ರಂಗೇರಿದ ಸಿದ್ದರಾಮಯ್ಯ ಅಮೃತ ಮಹೋತ್ಸವ
Team Udayavani, Aug 3, 2022, 6:40 AM IST
ದಾವಣಗೆರೆ: ಭಾರೀ ಕುತೂಹಲ ಕೆರಳಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನ್ಮದಿನದ ಅಮೃತ ಮಹೋತ್ಸವ ಕಾರ್ಯಕ್ರಮದ ಸಕಲ ಸಿದ್ಧತೆ ಪೂರ್ಣಗೊಂಡಿದ್ದು ಕ್ಷಣಗಣನೆ ಶುರುವಾಗಿದೆ.
ಶಾಮನೂರು ಅವರಿಗೆ ಸೇರಿದ ಮೈದಾನದಲ್ಲಿ ಭವ್ಯ ವೇದಿಕೆ ನಿರ್ಮಾಣಗೊಂಡಿದ್ದು, ಆರೇಳು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಮೂರು ವೇದಿಕೆ ನಿರ್ಮಿಸಲಾಗಿದೆ. ಮಧ್ಯದ ವೇದಿಕೆಯಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಇತರ ಗಣ್ಯರು; ಎಡ ಭಾಗದ ವೇದಿಕೆಯಲ್ಲಿ ಶಾಸಕರು, ಪರಿಷತ್ ಸದಸ್ಯರು, ಬಲಭಾಗದಲ್ಲಿ ಕೆಪಿಸಿಸಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಸಂಘ-ಸಂಸ್ಥೆಯವರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಮೂರೂವರೆ ಲಕ್ಷ ಚಯರ್
ಮುಖ್ಯ ವೇದಿಕೆಯ ಮುಂದೆ ಬೃಹತ್ ಸಭಾಂಗಣ ಮಾಡಲಾಗಿದ್ದು, ಬರೋಬ್ಬರಿ ಮೂರೂವರೆ ಲಕ್ಷ ಜನ ಕುಳಿತುಕೊಳ್ಳಲು ಕುರ್ಚಿ ಹಾಕಲಾಗಿದೆ. ವೇದಿಕೆ ಕಾರ್ಯಕ್ರಮ ಎಲ್ಲೆಡೆ ವೀಕ್ಷಿಸಲು ಅನುಕೂಲವಾಗುವಂತೆ 33 ಎಲ್‌ಇಡಿ ಪರದೆ ವ್ಯವಸ್ಥೆ ಮಾಡಲಾಗಿದೆ. ಮಳೆ ಬಂದರೂ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ವಾಟರ್‌ಪ್ರೂಫ್ ಛಾವಣಿ ವ್ಯವಸ್ಥೆ ಮಾಡಲಾಗಿದೆ.
ಊಟ-ವಸತಿ ವ್ಯವಸ್ಥೆ
ಮೈಸೂರ್ ಪಾಕ್, ಮೊಸರನ್ನ, ಪಲಾವ್, ನೀರು ವಿತರಣೆಗೆ ಪ್ರತ್ಯೇಕ ಕೌಂಟರ್‌ಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. 1,500ಕ್ಕೂ ಹೆಚ್ಚು ಬಾಣಸಿಗರು ಅಡುಗೆಯಲ್ಲಿ ತೊಡಗಿ ಕೊಂಡಿದ್ದಾರೆ. ಕಾರ್ಯಕ್ರಮ ಅಚ್ಚು ಕಟ್ಟಾಗಿ ನಡೆಯಲು 2,500ಕ್ಕೂ ಅಧಿಕ ಸ್ವಯಂಸೇವಕರು ಕಾರ್ಯನಿರ್ವಹಣೆಗೆ ಅಣಿಯಾಗಿದ್ದಾರೆ. ಗಣ್ಯರಿಗಾಗಿ ಹರಿಹರ-ದಾವಣಗೆರೆ ಅವಳಿ ನಗರಗಳ ಎಲ್ಲ ಕೊಠಡಿಗಳನ್ನು ಬುಕ್ ಮಾಡಲಾಗಿದ್ದು, ಬಹುತೇಕ ವಸತಿಗೃಹಗಳು ಫುಲ್ ಆಗಿವೆ.
1,500ಕ್ಕೂ ಅಧಿಕ ಬಸ್
1,500ಕ್ಕೂ ಹೆಚ್ಚು ಬಸ್‌ಗಳ ವ್ಯವಸ್ಥೆ ಮಾಡಿದ್ದು, ಇದಲ್ಲದೆ ಸಿದ್ದರಾಮಯ್ಯ ಅಭಿಮಾನಿಗಳು, ಕಾರ್ಯಕರ್ತರು ವಿವಿಧ ವಾಹನಗಳಲ್ಲಿ ಆಗಮಿಸಲಿದ್ದಾರೆ. ಉತ್ತರ ಕರ್ನಾಟಕದಿಂದ ರೈಲುಗಳಲ್ಲಿ ಆಗಮಿಸುತ್ತಿದ್ದಾರೆ. ಕಾರ್ಯಕ್ರಮ ಸ್ಥಳದ ಸುತ್ತ ಸುಮಾರು 200 ಎಕರೆ ಪ್ರದೇಶದಲ್ಲಿ ವಾಹನ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
ಎಲ್ಲೆಲ್ಲೂ ಕಟೌಟ್
ಮಹಾನಗರದ ತುಂಬೆಲ್ಲ ಸ್ವಾಗತ, ಶುಭಾಶಯ ಕೋರುವ ಫ್ಲೆಕ್ಸ್‌ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಅವರ ದೊಡ್ಡ ಕಟೌಟ್‌ಗಳು ಗಮನ ಸೆಳೆಯುತ್ತಿವೆ. ಮಂಗಳವಾರ ಸುರಿದ ಮಳೆಯಿಂದಾಗಿ ಸಿದ್ಧತೆಗೆ ಸ್ವಲ್ಪ ಅಡಚಣೆಯಾಯಿತಾದರೂ ನಂತರ ಬಿಸಿಲು ಬಿದ್ದಿದ್ದರಿಂದ ಕಾರ್ಯಕ್ರಮದ ಸಿದ್ಧತೆ ವೇಗ ಪಡೆದುಕೊಂಡಿದೆ.
ಸಭಾ ಕಾರ್ಯಕ್ರಮ ವಿವರ
ಆ. 3ರಂದು ಬೆಳಗ್ಗೆ 10ರಿಂದ 11.30ರ ವರೆಗೆ ಕನ್ನಡದ ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖಾ, ಸಾಧು ಕೋಕಿಲ, ಗಾಯಕಿ ಸಂಗೀತಾ ಕಟ್ಟಿ ಅವರಿಂದ ಸಂಗೀತ ಕಾರ್ಯಕ್ರಮ. 11.30ರಿಂದ ಹಿರಿಯ ಮುಖಂಡರು ಮಾತನಾಡುವರು. ಮಧ್ಯಾಹ್ನ 1 ಗಂಟೆಗೆ ರಾಹುಲ್ ಗಾಂಧಿ ಭಾಷಣವಿದೆ. ರಾಹುಲ್ ಗಾಂಧಿ ಅವರೊಂದಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ , ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಮಾಜಿ ಅಧ್ಯಕ್ಷರಾದ ಡಾ| ಜಿ. ಪರಮೇಶ್ವರ್, ಆರ್.ವಿ. ದೇಶಪಾಂಡೆ ಒಳಗೊಂಡಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ.
ಕುರಿಗಾಹಿಗಳ ಆಗಮನ
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕುರಿಗಾಹಿಗಳಿಗೆ ಅನುಕೂಲ ಆಗುವ ಯೋಜನೆ ಜಾರಿಗೆ ತಂದಿದ್ದನ್ನು ಸ್ಮರಿಸುವುದಕ್ಕಾಗಿಯೇ ವಿವಿಧ ಭಾಗಗಳಿಂದ ಲಕ್ಷಕ್ಕೂ ಹೆಚ್ಚು ಕುರಿಗಾಹಿಗಳು ಕುರಿ
ಗಳೊಂದಿಗೇ ಆಗಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.