ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬಂಧಿತರಿಬ್ಬರಿಗೆ ಪಿಎಫ್‌ಐ, ಎಸ್‌ಡಿಪಿಐ ನಂಟು?

ಎಸ್‌ಡಿಪಿಐ ಕಚೇರಿಯಲ್ಲಿ ಮಹಜರು ಪ್ರಕ್ರಿಯೆ!

Team Udayavani, Aug 9, 2022, 8:02 AM IST

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : ಬಂಧಿತರಿಬ್ಬರಿಗೆ ಪಿಎಫ್‌ಐ, ಎಸ್‌ಡಿಪಿಐ ನಂಟು?

ಪುತ್ತೂರು/ಸುಳ್ಯ : ದ.ಕ. ಬಿಜೆಪಿ ಜಿಲ್ಲಾ ಮೋರ್ಚಾ ಸದಸ್ಯ ಪ್ರವೀಣ್‌ ನೆಟ್ಟಾರು ಹತ್ಯೆಗೆ ಸಂಬಂಧಿಸಿ ರವಿವಾರ ಬಂಧಿಸಲಾದ ಇಬ್ಬರು ಆರೋಪಿಗಳಿಗೆ ಪಿಎಫ್‌ಐ, ಎಸ್‌ಡಿಪಿಐ ಸಂಘಟನೆಯ ಸಂಪರ್ಕ ಇದೆಯೋ ಎನ್ನುವ ಶಂಕೆ ಮೂಡಿದೆ.

ಸೋಮವಾರ ಪೊಲೀಸರು ಆರೋಪಿ ಗಳಿಬ್ಬರನ್ನು ಸುಳ್ಯದ ಎಸ್‌ಡಿಪಿಐ ಕಚೇರಿಗೆ ಕರೆ ತಂದು ಮಹಜರು ನಡೆಸಿರುವುದು ಈ ಅನುಮಾನಕ್ಕೆ ಪುಷ್ಠಿ ನೀಡಿದೆ. ಲಭ್ಯ ಮಾಹಿತಿ ಪ್ರಕಾರ ಪಿಎಫ್‌ಐ ಸಂಘಟನೆಯಲ್ಲಿ ಈ ಇಬ್ಬರು ಗುರುತಿಸಿಕೊಂಡಿದ್ದು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ. ಈಗಾಗಲೇ ಬಂಧಿತರಾಗಿರುವ ಶಫೀಕ್‌, ಜಾಕೀರ್‌, ಸದ್ದಾಂ, ಹಾರೀಸ್‌ ಪಿಎಫ್‌ಐ, ಎಸ್‌ಡಿಪಿಐಯಲ್ಲಿ ಗುರುತಿಸಿಕೊಂಡಿರುವುದು ದೃಢಪಟ್ಟಿದೆ. ರವಿವಾರ ಬಂಧಿಸಲ್ಪಟ್ಟವರು ಕೂಡ ಈ ಸಂಘಟನೆಯಲ್ಲಿ ಇರುವುದು ತನಿಖೆಯ ಮೇಲೂ°ಟದಲ್ಲಿ ಕಂಡು ಬಂದಿದೆ.

ಎಸ್‌ಡಿಪಿಐ ಕಚೇರಿಯಲ್ಲಿ ಮಹಜರು ಪ್ರಕ್ರಿಯೆ: ಹತ್ಯೆ ಪ್ರಕರಣ ದಲ್ಲಿ ಬಂಧಿತರಾದ ಸುಳ್ಯ ನಾವೂರು ನಿವಾಸಿ ಆಬಿದ್‌, ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ್‌ನನ್ನು ಸೋಮವಾರ ಬೆಳಗ್ಗೆ 8 ಗಂಟೆಗೆ ಡಿವೈಎಸ್ಪಿ ಗಾನ ಕುಮಾರಿ ನೇತೃತ್ವದ ಪೊಲೀಸ್‌ ತಂಡ ಸುಳ್ಯದ ಆಲೆಟ್ಟಿ ನಗರದ ಕ್ರಾಸ್‌ನಲ್ಲಿರುವ ಎಸ್‌ಡಿಪಿಐ ಕಚೇರಿಗೆ ಕರೆತಂದು ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಾತ್ರವಲ್ಲದೇ ಸುಳ್ಯ ಮತ್ತು ಬೆಳ್ಳಾರೆಯ ವಿವಿಧ ಸ್ಥಳಗಳಲ್ಲಿಯೂ ಮಹಜರು ಪ್ರಕ್ರಿಯೆ ನಡೆಸಲಾಯಿತು.

ಕಚೇರಿಯಲ್ಲಿ ಕುಳಿತು ಮಾಹಿತಿ ಸಂಗ್ರಹ?
ಬಂಧಿತ ಆರೋಪಿಗಳಿಬ್ಬರು ಸುಳ್ಯದ ಕಚೇರಿಯಿಂದಲೇ ಪ್ರವೀಣ್‌ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಹತ್ಯೆಯ ಸಂಚು ಕೂಡ ರೂಪಿಸಿದ್ದರು ಎನ್ನುವ ಅನುಮಾನದ ನಡುವೆ ಈ ಮಹಜರು ಪ್ರಕ್ರಿಯೆ ಮಹತ್ವ ಪಡೆದಿದೆ. ಈಗಾಗಲೇ ಪ್ರವೀಣ್‌ ಹತ್ಯೆ ನಡೆಸಿ ಪರಾರಿ ಆಗಿರುವ ಪ್ರಮುಖ ಹಂತಕರ ಜತೆಗೆ ಈ ಇಬ್ಬರು ನಿರಂತರ ಸಂಪರ್ಕದಲ್ಲಿರುವುದ್ದು ಕೂಡ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ. ಈ ಎಲ್ಲ ಕೋನಗಳಿಂದ ಪೊಲೀಸರು ತನಿಖೆ ಮುಂದುವರಿಸಿದ್ದು ಹತ್ಯೆ, ಹತ್ಯೆಗೆ ಕಾರಣವಾದ ಅಂಶದ ಇಡೀ ಚಿತ್ರಣವನ್ನು ಬೇಧಿಸುವಲ್ಲಿ ನಿರತರಾಗಿದ್ದಾರೆ.

ಇದನ್ನೂ ಓದಿ : ಆ.15ರಂದು “ಓಲಾ ಎಸ್‌1 ಪ್ರೋ’ ಅನಾವರಣ; ಗರಿಷ್ಠ ವೇಗ ಮಿತಿ 115 ಕಿ.ಮೀ.,10 ಬಣ್ಣಗಳಲ್ಲಿ ಲಭ್ಯ

ಅಜ್ಞಾತವಾಸದಲ್ಲಿ ಪ್ರಮುಖರು !
ಪ್ರವೀಣ್‌ ಹತ್ಯೆಯ ಬಳಿಕ ಕೆಲವು ಸಂಘಟನೆಗಳಲ್ಲಿ ಪ್ರಮುಖ ಸ್ಥಾನದಲ್ಲಿದ್ದ ಮುಖಂಡರು ಬೆಳ್ಳಾರೆಯನ್ನು ತೊರೆದಿದ್ದು ಅಜ್ಞಾತವಾಸದಲ್ಲಿರುವ ಬಗ್ಗೆ ಮಾಹಿತಿ ಹಬ್ಬಿದೆ. ಉದ್ವಿಗ್ನ ಸ್ಥಿತಿಯ ಕಾರಣದಿಂದಾಗಿ ಸುರಕ್ಷತೆಗೋಸ್ಕರ ಅಥವಾ ಬೇರೆ ಯಾವುದೋ ಕಾರಣದಿಂದ ಊರು ತೊರೆದಿರಬಹುದು ಎನ್ನುವ ಬಗ್ಗೆ ಸ್ಥಳೀಯವಾಗಿ ಶಂಕೆ ಮೂಡಿದೆ.
ಪ್ರವೀಣ್‌ ಹತ್ಯೆಗೆ ಸಂಬಂಧಿಸಿದಂತೆ ಮೂವರು ಹಂತಕರು ಸ್ಥಳೀಯ ಪರಿ ಸರದವರಾಗಿದ್ದು ಅವರು ಕೂಡ ಊರು ತೊರೆದಿದ್ದು ಪೊಲೀಸರು ಅವರು ಬೆನ್ನು ಬಿದ್ದಿದ್ದಾರೆ ಎನ್ನುವ
ಮಾಹಿತಿ ಲಭಿಸಿದೆ.

ನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಾಲ…, ಸುಳ್ಯ ನಾವೂರು ನಿವಾಸಿ ಆಬಿದ್‌ನನ್ನು ಸೋಮವಾರ ಸಂಜೆ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕಿರಿಯ ಸಿವಿಲ್‌ ನ್ಯಾಯಾಧೀಶೆ ಆರೋಪಿಗಳಿಗೆ ಆಗಸ್ಟ್‌ 12ರ ತನಕ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿ¨ªಾರೆ.

ಟಾಪ್ ನ್ಯೂಸ್

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

3-kadaba

Kadaba: ಕರ್ತವ್ಯದ ಬಿಡುವಿನಲ್ಲಿ ಮೊಬೈಲ್‌ನಲ್ಲೇ ಓದಿ ಎಸ್‌ಐ ಆದ ಪೊಲೀಸ್‌ ಚಾಲಕ!

1

Puttur: ನಳಿನ್‌ಗೆ ನಿಂದನೆ; ದೂರು ದಾಖಲು

1-asdaaasdasd

Kadaba; ಪ್ರೀತಿಸುವ ನಾಟಕವಾಡಿ ಬಾಲಕಿಯ ಮೇಲೆ ಅತ್ಯಾಚಾರ:ಯುವಕ ಸೆರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Uppinangady: ತೆಂಗಿನಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಮೃತ್ಯು

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

1-cid

CID; ಸತತ 2 ಗಂಟೆಗಳ ಕಾಲ ಸಚಿನ್‌ ಕುಟುಂಬಸ್ಥರ ವಿಚಾರಣೆ

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Hunsur: ಆಕಸ್ಮಿಕ ವಿದ್ಯುತ್‌ ತಂತಿ ತಗುಲಿ ಟ್ರ್ಯಾಕ್ಟರ್‌ನಲ್ಲಿದ್ದ ಹುಲ್ಲಿಗೆ ಬೆಂಕಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.