ನೂತನ ಸಂಸತ್ ಭವನಕ್ಕೆ ”ಅನುಭವ ಮಂಟಪ” ನಾಮಕರಣ ಮಾಡಲು ಆಗ್ರಹ
ಶಿಫಾರಸು ಮಾಡುವಂತೆ ಸಿಎಂ ಬೊಮ್ಮಾಯಿ ಅವರಿಗೆ ಒತ್ತಾಯ
Team Udayavani, Aug 7, 2022, 5:55 PM IST
ಬೆಂಗಳೂರು: ದೆಹಲಿಯ ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂಬ ಹೆಸರನ್ನು ನಾಮಕರಣ ಮಾಡಬೇಕು ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಮನವಿ ಮಾಡಿದೆ.
ಪ್ರಪ್ರಥಮವಾಗಿ ವಿಶ್ವ ಮಟ್ಟದಲ್ಲಿ ಪ್ರಜಾಪ್ರಭುತ್ವದ ಹುಟ್ಟು ಮತ್ತು ಸಂಸತ್ತು ಸ್ಥಾಪಿಸಿದ್ದು ಭಾರತದ ಬಸವಕಲ್ಯಾಣದಲ್ಲಿ ಎಂಬ ಮಹತ್ವದ ವಿಷಯವನ್ನು ಪ್ರಚಾರಪಡಿಸಿ ಇಡೀ ವಿಶ್ವದ ಗಮನ ಭಾರತದತ್ತ ಕೇಂದ್ರೀಕರಿಸುವಂತೆ ಮಾಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಎಂದು ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಪ್ರಶಂಸೆ ವ್ಯಕ್ತ ಪಡಿಸಿದೆ.
ಅನುಭವ ಮಂಟಪದ ಮುಖಾಂತರ ಬಸವಾದಿ ಶರಣರು 12ನೇ ಶತಮಾನದಲ್ಲಿ ಬಸವಕಲ್ಯಾಣದಲ್ಲಿ ವಿಶ್ವದ ಪ್ರಪ್ರಥಮ ಸಂಸತ್ತನ್ನು ಪ್ರಾರಂಭಿಸಿ ವಿಶ್ವಕ್ಕೆ ಪ್ರಜಾಪ್ರಭುತ್ವ ಸಂಸತ್ತಿನ ಕಲ್ಪನೆ ಕೊಟ್ಟ ದೇಶ ಭಾರತ. ಆದ್ದರಿಂದ ನಮ್ಮ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಯವರು ನೂತನ ಸಂಸತ್ ಭವನಕ್ಕೆ ಅನುಭವ ಮಂಟಪ ಎಂಬ ಹೆಸರನ್ನು ನಾಮಕರಣ ಮಾಡಿ ಜಗತ್ತಿಗೆ ಪ್ರಪ್ರಥಮ ಪ್ರಜಾಪ್ರಭುತ್ವ ಸಂಸತ್ತಿನ ಕಲ್ಪನೆ ಮಾಡಿಕೊಟ್ಟಿದ್ದು ಭಾರತ ಎಂದು ತಿಳಿಯುವಂತೆ ಮಾಡಬೇಕೆಂದು ಮನವಿ ಮಾಡಲಾಗಿದೆ.
ಕರ್ನಾಟಕ ಸರ್ಕಾರವು ಈ ಬಗ್ಗೆ ಒಂದು ನಿರ್ಣಯ ಕೈಗೊಂಡು ಸಂಘಟನೆಯ ಬೇಡಿಕೆಗೆ ಒತ್ತಾಸೆಯಾಗಿ ನಿಲ್ಲುವುದರ ಜತೆಗೆ ಕೇಂದ್ರಕ್ಕೆ ಈ ಬಗ್ಗೆ ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಲಾಗಿದೆ.
ಇದು ಕೇವಲ ಸಂಘಟನೆಯ ಕನಸು ಮಾತ್ರವಲ್ಲ, ಇಡೀ ಭಾರತ ದೇಶದ ಪ್ರತಿಯೊಬ್ಬರ ಆಸೆಯಾಗಿದ್ದು, ತಕ್ಷಣವೇ ಇದರ ಬಗ್ಗೆ ಸೂಕ್ತ ಕ್ರಮ ತೆಗೆದುಕೊಂಡು ಜನತೆಗೆ ಸಂತೋಷದ ವಿಷಯವನ್ನು ಕೊಡಬೇಕೆಂದು ಮನವಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Karkala: ದುರ್ಗಾ ಗ್ರಾಮ ಪಂಚಾಯತ್; ರಸ್ತೆ ಸಂಪೂರ್ಣ ದುರವಸ್ಥೆ
Udupi: ಜಿಲ್ಲೆಯ ಬ್ಲ್ಯಾಕ್ ಸ್ಪಾಟ್ 30ರಿಂದ 20ಕ್ಕೆ ಇಳಿಕೆ
Belagavi Session: ಬರಾಕ್ ಒಬಾಮಾ ಆಹ್ವಾನಕ್ಕೆ ಸರಕಾರ ತೀರ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.