ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ
Team Udayavani, Aug 8, 2022, 2:24 PM IST
ದೊಡ್ಡಬಳ್ಳಾಪುರ: ಅಂತಾರಾಷ್ಟ್ರೀಯ ಖ್ಯಾತಿಯ ಕ್ರಿಕೆಟಿಗ ಕರ್ನಾಟಕದ ಕೆ.ಎಲ್. ರಾಹುಲ್ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಗೆಳೆಯರೊಡನೆ ದೇವಾಲಯಕ್ಕೆ ಬಂದ ರಾಹುಲ್ ಅವರನ್ನು, ದೇವಾಲಯದ ಕಾರ್ಯ ನಿರ್ವಾಹಕ ಅಧಿಕಾರಿ ಡಿ.ನಾಗರಾಜ್, ಅಧಿಕ್ಷಕ ರಘು ಹುಚ್ಚಪ್ಪ, ಎಸ್‌ಡಿಸಿ ನಾಗರಾಜ್ ಭೇಟಿಯಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಿದರು. ಕಳೆದ ಐದು ವರ್ಷಗಳ ಹಿಂದೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಬಂದು ಪೂಜೆ ಸಲ್ಲಿಸಿದ್ದ ರಾಹುಲ್, ಭಾನುವಾರ ಸಂಜೆ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಬಳಿಕ ಗಾಯದ ಸಮಸ್ಯೆ ಹಾಗೂ ಕೋವಿಡ್‌ನಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿರುವ ಆರಂಭಿಕ ಬ್ಯಾಟ್ಸ್‌ಮನ್ ಕೆ.ಎಲ್ ರಾಹುಲ್ ಸದ್ಯ ತಂಡಕ್ಕೆ ಮರಳಲು ಎದುರು ನೋಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ತವರು ಟಿ20 ಸರಣಿಯಲ್ಲಿ ಭಾರತ ತಂಡವನ್ನು ರಾಹುಲ್ ಮುನ್ನಡೆಸಬೇಕಿತ್ತು. ಆದರೆ, ಗಂಭೀರ ಗಾಯಕ್ಕೆ ತುತ್ತಾಗಿದ್ದರಿಂದ ಅವರು ತಂಡದಿಂದ ಹೊರ ನಡೆದು ಹಾಗೂ ಚಿಕಿತ್ಸೆಗೆಂದು ಜಪಾನ್‌ಗೆ ತೆರಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.