![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 7, 2022, 4:58 PM IST
ಹುಮನಾಬಾದ: ಸಿಂಧೋಳ್ಳು ಜಾತಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಸಿಂಧೋಳ ಸಮಾಜ ಹಾಗೂ ಕನ್ನಡ ಸೇನೆ ಕರ್ನಾಟಕ ನೇತೃತ್ವದಲ್ಲಿ ಶನಿವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಪಟ್ಟಣದ ಶಿವಪುರ ಬಡಾವಣೆಯಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಕಳೆದ ಮೂರು ವರ್ಷಗಳಿಂದ ಸಿಂದೋಳ್ಳು ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ. ಭಿಕ್ಷಾಟನೆ ಮಾಡಿಕೊಂಡು ಜೀವನ ನಡೆಸುತ್ತಿರುವ ಸಮುದಾಯಕ್ಕೆ ಸೂಕ್ತ ಸೌಲಭ್ಯಗಳು ದೊರೆಯುತ್ತಿಲ್ಲ. ಜಾತಿ ಪ್ರಮಾಣ ಪತ್ರ ದೊರೆಯದ ಹಿನ್ನೆಲೆಯಲ್ಲಿ ವಿವಿಧ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಕೂಡಲೇ ಸರ್ಕಾರ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗಾಗಿ ಸೌಕರ್ಯ ಹಾಗೂ ಸೌಲಭ್ಯ ಜತೆಗೆ ಜಾತಿ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಪ್ರದೀಪಕುಮಾರಗೆ ಮನವಿ ಸಲ್ಲಿಸಲಾಯಿತು. ನಂತರ ಪಟ್ಟಣದ ಶಾಸಕರ ಗೃಹ ಕಚೇರಿಗೆ ಭೇಟಿ ನೀಡಿದ ಪ್ರತಿಭಟನಾಕಾರರು ಸಿಂಧೋಳ್ಳು ಸಮಾಜದ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂದು ಒತ್ತಾಯಿಸಿದರು.
ಶಾಸಕ ರಾಜಶೇಖರ ಪಾಟೀಲ್ ಮನವಿ ಸ್ವೀಕರಿಸಿ, ಸಮಾಜಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ಕನ್ನಡ ಸೇನೆ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ದತ್ತು ಲದ್ದಿ, ಯುವ ಕಾಂಗ್ರೆಸ್ ಅಧ್ಯಕ್ಷ ಉಮೇಶ ಜಮಗಿ, ಕನ್ನಡ ಸೇನೆ ಸುಮಿತ್ರಾ ಎಸ್. ಪರೀಟ್, ನಾಗರಾಜ ಗಾದಾ, ಸೋಮು ಪರೀಟ್, ವೀರಯ್ನಾ ಸ್ವಾಮಿ, ಲಕ್ಷ್ಮಣರಾವ್ ಹಣಕುಣಿ ಸೇರಿದಂತೆ ಸಿಂಧೋಳ್ಳು ಸಮಾಜದ ಮುಖಂಡರು ಇದ್ದರು.
Bidar: ಕೊನೆಗೂ ಎಟಿಎಂ ಹಣ ದರೋಡೆ – ಶೂಟೌಟ್ ಪ್ರಕರಣದ ಆರೋಪಿಗಳ ಗುರುತು ಪತ್ತೆ
Bidar: ಮದುವೆ ವಿಚಾರದಲ್ಲಿ ಜಗಳ… ಮಗಳನ್ನೇ ಹತ್ಯೆಗೈದು ಪರಾರಿಯಾದ ತಂದೆ
Bidar: ಸಾಲ ಬಾಧೆ ತಾಳಲಾರದೆ ಯುವ ರೈತ ನೇಣಿಗೆ ಶರಣು
Bidar ಪಲ್ಟಿಯಾದ ಕಾರು; ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ಕೋಟ್ಯಂತರ ರೂ ಮೌಲ್ಯದ ಗಾಂಜಾ
Budget 2025: ಕಲ್ಯಾಣ ಕರ್ನಾಟಕ ಕಡೆಗಣಿಸಿದ ಕೇಂದ್ರ: ಈಶ್ವರ ಖಂಡ್ರೆ ಕಿಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.