ಪ್ರತಿ ಮನೆ ಮೇಲೂ ತ್ರಿವರ್ಣ ಧ್ವಜ: ಜೈಲು ಹಕ್ಕಿಗಳ ರಾಷ್ಟ್ರ ಸೇವೆ !
Team Udayavani, Aug 7, 2022, 7:25 AM IST
ಲಕ್ನೋ: ಸ್ವಾತಂತ್ರ್ಯ ಅಮೃತೋತ್ಸವದಲ್ಲಿ ಜೈಲು ಹಕ್ಕಿಗಳು ಹೇಗೆ ಪಾಲ್ಗೊಳ್ಳಬಹುದು? ಇಂಥದೊಂದು ಪ್ರಶ್ನೆಗೆ ಉತ್ತರ ಪ್ರದೇಶದ ಮಹಿಳಾ ಜೈಲುಗಳ ಹಕ್ಕಿಗಳು ‘ನಾವು ಧ್ವಜ ತಯಾರಿಸಿ ಕೊಡುತ್ತೇವೆ, ನೀವು ಹಾರಿಸಿ’ ಎಂದಿದ್ದಾರೆ.
ಈ ವರ್ಷ ವಿಶೇಷವಾಗಿ ಎಲ್ಲರ ಮನೆ ಮೇಲೂ ತ್ರಿವರ್ಣ ಧ್ವಜ ಹಾರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಧ್ವಜಗಳಿಗೂ ಬೇಡಿಕೆ ಹೆಚ್ಚಾಗಿದೆ.
ಇದನ್ನೇ ಆಧಾರವಾಗಿಟ್ಟುಕೊಂಡು ಉತ್ತರ ಪ್ರದೇಶದ ವಿವಿಧ ಜೈಲುಗಳ ಹಕ್ಕಿಗಳು ಆಗಸ್ಟ್ 15 ರೊಳಗೆ ಸುಮಾರು 2 ಲಕ್ಷ ರಾಷ್ಟ್ರ ಧ್ವಜಗಳನ್ನು ಸಿದ್ಧಪಡಿಸಿಕೊಡಲು ಮುಂದಾಗಿದ್ದಾರೆ.
ಈಗಾಗಲೇ ರಾಷ್ಟ್ರಧ್ವಜ ತಯಾರಿ ಕಾರ್ಯ ಭರದಿಂದ ಸಾಗಿದೆ. ಈ ರಾಷ್ಟ್ರ ಧ್ವಜಗಳು ಮಾರುಕಟ್ಟೆಯಲ್ಲಿ ಖರೀದಿಗೂ ಲಭ್ಯವಾಗಲಿದೆ.
ಲಕ್ನೋ, ಶಹಜಾನ್‌ಪುರ್, ಬರೇಲಿ, ಮೀರತ್, ಬಹರಿಚ್, ಗಾಝಿಯಾಬಾದ್, ಆಗ್ರಾ ಸೇರಿದಂತೆ ವಿವಿಧ ಜೈಲುಗಳ ನೂರಾರು ಕೈದಿಗಳು ಈ ರಾಷ್ಟ್ರ ಧ್ವಜ ತಯಾರಿಸುವ ರಾಷ್ಟ್ರ ಕಾರ್ಯದಲ್ಲಿ ಭಾಗಿಯಾಗಲಿದ್ದಾರೆ ಎಂದು ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.