ರಾಡಿಯೆದ್ದ ಕೆರಾಡಿ ಮುಖ್ಯ ರಸ್ತೆ; ಸಂಚಾರ ದುಸ್ತರ

400 ಮೀ.ನಷ್ಟು ದೂರದವರೆಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯ

Team Udayavani, Aug 4, 2022, 2:58 PM IST

7

ನೇರಳಕಟ್ಟೆ: ಹೆಮ್ಮಕ್ಕಿ ಕ್ರಾಸ್‌ – ಚಿತ್ತೂರು ಮುಖ್ಯ ರಸ್ತೆಯ ಹಾಡಿಬಿರ್ಗಿ ಕ್ರಾಸ್‌ನಿಂದ ಕೆರಾಡಿಗೆ ಸಂಪರ್ಕಿಸುವ ಮುಖ್ಯ ರಸ್ತೆಯು ಮಳೆಗೆ ಅಲ್ಲಲ್ಲಿ ಹಲವೆಡೆ ರಾಡಿಯೆದ್ದು, ಸಂಚಾರವೇ ದುಸ್ತರಗೊಡಿದೆ. ಸುಮಾರು 1 ಕಿ.ಮೀ. ಉದ್ದದ ರಸ್ತೆಯಲ್ಲಿ 400 ಮೀ.ನಷ್ಟು ದೂರದವರಗೆ ವಾಹನ ಸಂಚರಿಸಲು ಸಾಧ್ಯವಿಲ್ಲದಷ್ಟು ಹೊಂಡಮಯಗೊಂಡಿದೆ.

ಹಾಡಿಬಿರ್ಗಿಯಿಂದ ಕೆರಾಡಿ ಗ್ರಾ.ಪಂ., ಪೇಟೆಗೆ ಸಂಪರ್ಕಿಸುವ ರಸ್ತೆ ಇದಾಗಿದೆ. ಇದಲ್ಲದೆ ಶ್ರೀ ವರಸಿದ್ಧಿ ವಿನಾಯಕ ಕಾಲೇಜು, ಬ್ಯಾಂಕ್‌, ಉಪ ಆರೋಗ್ಯ ಕೇಂದ್ರ, ಕೆರಾಡಿ ಶಾಲೆ, ಮೂಡುಗಲ್ಲು ಕಡೆಗೂ ಸಂಪರ್ಕ ಕಲ್ಪಿಸುವ ರಸ್ತೆ ಇದೆ. ನಿತ್ಯ ನೂರಾರು ವಾಹನ, ಬಸ್‌ಗಳು, ಶಾಲಾ ವಾಹನಗಳು ಸಂಚರಿಸುವ ಮಾರ್ಗ ಇದಾಗಿದೆ. ಕೆರಾಡಿ ಭಾಗದ ಶೇ. 90ರಷ್ಟು ಮಂದಿ ಇದೇ ರಸ್ತೆಯನ್ನು ಆಶ್ರಯಿಸಿದ್ದಾರೆ.

ಕೇವಲ ಒಂದು ಕಿ.ಮೀ. ದೂರದ ರಸ್ತೆಯ 400 ಮೀ.ನಷ್ಟು ಈಗಲೇ ಹಲವೆಡೆ ಈ ರಸ್ತೆ ಹದಗೆಟ್ಟಿದ್ದು, ಇನ್ನು ಮಳೆ ಮುಂದುವರಿದಷ್ಟು ರಸ್ತೆ ಮಧ್ಯೆ ಇನ್ನಷ್ಟು ಕಡೆಗಳಲ್ಲಿ ಹೊಂಡ-ಗುಂಡಿ ಬೀಳುವ ಸಾಧ್ಯತೆಗಳಿವೆ.

ಕಾಂಕ್ರೀಟ್‌ ಕಾಮಗಾರಿಗೆ ಬೇಡಿಕೆ

ಹಾಡಿಬಿರ್ಗಿ ಕ್ರಾಸ್‌-ಕೆರಾಡಿ ರಸ್ತೆ ಹಾಳಾಗಲು ಮುಖ್ಯ ಕಾರಣ ರಸ್ತೆಯ ಎರಡೂ ಬದಿಗಳಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದೇ ಆಗಿದೆ. ಒಂದೆರಡು ಕಡೆಗಳಲ್ಲಿ ಅಗತ್ಯವಿದ್ದರೂ ಮೋರಿ ಅಳವಡಿಸಿಲ್ಲ. ಅದಲ್ಲದೆ ಒಂದು ಕಡೆಯಿಂದ ಜೇಡಿಮಣ್ಣಿನ ಬರೆಯಿದ್ದು, ಅದು ವರ್ಷ- ವರ್ಷವೂ ಮಳೆಗಾಲದಲ್ಲಿ ಕುಸಿಯುತ್ತದೆ. ಹಾಗಾಗಿ ಈ 400 ಮೀ. ಉದ್ದದ ರಸ್ತೆಗೆ ಡಾಮರು ಹಾಕಿದರೂ ಒಂದೇ ಮಳೆಗಾಲದಲ್ಲಿ ಎದ್ದು ಹೋಗುತ್ತದೆ. ಕಾಂಕ್ರೀಟ್‌ಕಾಮಗಾರಿ ನಡೆಸಿದರೆ ಮಾತ್ರ ಅನುಕೂಲವಾಗಬಹುದು ಎನ್ನುವುದು ಜನಾಭಿಪ್ರಾಯ.

ಕಾಂಕ್ರೀಟ್‌ ಕಾಮಗಾರಿಗಾಗಿ ಶಾಸಕರಿಗೆ ಮನವಿ: ಕೆರಾಡಿ ಪಂ. ವ್ಯಾಪ್ತಿಯಲ್ಲಿ ಶಾಸಕರಿಂದ 18 ಕೋ.ರೂ. ಅನುದಾನವನ್ನು ನೀಡಿದ್ದಾರೆ. ಈ ಪಂಚಾಯತ್‌ ರಸ್ತೆಯು ಹದಗೆಟ್ಟು ಜನಸಾಮಾನ್ಯರಿಗೆ ತೊಂದರೆ ಆಗುತ್ತಿರುವ ಬಗ್ಗೆ ನಾವು ಶಾಸಕರ ಗಮನಕ್ಕೆ ತಂದಿದ್ದೇವೆ. ಕಾಂಕ್ರೀಟ್‌ ಕಾಮಗಾರಿಗಾಗಿ ಅನುದಾನಕ್ಕೆ ಮನವಿ ಸಲ್ಲಿಸಿದ್ದೇವೆ. ಮುಂದಿನ ಹಂತದಲ್ಲಿ ಆದ್ಯತೆ ನೆಲೆಯಲ್ಲಿ ಈ ರಸ್ತೆಗೆ ಅನುದಾನ ನೀಡುವ ಭರವಸೆ ನೀಡಿದ್ದಾರೆ. – ಸುದರ್ಶನ್‌ ಶೆಟ್ಟಿ, ಕೆರಾಡಿ ಗ್ರಾ.ಪಂ. ಉಪಾಧ್ಯಕ್ಷರು

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Kundapura: ಗುಲ್ವಾಡಿ ಪರಿಸರದ ಬಾವಿ ನೀರೆಲ್ಲ ಜನವರಿಯಲ್ಲೇ ಉಪ್ಪು

2

Kundapura: ಅಪಘಾತ ಇಳಿಕೆ, ಅಪರಾಧ ಏರಿಕೆ

Kota: ಎಚ್ಚರ ತಪ್ಪಿದರೆ ತಪ್ಪದು ಆಪತ್ತು; ಹೆಚ್ಚುತ್ತಿರುವ ಹೆಜ್ಜೇನು ದಾಳಿ ಭೀತಿ

Kota: ಎಚ್ಚರ ತಪ್ಪಿದರೆ ತಪ್ಪದು ಆಪತ್ತು; ಹೆಚ್ಚುತ್ತಿರುವ ಹೆಜ್ಜೇನು ದಾಳಿ ಭೀತಿ

Kundapura ಬಸ್ರೂರು: ಯುವಕ ಆತ್ಮಹತ್ಯೆ

Kundapura ಬಸ್ರೂರು: ಯುವಕ ಆತ್ಮಹತ್ಯೆ

5

Network Problem: ಕಾಲ ಬುಡದಲ್ಲಿ ಟವರ್‌ ಇದ್ದರೂ ಕಾಲ್‌ಗಾಗಿ 4 ಕಿ.ಮೀ. ನಡಿಬೇಕು!

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.