ಕೆವಿಎನ್ ತೆಕ್ಕೆಗೆ ಗಾಳಿಪಟ-2 ವಿತರಣೆ ಹಕ್ಕು
Team Udayavani, Jul 31, 2022, 4:24 PM IST
ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿರುವ “ಗಾಳಿಪಟ-2′ ಆಗಸ್ಟ್ 12ಕ್ಕೆ ಬಿಡುಗಡೆಯಾಗುತ್ತಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರದ ವಿತರಣೆಯ ಹಕ್ಕು ಕನ್ನಡ ಚಿತ್ರರಂಗದ ಬಿಗ್ ಬ್ಯಾನರ್ ವೊಂದು ಪಡೆದುಕೊಂಡಿದೆ. ಅದು “ಕೆವಿಎನ್ ಪ್ರೊಡಕ್ಷನ್’.
ಹೌದು, “ಗಾಳಿ ಪಟ-2′ ಚಿತ್ರದ ವಿತರಣೆಯ ಹಕ್ಕನ್ನು “ಕೆವಿಎನ್’ ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ಮೂಲಕ ಚಿತ್ರತಂಡ ಖುಷಿಯಾಗಿದೆ. “ಆರ್‌ಆರ್‌ಆರ್’ ಸಿನಿಮಾ ನಂತರ “ಕೆವಿಎನ್’ ವಿತರಣೆ ಮಾಡುತ್ತಿರುವ ಸಿನಿಮಾ “ಗಾಳಿಪಟ-2′. ರಮೇಶ್ ರೆಡ್ಡಿ ತಮ್ಮ ಸೂರಜ್ ಪ್ರೊಡಕ್ಷನ್ ಮೂಲಕ “ಗಾಳಿಪಟ-2′ ಚಿತ್ರ ನಿರ್ಮಿಸಿದ್ದಾರೆ. ಈಗಾಗಲೇ ತಮ್ಮ ಬ್ಯಾನರ್‌ನಲ್ಲಿ ಹಲವು ಸಿನಿಮಾ ನಿರ್ಮಿಸಿ, ಕನ್ನಡ ಚಿತ್ರರಂಗದ ಬಿಗ್ ಬ್ಯಾನರ್ ಎನಿಸಿಕೊಂಡಿದ್ದು, ಈಗ “ಗಾಳಿಪಟ-2′ ಮೂಲಕ ಎರಡು ಬಿಗ್ ಬ್ಯಾನರ್ ಗಳು ಒಂದಾದಂತಿದೆ.
ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ-2′ ಚಿತ್ರದಲ್ಲಿ ಗಣೇಶ್, ದಿಗಂತ್, ಪವನ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು ಸೇರಿದಂತೆ ಅನೇಕರು ನಟಿಸಿದ್ದಾರೆ. ಈಗಾಗಲೇ ಚಿತ್ರದ ಹಾಡುಗಳು ಬಿಡುಗಡೆಯಾಗಿದ್ದು, ಪ್ರತಿ ಹಾಡುಗಳು ಒಂದಕ್ಕಿಂತ ಒಂದು ಭಿನ್ನವಾಗಿ ಕೇಳುಗರ ಮನಸ್ಸು ಗೆದ್ದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.