ಮಡಿಕೇರಿ : ಹಾಡಹಗಲೇ ನಗರದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು
Team Udayavani, Aug 6, 2022, 11:59 AM IST
ಮಡಿಕೇರಿ : ಅಭ್ಯತ್ ಮಂಗಲ ವ್ಯಾಪ್ತಿಯಲ್ಲಿ ಹಾಡಹಗಲೇ ಸಂಚರಿಸುತ್ತಿರುವ ಕಾಡಾನೆಗಳ ಹಿಂಡು ಆತಂಕವನ್ನು ಸೃಷ್ಟಿಸಿದೆ. ಬಹುತೇಕ ಗದ್ದೆಗಳು ಹಾಗೂ ತೋಟಗಳು ಅವುಗಳ ದಾಳಿಯಿಂದ ನಾಶವಾಗಿವೆ.
ಒಂದು ವಾರದಿಂದ ಈ ಭಾಗದಲ್ಲಿ ಮರಿಯಾನೆಗಳೊಂದಿಗೆ ಗಂಡಾನೆ ಹಾಗೂ ಹೆಣ್ಣಾನೆ ಸಂಚರಿಸುತ್ತಿದ್ದು, ಮುಖ್ಯ ರಸ್ತೆಯ ಮೂಲಕ ಗದ್ದೆ, ತೋಟಗಳಿಗೆ ಲಗ್ಗೆ ಇಡುತ್ತಿವೆ.
ಶುಕ್ರವಾರ ಅಂಚೆಮನೆ ಸುಧಿ ಹಾಗೂ ಆದರ್ಶ ಅವರ ಗದ್ದೆಗಳಿಗೆ ನುಗ್ಗಿದ ಆನೆಗಳ ಹಿಂಡು ಸಾಕಷ್ಟು ಹಾನಿ ಮಾಡಿದೆ. 15 ದಿನಗಳ ಹಿಂದೆಯಷ್ಟೇ ಭತ್ತದ ಬಿತ್ತನೆ ಮಾಡಿದ್ದು, ಮುಂದಿನ ವಾರ ನಾಟಿ ಮಾಡಲು ತಯಾರಿ ನಡೆಸುತ್ತಿರುವಾಗಲೇ ಎಲ್ಲವೂ ನಾಶವಾಗಿವೆ. ಅಂಚೆಮನೆ ಕುಟುಂಬದ ಕಾಫಿ ಮತ್ತು ಅಡಿಕೆ ತೋಟಕ್ಕೂ ಹಾನಿ ಯಾದೆ.
ರಸ್ತೆಯಲ್ಲೇ ಸಂಚಾರ!
ಸಂಜೆಯಾಗುತ್ತಲೇ ರಸ್ತೆಗಳಲ್ಲಿ ಕಾಡಾನೆಗಳ ಹಿಂಡಿನ ಸಂಚಾರ ಕಂಡು ಬರುತ್ತಿದ್ದು, ಶಾಲೆ ಬಿಟ್ಟು ಮನೆಗೆ ಬರುವ ಮಕ್ಕಳು, ಕಾರ್ಮಿಕರು ಭಯಗೊಂಡಿದ್ದಾರೆ. ಅತ್ತಿಮಂಗಲದಿಂದ ಒಂಟಿಯಂಗಡಿ ವರೆಗೆ ಬೀದಿದೀಪ ಗಳಿಲ್ಲ. ಕಾರ್ಗತ್ತಲಿನಲ್ಲಿ ಕಾಡಾನೆಗಳು ಸಂಚರಿ ಸುವಾಗ ಅಪಾಯ ಎದುರಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮಂಗಳೂರು ವಿಶ್ವವಿದ್ಯಾನಿಲಯ : ತುರ್ತಾಗಿ ಫಲಿತಾಂಶ ನೀಡಲು “ಆದ್ಯತೆ ಪರೀಕ್ಷೆ’ ಸೂತ್ರ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.