ಮಂಡ್ಯ: ಕುಂಭದ್ರೋಣ ಮಳೆಗೆ ಮುಳುಗಿದ ವಿವೇಕಾನಂದನಗರ, ಬೀಡಿ ಕಾರ್ಮಿಕರ ಕಾಲೋನಿ
Team Udayavani, Aug 2, 2022, 7:40 PM IST
ಮಂಡ್ಯ: ಸೋಮವಾರ ರಾತ್ರಿ ಸುರಿದ ಕುಂಭದ್ರೋಣ ಮಳೆಗೆ ಮಂಡ್ಯ ನಗರದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ನಗರದ ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದ್ದು, ಜನರು ಮಳೆಯಿಂದ ತತ್ತರಿಸಿದ್ದಾರೆ.
ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆಗಳು, ಪಾತ್ರೆ ಸಾಮಾನುಗಳು, ಎಲೆಕ್ಟಾçನಿಕ್ಸ್ ವಸ್ತುಗಳು, ನೀರಿನಿಂದ ಜಲಾವೃತಗೊಂಡು ಸಂಪೂರ್ಣ ಹಾಳಾಗಿವೆ. ಅಲ್ಲದೆ, ಕುಟುಂಬಸ್ಥರು ಮಳೆಯ ನೀರನ್ನು ಮನೆಯಿಂದ ಹೊರ ಹಾಕುವುದರಲ್ಲೇ ಇಡೀ ರಾತ್ರಿ ಜಾಗರಣೆ ಮಾಡಿದ್ದಾರೆ.
ಮುಳುಗಿದ ವಿವೇಕಾನಂದನಗರ:
ರಾತ್ರಿ 6.45ರಲ್ಲಿ ಪ್ರಾರಂಭಗೊಂಡ ಮಳೆ ಮಧ್ಯರಾತ್ರಿವರೆಗೂ ಸುರಿಯಿತು. ಇದರಿಂದ ನಗರದ ಕೆರೆ ಅಂಗಳದಲ್ಲಿರುವ ವಿವೇಕಾನಂದ ಬಡಾವಣೆ ಹಾಗೂ ಪಕ್ಕದಲ್ಲೇ ಇರುವ ಬೀಡಿ ಕಾರ್ಮಿಕರ ಕಾಲೋನಿ ಸಂಪೂರ್ಣ ಜಲಾವೃತಗೊಂಡು ಕೆರೆಯಂತಾಗಿದೆ. ಬಡಾವಣೆಯ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದ್ದು, ಬಡಾವಣೆಯನ್ನು ಸಂಪೂರ್ಣವಾಗಿ ಜಲದಿಗ್ಬಂಧನ ವಿಧಿಸಿದೆ. ನಗರಸಭೆ ಹಾಗೂ ರಕ್ಷಣಾ ತಂಡ ಬೋಟ್‌ಗಳ ಮೂಲಕ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಬಿಡಲಾಯಿತು. ನಗರಸಭೆ ಸಿಬ್ಬಂದಿಗಳು ನೀರು ಹೊರ ಹಾಕಲು ಹರಸಾಹಸಪಡುತ್ತಿದ್ದಾರೆ.
ಮನೆಯ ಮೇಲೆ ಹತ್ತಿ ಕುಳಿತ ನಿವಾಸಿಗಳು:
ಮಂಡಿಯುದ್ದ ನೀರು ಮನೆಗಳಿಗೆ ನುಗ್ಗಿದ್ದರಿಂದ ಆರ್‌ಸಿಸಿ ಮನೆ ಇರುವ ನಿವಾಸಿಗಳು ಮನೆಯ ಮೇಲೆ ಹತ್ತಿ ಕುಳಿತರೆ, ಆರ್‌ಸಿಸಿ ಇಲ್ಲದ ಮನೆಯವರು ಸಂಪೂರ್ಣ ತೊಂದರೆ ಅನುಭವಿಸಿದರು. ರಾತ್ರಿ ಇಡೀ ಊಟ, ನಿದ್ರೆ ಇಲ್ಲದೆ ಸಾಕಷ್ಟು ಸಂಕಷ್ಟ ಅನುಭವಿಸಿದರು. ಬೀಡಿ ಕಾರ್ಮಿಕರ ಕಾಲೋನಿಯ ಬಹುತೇಕ ಎಲ್ಲ ಮನೆಗಳಿಗೂ ನೀರು ನುಗ್ಗಿದೆ. ಮನೆ ಒಳಗಡೆ ಹಾಗೂ ಹೊರಗಡೆ ಸುಮಾರು ನಾಲ್ಕು ಅಡಿಯಷ್ಟು ನೀರು ನಿಂತಿದ್ದ ದೃಶ್ಯ ಕಂಡು ಬಂದಿತು.
ವಾಹನಗಳು ಮುಳುಗಡೆ:
ವಿವೇಕಾನಂದನಗರ ಹಾಗೂ ಬೀಡಿ ಕಾರ್ಮಿಕರ ಕಾಲೋನಿಯ ನಿವಾಸಿಗಳ ಮನೆಮುಂದೆ ನಿಲ್ಲಿಸಿದ್ದ ಬೈಕ್, ಕಾರುಗಳು ನೀರಿನಿಂದ ಮುಳುಗಡೆಯಾಗಿವೆ. ಅಲ್ಲದೆ, ಮನೆಯಲ್ಲಿದ್ದ ವಸ್ತುಗಳು ನೀರಿನಿಂದ ಜಲಾವೃತ್ತಗೊಂಡು ಚೆಲ್ಲಾಪಿಲ್ಲಿಯಾಗಿವೆ. ಇದರಿಂದ ಸಾಕಷ್ಟು ನಷ್ಟ ಅನುಭವಿಸುವಂತಾಗಿದೆ.
ಗಂಜಿ ಕೇಂದ್ರಕ್ಕೆ ರವಾನೆ :
ವಿವೇಕಾನಂದ ಬಡಾವಣೆ ಹಾಗೂ ಬೀಡಿ ಕಾರ್ಮಿಕರ ಕಾಲೋನಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕುಂಞ ಅಹಮದ್ ನೇತೃತ್ವದಲ್ಲಿ ನಗರಸಭೆ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನಿವಾಸಿಗಳನ್ನು ಬೋಟ್ ಮೂಲಕ ಗಂಜಿ ಕೇಂದ್ರ ಹಾಗೂ ಸುರಕ್ಷಿತ ಸ್ಥಳಗಳಿಗೆ ರವಾನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.