ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಎಐಡಿಎಸ್‌ಒ ಪ್ರತಿಭಟನೆ
Team Udayavani, Jul 31, 2022, 6:52 PM IST
ವಿಜಯಪುರ: ಸರ್ಕಾರಿ ಶಾಲೆಗಳ ವಿಲೀನ ಖಂಡಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನದ ಮೂಲಕ ಎಐಡಿಎಒ ನೇತೃತ್ವದಲ್ಲಿ ವಿದ್ಯಾರ್ಥಿಗಳು ಶನಿವಾರ ನಗರದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾ ಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸಂಘಟನೆ ಜಿಲ್ಲಾಧ್ಯಕ್ಷೆ ಸುರೇಖಾ ಕಡಪಟ್ಟಿ ಮಾತನಾಡಿ, ಪ್ರಸಕ್ತ ವರ್ಷ ರಾಜ್ಯದಲ್ಲಿ 13,800 ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವುದಾಗಿ ಸರ್ಕಾರ ಹೇಳಿದೆ.
ಸದರಿ ವಿಷಯ ರಾಜ್ಯದ ಲಕ್ಷಾಂತರ ಬಡ ವಿದ್ಯಾರ್ಥಿಗಳು, ಪೋಷಕರ ಪಾಲಿಗೆ ಮಾರಕವಾಗಲಿದೆ. ಸರ್ಕಾರದ ಈ ನಿರ್ಧಾರದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳು ಶಾಶ್ವತವಾಗಿ ಶಿಕ್ಷಣದಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.
ಸರ್ಕಾರಿ ಶಾಲೆಗಳಲ್ಲಿ ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ದಾಖಲಾತಿ ಪ್ರಮಾಣ ಕುಸಿಯುತ್ತಿದೆ. ದಾಖಲಾತಿ 25ಕ್ಕಿಂತ ಕಡಿಮೆ ಇರುವ ಶಾಲೆಗಳನ್ನು ಒಂದೇ ಸ್ಥಳದಲ್ಲಿ ಸೇರಿಸಿ ದೊಡ್ಡ ಶಾಲೆಯೊಂದಿಗೆ ವಿಲೀನ ಮಾಡಲಾಗುತ್ತದೆ ಎಂದು ಸರ್ಕಾರಿ ಶಾಲೆಗಳ ವಿಲೀನಕ್ಕೆ ಸರ್ಕಾರ ಕಾರಣ ಹೇಳುತ್ತಿದೆ. ಶಿಕ್ಷಣ ಸಚಿವರು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಂತೆ ಹಾಗೂ ಸರ್ಕಾರವೇ ಒಪ್ಪಿಕೊಂಡಂತೆ, ಶಾಲೆಗಳಲ್ಲಿ ಮೂಲ ಸೌಕರ್ಯದ ಕೊರತೆ ಇದೆ. ಹಾಗಾಗಿ, ಕಳಪೆ ಗುಣಮಟ್ಟ ಇರುವ ನೆಪ ಹೇಳಿಕೊಂಡು ಶಾಲೆ ಮುಚ್ಚದಂತೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಸ್ನೇಹಾ ಕಟ್ಟಿಮನಿ ಮಾತನಾಡಿ, ಸರ್ಕಾರದ ಅಂಕಿ ಅಂಶಗಳ ಪ್ರಕಾರ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 35,000 ಶಿಕ್ಷಕರ ಕೊರತೆ ಇದೆ. 4767 ಶಾಲೆಗಳು ಒಬ್ಬರೇ ಶಿಕ್ಷಕರಿರುವ ಶಾಲೆಗಳಿವೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಬ್ಬ ಸಹ ಶಿಕ್ಷಕರು ಇಲ್ಲದ ಶಾಲೆಗಳಿವೆ. ಒಂದು ಶಾಲೆಗೆ 5 ಮತ್ತು 10 ಮಕ್ಕಳು ದಾಖಲಾಗುತ್ತಿರುವ ಅಂಶಗಳು ಬೆಳಕಿಗೆ ಬಂದಿದೆ. ಈ ಎಲ್ಲ ಅಂಶಗಳನ್ನು ನೋಡಿದಾಗ ಸಹಜವಾಗಿ ಮೂಡುವ ಪ್ರಶ್ನೆ, ಈ ಕೊರತೆಗಳನ್ನು ಸರಿಪಡಿಸಲು, ಸರ್ಕಾರಿ ಶಾಲೆಗಳ ಗುಣಮಟ್ಟ ಏರಿಸಲು ಸರ್ಕಾರಗಳು ಏಕೆ ಕ್ರಮ ವಹಿಸುತ್ತಿಲ್ಲ? ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಏಕೆ ಆದ್ಯತೆ ಕೊಡುತ್ತಿಲ್ಲ? ಶಾಲೆಗಳ ವಿಲೀನ ಈ ಎಲ್ಲ ಸಮಸ್ಯೆಗಳಿಗೆ ಪರಿಹಾರ ಆಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ ಎಂದು ಆಗ್ರಹಿಸಿದರು.
ಕಡಿಮೆ ದಾಖಲಾತಿ ಇರುವ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡುವ ಮೂಲಕ ಮಾದರಿ ಶಾಲೆ ರಚಿಸುತ್ತೇವೆ ಎಂಬ ಸರ್ಕಾರದ ನಿಲುವಿನ ಹಿಂದೆ ಶಾಶ್ವತವಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಹುನ್ನಾರವಿದೆ . ಈ ಅಪಾಯವನ್ನು ನಾವು ಕಡೆಗಣಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವುದನ್ನು ಕೈಬಿಡಬೇಕು. ಆರ್ಥಿಕ ಸ್ವಾಯತ್ತತೆ ಹೆಸರಿನಲ್ಲಿ ವಿದ್ಯಾರ್ಥಿ ಶುಲ್ಕ ಕಾಲೇಜುಗಳ ಅಭಿವೃದ್ಧಿ ನಿಧಿ ಯಾಗಿ ಬಳಸುವ ನಿರ್ಧಾರವನ್ನು ಕೂಡಲೇ ಕೈಬಿಡಬೇಕು. ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಿ, ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜ್‌ನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಪ್ರೌಢ ಹಾಗೂ ಪದವಿ ಶಿಕ್ಷಣಕ್ಕೆ ಪ್ರತ್ಯೇಕವಾಗಿ ಕಟ್ಟಡ ನಿರ್ಮಿಸಬೇಕು. ಹಳ್ಳಿಗಳಿಂದ ನಿತ್ಯವೂ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ವಿಜಯಪುರ ನಗರಕ್ಕೆ ಆಗಮಿಸುವ ಕಾರಣ ಸೂಕ್ತ ಬಸ್ ಸೌಲಭ್ಯ ಒದಗಿಸಬೇಕು. 2022-23ನೇ ಸಾಲಿನ ಎಲ್ಲ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ಆರಂಭಿಸಿ ವ್ಯವಸ್ಥೆ ಒದಗಿಸಿಬೇಕೆಂದು ಒತ್ತಾಯಿಸಿದರು. ಕಾವೇರಿ ರಜಪೂತ, ದೀಪಾ ವಡ್ಡರ, ಅಕ್ಷತಾ, ಪೂಜಾ, ರೇಣುಕಾ, ಅಮೃತಾ ಸೇರಿದಂಥೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.