ಪ್ರವೀಣ ಹತ್ಯೆ ಖಂಡಿಸಿ ಎಬಿವಿಪಿ ಪ್ರತಿಭಟನೆ

ಪಿಎಫ್‌ಐ, ಸಿಎಫ್‌ಐ-ಎಸ್‌ಡಿಪಿಐ ಸಂಘಟನೆ ನಿಷೇಧಿಸಲು ಒತ್ತಾಯ;  ಪ್ರವೀಣ ನೆಟ್ಟಾರು ಹತ್ಯೆಗೆ ಗೃಹ ಇಲಾಖೆಯ ವೈಫಲ್ಯವೇ ಕಾರಣ

Team Udayavani, Jul 31, 2022, 5:16 PM IST

18

ಬೆಳಗಾವಿ: ರಾಜ್ಯದಲ್ಲಿ ಹಿಂದೂ ಯುವಕರ ಹತ್ಯೆ ಆಗುತ್ತಿದ್ದು, ಪ್ರಕರಣ ಹಿಂದೆ ಇರುವ ಪಿಎಫ್‌ಐ, ಸಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳನ್ನು ನಿಷೇ ಧಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಕೃಷ್ಣದೇವರಾಜ್‌ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಎಬಿವಿಪಿ ಕಾರ್ಯಕರ್ತರು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಸಾಮಾಜಿಕ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಮಾಡಿರುವ ಮತಾಂಧ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಹಿಂದೂ ಸಂಘಟನೆಗಳ ಹಾಗೂ ಒಂದು ಸಿದ್ಧಾಂತ ಪರವಾಗಿ ಇರುವವರನ್ನು ಕೊಲೆ ನಡೆಯುತ್ತಿದ್ದರೂ ಸರ್ಕಾರ ಸುಮ್ಮನೇ ಕುಳಿತಿದೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ಪದೇ ಪದೇ ಇಂತಹ ಕೊಲೆಗಳು ನಡೆಯುತ್ತಿರುವುದರಿಂದ ರಾಜ್ಯ ಗೃಹ ಇಲಾಖೆಯನ್ನು ಜನರು ಪ್ರಶ್ನಿಸುವಂತೆ ಆಗಿದೆ. ಕೆಲವೇ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನ ಕೊಲೆ ಮಾಡಲಾಗಿದೆ. ಈ ಕೊಲೆ ಮಾಸುವ ಮುನ್ನವೇ ಈಗ ಬೆಳ್ಳಾರೆಯಲ್ಲಿ ಪ್ರವೀಣನ ಹತ್ಯೆ ಆಗಿದೆ. ಇದಕ್ಕೆ ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಲೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಈ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ರೂಪಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಹೇಯ ಕೃತ್ಯ ಎಸಗುವವರಿಗೆ ಭಯ ಹುಟ್ಟಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ ಎಂದರು.

ಒಂದು ಸಿದ್ಧಾಂತದ ಪರವಾಗಿ ರಾಷ್ಟ್ರೀಯತೆ ವಿಚಾರಧಾರೆ ಇಟ್ಟುಕೊಡು ಕೆಲಸ ಮಾಡುವ ಕಾರ್ಯಕರ್ತರ ಹತ್ಯೆ ಮಾಡುತ್ತಿರುವವರ ಹಿಂದೆ ಪಿಎಫ್‌ಐ, ಸಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗಳ ಬೆಂಬಲ ಇರುವುದು ಎಲ್ಲ ಪ್ರಕರಣಗಳಲ್ಲಿ ಕಂಡು ಬರುತ್ತಿದೆ. ಸರ್ಕಾರ ಕೂಡಲೇ ಈ ಸಂಘಟನೆಗಳನ್ನು ನಿಷೇ ಧಿಸುವಂತೆ ಆಗ್ರಹಿಸಿದರು. ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿ ರೋಹಿತ್‌ ಉಮನಾದಿಮಠ, ವಿಭಾಗ ಸಂಘಟನಾ ಕಾರ್ಯದರ್ಶಿ ಗಂಗಾಧರ ಹಂಜಗಿ, ಶಿವಾನಂದ ಬಿಜ್ಜರಗಿ, ಕಿರಣ ದುಕಾನದಾರ, ಸಮ್ಮೇದ್‌ ಖವಟಕೊಪ್ಪ, ರೋಹಿತ್‌ ಆಲಕುಂಟೆ, ಸಂದೀಪ ದಂಡಗಲ್‌, ಸಂಧ್ಯಾ ಹಳ್ಳಿಕೇರಿ, ಆರತಿ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

Ullala: ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!

Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

1(3)

World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್‌ 17

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.