ಕೆಎಎಸ್ ಆಕಾಂಕ್ಷಿಗೆ ಬರೊಬ್ಬರಿ 59 ಲ.ರೂ. ವಂಚನೆ; ದೂರು ದಾಖಲು
Team Udayavani, Aug 7, 2022, 11:22 PM IST
ಬೆಂಗಳೂರು: ಕೆಎಎಸ್ ಪರೀಕ್ಷೆಯಲ್ಲಿ ಅನುಕೂಲಕರ ಅಂಕಗಳನ್ನು ನೀಡುವಂತೆ ಪರಿಚಿತ ಐಎಎಸ್ ಅಧಿಕಾರಿಗಳಿಗೆ ಶಿಫಾರಸು ಮಾಡಿಸಿ ತಹಶೀಲ್ದಾರ್ ಹುದ್ದೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮಹಿಳೆಗೆ ಬರೊಬ್ಬರಿ 59.50 ಲಕ್ಷ ರೂ. ವಂಚಿಸಿದ್ದಾನೆ.
ಉತ್ತರ ಕರ್ನಾಟಕ ಮೂಲದ ಸಹಕಾರ ನಗರದ ನಿವಾಸಿ ಸವಿತಾ ಶಾಂತಪ್ಪ ಯಳಸಂಗೀಕರ್ ಕೊಟ್ಟ ದೂರಿನ ಆದಾರದ ಮೇಲೆ ವಿಜಯ ನಗರ ಠಾಣೆ ಪೊಲೀಸರು ಸಿದ್ದರಾಜ್ ಸುಭಾಷ್ ಚಂದ್ರ ಕಟ್ಟಿಮನಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಸ್ಫರ್ಧಾತ್ಮಕ ಪರೀಕ್ಷೆ ತರಬೇತಿಗಾಗಿ ಸವಿತಾ ವಿಜಯನಗರಕ್ಕೆ ಬಂದು ಪಿಜಿಯಲ್ಲಿ ವಾಸವಿದ್ದರು. ಸ್ನೇಹಿತೆ ಯರ ಮೂಲಕ ಸವಿತಾಗೆ ಸಿದ್ಧರಾಜು ಪರಿಚಯವಾಗಿತ್ತು. ನನಗೆ ಸಾಕಷ್ಟು ಮಂದಿ ಐಎಎಸ್ ಅಧಿಕಾರಿಗಳ ಪರಿಚಯವಿದೆ ಎಂದು ನಂಬಿಸಿದ್ದ. ಆತನ ಮಾತಿನ ಮೋಡಿಗೆ ಮರುಳಾದ ಸವಿತಾ ಹಣ ಕೊಡಲು ಒಪ್ಪಿದ್ದರು. ಆರೋಪಿ ಸಿದ್ದರಾಜು ಸೂಚನೆಯಂತೆ 2020 ಆಗಸ್ಟ್‌ನಿಂದ ಹಂತಹಂತವಾಗಿ ಆತನ ತಂದೆ ಹಾಗೂ ಸ್ನೇಹಿತನ ಖಾತೆಗೆ 15.50 ಲ.ರೂ. ವರ್ಗಾವಣೆ ಮಾಡಿದ್ದರು. ಬಳಿಕ ಸಿದ್ದರಾಜು ಐಎಎಸ್ ಅಧಿಕಾರಿಗಳು ಇನ್ನಷ್ಟು ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ.
ಇನ್ನು 24 ಲಕ್ಷ ರೂ. ಕೊಟ್ಟರೆ ಕೆಲಸ ಗ್ಯಾರೆಂಟಿ ಎಂದು ನಂಬಿಸಿದ್ದು, ಅದರಂತೆ ಆ ಮೊತ್ತವನ್ನೂ ಸವಿತಾ ಆತನಿಗೆ ಕೊಟ್ಟಿದ್ದರು. ಬಳಿಕ ಹಲವು ಸಬೂಬುಗಳನ್ನು ಹೇಳಿದ್ದ ಆರೋಪಿ ಸವಿತಾ ಅವರಿಂದ ಪುನಃ 20 ಲಕ್ಷ ರೂ. ಲಪಟಾಯಿಸಿದ್ದ. ಒಟ್ಟು 59.50 ಲಕ್ಷ ರೂ. ಪಡೆದಿದ್ದ ಸಿದ್ಧರಾಜು ವರ್ಷಗಳೇ ಉರುಳಿದರೂ ಕೆಲಸವನ್ನೂ ಕೊಡದೆ, ಹಣವನ್ನೂ ಮರಳಿಸದೆ ವಂಚಿಸಿದ್ದಾನೆ ಎಂದು ಸವಿತಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
Atul Subhash ಆತ್ಮಹ*ತ್ಯೆ ಪ್ರಕರಣ: ಪತ್ನಿ, ಕುಟುಂಬದವರಿಗೆ ಜಾಮೀನು ಮಂಜೂರು
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.