ಕೌಟುಂಬಿಕ ಕಲಹ: ಪತ್ನಿ-ಪುತ್ರನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆಗೆ ಯತ್ನ
Team Udayavani, Aug 5, 2022, 3:39 PM IST
ಮಳವಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿ ಮತ್ತು ಮಗನ ಮೈಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದೇಗೌಡ ಎಂಬುವವರೇ ಪತ್ನಿ ಮತ್ತು ಮಗನಿಗೆ ಹಚ್ಚಿದ ಪತಿಯಾಗಿದ್ದು, ಬುಧವಾರ ರಾತ್ರಿ ಕ್ಷುಲಕ ಕಾರಣಕ್ಕೆ ಪತ್ನಿ ಮಹದೇವಮ್ಮ ಜೊತೆಗೆ ಜಗಳ ಆರಂಭವಾಗಿದ್ದು, ಜಗಳ ವಿಕೋಪಕ್ಕೆ ಹೋದಾಗ ಪತ್ನಿಯ ಮೈ ಮೇಲೆ ಸೀಮೆ ಎಣ್ಣೆ ಸುರಿಯುತ್ತಿದ್ದ ವೇಳೆ ತಡೆಯಲು ಬಂದ ಮಗ ಸಿದ್ದರಾಜು ಮೇಲೂ ಸಹ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲ್ಲಲು ಯತ್ನಿಸಿದ್ದಾರೆ. ಘಟನೆಯಲ್ಲಿ ಮಹದೇವಮ್ಮ ಹಾಗೂ ಸಿದ್ದರಾಜು ಅವರಿಗೆ ತೀವ್ರ ಗಾಯವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ:ಪಾನ್ ಇಂಡಿಯಾ ಸಿನಿಮಾದಂತೆ ಪಾನ್ ಇಂಡಿಯಾ ಮಾತಿಗೆ ಸಾಥ್ ನೀಡುತ್ತಿದೆ ಕೂ ಆಪ್‌ನ MLK ಫೀಚರ್
ಗಲಾಟೆ ಜೋರಾದ ಹಿನ್ನಲೆಯಲ್ಲಿ ಅಕ್ಕಪಕ್ಕದ ಮನೆಯವರು ಗಾಯಾಳುಗಳನ್ನು ತಕ್ಷಣವೇ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸ್ಥಳಕ್ಕೆ ಬೆಳಕವಾಡಿ ಪಿಎಸ್ಐ ವಿ.ಸಿ.ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೃತ್ಯ ಎಸಗಿದ್ದ ಸಿದ್ದೇಗೌಡನ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲಿಸಿಕೊಂಡಿರುವ ಬೆಳಕವಾಡಿ ಪೊಲೀಸರು ಗುರುವಾರ ರಾತ್ರಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.