ಖ್ಯಾತ ಹಾಸ್ಯ ನಟ ಟೆನ್ನಿಸ್ ಕೃಷ್ಣ ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆ
ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನ
Team Udayavani, Aug 4, 2022, 3:08 PM IST
ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣರವರು ಆಮ್ ಆದ್ಮಿ ಪಕ್ಷಕ್ಕೆ ಗುರುವಾರ ಸೇರ್ಪಡೆಯಾದರು. ಹೊಟೇಲ್ ಪರಾಗ್‌ನಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ಕೃಷ್ಣರವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಎಎಪಿ ಸೇರ್ಪಡೆ ಬಳಿಕ ಮಾತನಾಡಿದ ಟೆನ್ನಿಸ್ ಕೃಷ್ಣ, “ದೇಶದ ರಾಜಕೀಯದಲ್ಲಿ ಬದಲಾವಣೆ ತರುವ ಪ್ರಯತ್ನದಲ್ಲಿ ಆಮ್ ಆದ್ಮಿ ಪಾರ್ಟಿ ಯಶಸ್ವಿಯಾಗುತ್ತಿದೆ. ದೆಹಲಿಯಲ್ಲಿ ಶಿಕ್ಷಣ, ಆರೋಗ್ಯ, ಕ್ರೀಡೆ ಮುಂತಾದ ಕ್ಷೇತ್ರಗಳಲ್ಲಿ ಸಾಧಿಸಿ ತೋರಿಸಿರುವ ಎಎಪಿಯು ಈಗ ಪಂಜಾಬ್‌ನಲ್ಲೂ ಮೋಡಿ ಮಾಡುತ್ತಿದೆ. ಭ್ರಷ್ಟ ಪಕ್ಷಗಳನ್ನು ಬದಿಗೊತ್ತಿ ದೇಶವನ್ನು ಕಾಪಾಡಲು ಎಎಪಿಯಿಂದ ಮಾತ್ರ ಸಾಧ್ಯ. ಸಾಮಾನ್ಯ ಜನರ ಬಗ್ಗೆ ಅಪಾರ ಕಾಳಜಿಯುಳ್ಳ ಆಮ್ ಆದ್ಮಿ ಪಾರ್ಟಿಯ ಮೂಲಕ ರಾಜಕೀಯ ಪ್ರವೇಶಿಸುತ್ತಿರುವುದಕ್ಕೆ ಹೆಮ್ಮೆಯಾಗುತ್ತಿದೆ. ಎಎಪಿಯನ್ನು ಬಳಸಿಕೊಂಡು ದೇಶದ ಯುವಜನತೆ ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಪ್ರವೇಶಿಸಬೇಕು” ಎಂದರು.
ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮಾತನಾಡಿ, “ಕರ್ನಾಟಕದಲ್ಲಿ ಆಮ್ ಆದ್ಮಿ ಪಾರ್ಟಿಯು ಭದ್ರವಾಗಿ ಬೇರೂರುತ್ತಿದೆ. ಸಿನಿಮಾ ಸಾಧಕರು, ದಕ್ಷ ಅಧಿಕಾರಿಗಳು, ರೈತ ನಾಯಕರು, ಸಮಾಜಸೇವಕರು, ವಕೀಲರು, ಉಪನ್ಯಾಸಕರು ಮುಂತಾದ ವಿವಿಧ ಕ್ಷೇತ್ರದ ಗಣ್ಯರು ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ದೇಶಕ್ಕೆ ಆಮ್ ಆದ್ಮಿ ಪಾರ್ಟಿಯೊಂದೇ ಆಶಾಕಿರಣ ಎಂಬುದು ಯುವಜನತೆಗೆ ಮನವರಿಕೆಯಾಗುತ್ತಿದೆ. ಜನಪ್ರಿಯ ನಟರಾದ ಟೆನಿಸ್ ಕೃಷ್ಣರವರ ಸೇರ್ಪಡೆಯಿಂದ ಪಕ್ಷಕ್ಕೆ ಇನ್ನಷ್ಟು ಬಲ ಬಂದಿದೆ. ಸ್ವಚ್ಛ ರಾಜಕೀಯ ಹಾಗೂ ಪಾರದರ್ಶಕ ಆಡಳಿತವೇ ನಮ್ಮೆಲ್ಲರ ಧ್ಯೇಯವಾಗಿದ್ದು, ಇದನ್ನು ಸಾಧಿಸಲು ಒಗ್ಗಟ್ಟಿನಿಂದ ಶ್ರಮಿಸಲಿದ್ದೇವೆ” ಎಂದರು.
ಇದನ್ನೂ ಓದಿ: ಮಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರಿಗೆ ಇನ್ನು ಹೊಸ ನಿಯಮ…
ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಮಾತನಾಡಿ, “ಟೆನಿಸ್ ಕೃಷ್ಣರವರ ತಂದೆಯವರು ಕೆಂಗಲ್ ಹನುಮಂತಯ್ಯ, ವೀರೇಂದ್ರ ಹೆಗ್ಗಡೆ ಸೇರಿದಂತೆ ಅನೇಕ ಗಣ್ಯರಿಗೆ ಟೆನಿಸ್ ತರಬೇತಿ ನೀಡಿದವರು. ಕೃಷ್ಣರವರು ಕೂಡ ತಂದೆಯ ಹಾದಿಯಲ್ಲೇ ಸಾಗಿ ಟೆನಿಸ್ ತರಬೇತಿ ನೀಡಿ, ಟೆನಿಸ್ ಕೃಷ್ಣ ಎಂದೇ ಮನೆಮಾತಾಗಿದ್ದಾರೆ. ಕನ್ನಡದ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಹಾಸ್ಯನಟರಾಗಿ ನಗಿಸುವ ಮೂಲಕ ಕನ್ನಡಿಗರ ಆಯುಸ್ಸು ಹೆಚ್ಚಿಸಿದ್ದಾರೆ. ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಶಂಕರ್‌ನಾಗ್ ಮುಂತಾದ ಮೇರುನಟರ ಜತೆ ಅಭಿನಯಿಸಿದ ಕೃಷ್ಣರವರು ಇಂದು ಆಮ್ ಆದ್ಮಿ ಪಾರ್ಟಿ ಸೇರುತ್ತಿರುವುದು ಪಕ್ಷಕ್ಕೆ ಹೆಮ್ಮೆಯ ವಿಚಾರ” ಎಂದರು.
ಇದೇ ಸಂದರ್ಭ ಪಕ್ಷದ ಮುಖಂಡರುಗಳಾದ ಸಂಚಿತ್ ಸೆಹ್ವಾನಿ , ಜಗದೀಶ್ ವಿ .ಸದಂ , ಪುರುಷೋತ್ತಮ್ ,ಸುರೇಶ್ ರಾಥೋಡ್, ಉಷಾ ಮೋಹನ್, ಚನ್ನಪ್ಪಗೌಡ ನೆಲ್ಲೂರು, ಜ್ಯೋತಿಷ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.