ಮನೆಯಂಗಳದಲ್ಲಿ ರಾಷ್ಟ್ರಧ್ವಜ ಹಾರಿಸಿ
ರಾಷ್ಟ್ರಧ್ವಜಗಳ ಮಾರಾಟ ಕೇಂದ್ರಗಳನ್ನಾಗಿ ಗುರುತಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
Team Udayavani, Aug 4, 2022, 2:32 PM IST
ಹೊಸಪೇಟೆ: ವಿಜಯನಗರ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಆಚರಣೆ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನದ ಹಿನ್ನಲೆಯಲ್ಲಿ ಮನೆ ಮನೆಯಲ್ಲೂ ರಾಷ್ಟ್ರೀಯ ಧ್ವಜ ಅಭಿಯಾನವನ್ನು ಆ. 13ರಿಂದ ಆ.15ರವರೆಗೆ ಆಚರಿಸಲಾಗುತ್ತಿದ್ದು, ಸಾರ್ವಜನಿಕರು ತಮ್ಮ ಮನೆಯ ಅಂಗಳದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿ ದೇಶಭಕ್ತಿ, ದೇಶಾಭಿಮಾನ ಬಿಂಬಿಸುವ ಮೂಲಕ ನಮ್ಮ ರಾಷ್ಟ್ರ ಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ತಿಳಿಸಿದ್ದಾರೆ.
ದೇಶಾದ್ಯಂತ ಸ್ವಾತಂತ್ರ್ಯದ 75ರ ಸಂಭ್ರಮವನ್ನು ವೈವಿಧ್ಯಮಯವಾಗಿ ಮತ್ತು ವರ್ಣರಂಜಿತವಾಗಿ ಆಚರಿಸಲಾಗುತ್ತಿದೆ. ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರದ “ಹರ್ ಘರ್ ತಿರಂಗಾ’ ಘೋಷ ವಾಕ್ಯದೊಂದಿಗೆ 2022ರ ಆಗಸ್ಟ್ 13ರಿಂದ 15ರವರೆಗೆ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ವಿಜಯನಗರ ಜಿಲ್ಲೆಯ ಪ್ರತಿ ಗ್ರಾಮದ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಪುರಸಭೆ ಹಾಗೂ ನಗರಸಭೆ ಕಚೇರಿಗಳನ್ನು ರಾಷ್ಟ್ರಧ್ವಜಗಳ ಮಾರಾಟ ಕೇಂದ್ರಗಳನ್ನಾಗಿ ಗುರುತಿಸಿ ಮಾರಾಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ.
ಸರ್ಕಾರ ನಿಗಪಡಿಸಿರುವ ದರದಲ್ಲಿ ರಾಷ್ಟ್ರಧ್ವಜಗಳನ್ನು ಭಾರತ ಸರ್ಕಾರದ ಗೃಹ ವ್ಯವಹಾರಗಳ ಮಂತ್ರಾಲಯದ ದಿ-ಫ್ಲಾಗ್ ಕೋಡ್ ಆಫ್ ಇಂಡಿಯಾ-2022 (ತಿದ್ದುಪಡಿ-2021) ಅನುಸರಿಸಿ ತಮ್ಮ ತಮ್ಮ ಮನೆಯ ಅಂಗಳದಲ್ಲಿ ಧ್ವಜವನ್ನು ಹಾರಿಸಿ “ಹರ್ ಘರ್ ತಿರಂಗಾ’ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಸಮಸ್ತ ಸಾರ್ವಜನಿಕರಲ್ಲಿ ಜಿಲ್ಲಾ ಧಿಕಾರಿಗಳು ಕೋರಿದ್ದಾರೆ.
ಈ ಅಭಿಯಾನ ಮುಕ್ತಾಯವಾದ ನಂತರ ರಾಷ್ಟ್ರಧ್ವಜವನ್ನು ತಮ್ಮ ಮನೆಯಲ್ಲಿ ಸುರಕ್ಷಿತವಾಗಿ ಕಾಯ್ದಿರಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಮತ್ತು 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅವರು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
ಆಕಳುಗಳ ಕೆಚ್ಚಲು ಕೊಯ್ದ ಪ್ರಕರಣ; ಶಾಸಕ,ಉಸ್ತುವಾರಿ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ
Makar Sankranti: ಹಂಪಿಗೆ ಹರಿದು ಬಂದ ಭಕ್ತ ಜನ ಸಾಗರ!
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
ಗೋಡ್ಸೆ ವಿಚಾರಧಾರೆಗಳ ಹೊಂದಿರುವ ಬಿಜೆಪಿಗರು ಗಾಂಧಿ ವಿಚಾರಗಳ ಒಪ್ಪಲ್ಲ: ಸುರ್ಜೇವಾಲಾ
BCCI 10-point ಆದೇಶ ಸಮಸ್ಯೆ; ಮೀಸಲಾತಿ ಹೊಂದಿದ್ದೇವೆ ಎಂದು ರೋಹಿತ್ ಸುಳಿವು
Ranji Trophy; ಸೌರಾಷ್ಟ್ರ ವಿರುದ್ಧ ರಣಜಿ ಪಂದ್ಯದಿಂದ ಹೊರಗುಳಿದ ಕೊಹ್ಲಿ
ವಿಜಯೇಂದ್ರ ಪೂರ್ಣಾವಧಿ ಬಿಜೆಪಿ ಅಧ್ಯಕ್ಷರಾಗಿರ್ತಾರೆನ್ನುವ ವಿಶ್ವಾಸವಿದೆಯಾ?: ಎಂ.ಬಿ.ಪಾಟೀಲ್
Puthige Matha: ವಿಶ್ವ ಗೀತಾ ಪರ್ಯಾಯಕ್ಕೆ ಇಂದಿಗೆ ವರ್ಷ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.