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

Bidar: ವಕ್ಫ್‌ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.