![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 6, 2022, 10:56 AM IST
ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಹಿಳೆಯರಿಗೆ ರಕ್ಷಾಬಂಧನದ ಉಡುಗೊರೆ ನೀಡಿದರು. ರಕ್ಷಾ ಬಂಧನದ ಸಂದರ್ಭದಲ್ಲಿ ರಾಜ್ಯದಲ್ಲಿ 48 ಗಂಟೆಗಳ ಕಾಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
“ರಕ್ಷಾಬಂಧನ ಸಂದರ್ಭದಲ್ಲಿ, ಉತ್ತರ ಪ್ರದೇಶ ರಾಜ್ಯ ಸಾರಿಗೆ ಸಂಸ್ಥೆಯು ರಾಜ್ಯದ ಎಲ್ಲಾ ಮಹಿಳೆಯರ ಸುರಕ್ಷಿತ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯವನ್ನು ಒದಗಿಸಬೇಕು” ಎಂದು ಉತ್ತರ ಪ್ರದೇಶ ಸಿಎಂ ಕಚೇರಿ ಟ್ವೀಟ್ ಮಾಡಿದೆ.
ಆಗಸ್ಟ್ 10 ರ ಮಧ್ಯರಾತ್ರಿಯಿಂದ ಆಗಸ್ಟ್ 12 ರ ಮಧ್ಯರಾತ್ರಿಯವರೆಗೆ ಮಹಿಳೆಯರು 48 ಗಂಟೆಗಳ ಕಾಲ ಉಚಿತವಾಗಿ ಪ್ರಯಾಣಿಸಬಹುದು.
ಆಜಾದಿ ಕಾ ಅಮೃತ್ ಮಹೋತ್ಸವವನ್ನು ಗುರುತಿಸುವ ಉದ್ದೇಶದಿಂದ ಈ ಪ್ರಕಟಣೆ ಬಂದಿದೆ. 48 ಗಂಟೆಗಳ ಅವಧಿಗೆ ರಾಜ್ಯಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಲಭ್ಯವಿರುತ್ತದೆ.
ಇದನ್ನೂ ಓದಿ:ವಾಹನ ಮಾಲಿಕರೇ ಗಮನಿಸಿ.. ರಾಜ್ಯದಲ್ಲೂ ಬರಲಿದೆ ಗುಜರಿ ನೀತಿ: ಏನಿದು ಸ್ಕ್ರ್ಯಾಪ್ ರೂಲ್ಸ್?
ಇದಕ್ಕೂ ಮುನ್ನ, ಭಾನುವಾರ ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಮಹಿಳೆಯರ ಘನತೆಯನ್ನು ಎತ್ತಿಹಿಡಿಯಬೇಕು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು. ಅವರು ಬೆಂಗಳೂರಿನ ರಾಜಭವನದಲ್ಲಿ ಸ್ಥಳೀಯ ವಿವಿಧ ಶಾಲೆಗಳ ಶಾಲಾ ಮಕ್ಕಳೊಂದಿಗೆ ರಕ್ಷಾಬಂಧನ ಆಚರಿಸಿದ್ದರು.
“ರಕ್ಷಾಬಂಧನದ ಶುಭಾಶಯಗಳು! ರಕ್ಷಾಬಂಧನವು ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ಗೌರವದ ವಿಶೇಷ ಮತ್ತು ಆಳವಾದ ಬೇರೂರಿರುವ ಬಾಂಧವ್ಯದ ಆಚರಣೆಯಾಗಿದೆ. ಈ ಮಂಗಳಕರ ದಿನದಂದು, ಮಹಿಳೆಯರ ಘನತೆಯನ್ನು ಎತ್ತಿಹಿಡಿಯಲು ಮತ್ತು ಅವರಿಗೆ ಎಲ್ಲಾ ಸಮಯದಲ್ಲೂ ಸುರಕ್ಷಿತ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಸಂಕಲ್ಪ ಮಾಡೋಣ” ಎಂದು ಉಪರಾಷ್ಟ್ರಪತಿ ಕಚೇರಿ ಟ್ವೀಟ್ ಮಾಡಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.