ಮಂಗಳೂರು: ಆ. 14ರ ವರೆಗೆ ಸೆಕ್ಷನ್ 144 ಮುಂದುವರಿಕೆ
ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಸುಧಾರಣೆ; ನಿರ್ಬಂಧ ಸಡಿಲಿಕೆ
Team Udayavani, Aug 7, 2022, 8:34 PM IST
ಮಂಗಳೂರು: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ ಹೇರಿದ್ದ ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಆದರೆ ಸೆಕ್ಷನ್ 144 ಅನ್ನು ಆಗಸ್ಟ್ 14 ಮಧ್ಯರಾತ್ರಿಯವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸಾರ್ವಜನಿಕ ಮೆರವಣಿಗೆಗಳು, ಪ್ರತಿಕೃತಿಗಳನ್ನು ಸುಡುವುದು ಅಥವಾ ಪ್ರತಿಭಟನೆಗಳನ್ನು ನಡೆಸುವುದನ್ನು ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ಭಟ್ಕಳ: ಮಳೆ ಹಾನಿ ನಷ್ಟದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಅಂಗಡಿಗಳ ಮುಚ್ಚುವಿಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ಸಡಿಲಿಸಿದ್ದಾರೆ. ಮದ್ಯದಂಗಡಿಗಳು ಸೇರಿದಂತೆ ಎಲ್ಲಾ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು. ಅಂಗಡಿ ಮುಚ್ಚುವಿಕೆಯ ಎಲ್ಲಾ ನಿರ್ಬಂಧಗಳನ್ನು ತೆಗೆದುಹಾಕಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.