ಏಷ್ಯಾ ಕಪ್ ವೇಳೆ ಟೀಂ ಇಂಡಿಯಾಗೆ ಮರಳಲಿದ್ದಾರೆ ವಿರಾಟ್ ಕೊಹ್ಲಿ
Team Udayavani, Jul 31, 2022, 4:40 PM IST
ಮುಂಬೈ: ಕಳಪೆ ಫಾರ್ಮ್ ನಲ್ಲಿರುವ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮುಂಬರುವ ಐಸಿಸಿ ಟಿ 20 ವಿಶ್ವಕಪ್ ನಲ್ಲಿ ಆಡಬೇಕೆ ಎಂಬ ಬಗ್ಗೆ ವಿಶ್ವದಾದ್ಯಂತದ ಕ್ರಿಕೆಟ್ ತಜ್ಞರು ತಮ್ಮ ಅಭಿಪ್ರಾಯಗಳನ್ನು ನೀಡುತ್ತಿರುವಾಗಲೇ ವಿರಾಟ್ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿದ್ದರು. ಇದರ ಬಳಿಕ ಅವರು ಜಿಂಬಾಬ್ವೆ ವಿರುದ್ಧದ ಏಕದಿನ ತಂಡಕ್ಕೆ ಮರಳುತ್ತಾರೆ ಎಂದು ನಿರೀಕ್ಷಿಸಲಾಗಿತ್ತು ಆದರೆ ಶನಿವಾರ ಪ್ರಕಟ ಮಾಡಿದ ತಂಡದಲ್ಲಿ ವಿರಾಟ್ ಕೊಹ್ಲಿ ಅವರ ಹೆಸರು ಇರಲಿಲ್ಲ. ಹಾಗಾದರೆ ವಿರಾಟ್ ಕೊಹ್ಲಿ ಯಾವಾಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಮರಳುತ್ತಾರೆ ಎಂಬ ಪ್ರಶ್ನೆ ಅಭಿಮಾನಿ ವಲಯದಲ್ಲಿ ಕೇಳಿ ಬರುತ್ತಿದೆ. ಅದಕ್ಕೆ ಉತ್ತರ ಏಷ್ಯಾ ಕಪ್ ಕೂಟ.
ಪಿಟಿಐ ವರದಿಯ ಪ್ರಕಾರ, ಭಾರತದ ಮಾಜಿ ನಾಯಕ ವಿರಾಟ್ ಏಷ್ಯಾ ಕಪ್ ಟಿ20 ಪಂದ್ಯಾವಳಿಯೊಂದಿಗೆ ಟೀಂ ಇಂಡಿಯಾಗೆ ಮರಳಲಿದ್ದಾರೆ. ಏಷ್ಯಾ ಕಪ್ ಕೂಟ ಮುಂದಿನ ತಿಂಗಳು ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆಯಲಿದ್ದು, ಶ್ರೀಲಂಕಾ ಆತಿಥ್ಯ ವಹಿಸಲಿದೆ.
ತಾನು ಏಷ್ಯಾ ಕಪ್ನಿಂದಲೇ ತಂಡದ ಆಯ್ಕೆಗೆ ಲಭ್ಯವಿರುವುದಾಗಿ ಆಯ್ಕೆಗಾರರೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ನಂತರ ಟಿ20 ವಿಶ್ವಕಪ್ ವರೆಗೆ ಯಾವುದೇ ವಿಶ್ರಾಂತಿ ಪಡೆಯದೇ ತಂಡದ ಆಯ್ಕೆಗೆ ಲಭ್ಯವಿರಲಿದ್ದಾರೆ ಎಂದು ಮೂಲಗಳು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
Australia: ಪರ್ತ್ಗೆ ಆಗಮಿಸಿದ ರೋಹಿತ್ ಶರ್ಮ
Pro Kabaddi League: ಬೆಂಗಾಲ್ ವಾರಿಯರ್ ಮೇಲೆ ಪುಣೇರಿ ಪಲ್ಟಾನ್ ಸವಾರಿ
RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್ವುಡ್
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.