ಹಳೆಯಂಗಡಿ: ನದಿಗೆ ಹಾರಿ ಮಹಿಳೆ ಆತ್ಮಹತ್ಯೆ
Team Udayavani, Aug 4, 2022, 7:15 PM IST
ಹಳೆಯಂಗಡಿ: ಮಾನಸಿಕವಾಗಿ ನೊಂದು ಮಹಿಳೆಯೋರ್ವರು ಪಾವಂಜೆ ಬಳಿಯ ನಂದಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಬೆಳಕಿಗೆ ಬಂದಿದೆ.
ಹಳೆಯಂಗಡಿ ಲೈಟ್ಹೌಸ್ ಬಳಿಯ ನಿವಾಸಿ ನರ್ಸಿ (70) ಮೃತ ಮಹಿಳೆ. ಅವರು ಕಳೆದ ಕೆಲವು ತಿಂಗಳಿನಿಂದ ಮಾನಸಿಕವಾಗಿ ನೊಂದು ಖನ್ನತೆಯಿಂದ ಬಳಲುತ್ತಿದ್ದರು ಎಂದು ಕುಟುಂಬದವರು ಹೇಳಿದ್ದಾರೆ ಎಂದು ಮೂಲ್ಕಿ ಪೊಲೀಸರು ತಿಳಿಸಿದ್ದಾರೆ.
ನರ್ಸಿ ಅವರ ಶವವು ಪಡುಪಣಂಬೂರು ಗ್ರಾಮ ಪಂಚಾಯತ್ನ ಹೊಗೆಗುಡ್ಡೆ ಬಳಿಯ ನಂದಿನಿ ನದಿಯ ತೀರದಲ್ಲಿ ಮಧ್ಯಾಹ್ನ ಪತ್ತೆಯಾಗಿತ್ತು. ಪಡುಪಣಂಬೂರು ಗ್ರಾ.ಪಂ. ಅಧ್ಯಕ್ಷೆ ಮಂಜುಳಾ ಅವರ ಗಮನಕ್ಕೆ ಸ್ಥಳೀಯರು ತಂದಿದ್ದರಿಂದ ಅವರು ಸ್ಥಳಕ್ಕೆ ಭೇಟಿ ನೀಡಿ ಮೂಲ್ಕಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮೂಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಎರಡು ಬಾರಿ ಪ್ರಯತ್ನ:
ಮಾನಸಿಕವಾಗಿ ನೊಂದಿದ್ದ ನರ್ಸಿ ಅವರು ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಯತ್ನ ನಡೆಸಿದ್ದರು. ಒಮ್ಮೆ ರೈಲು ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನ ನಡೆಸಿದ್ದರು. ಬುಧವಾರ ರಾತ್ರಿ ತಮ್ಮ ಕೋಣೆಯಲ್ಲಿ ಮಲಗಿದ್ದ ನರ್ಸಿ ಅವರು ಬೆಳಗ್ಗೆಯಿಂದ ಕಾಣೆಯಾಗಿದ್ದರು. ಮಧ್ಯಾಹ್ನ ಅವರ ಶವ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.