![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 10, 2022, 7:58 PM IST
ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಸೇತುವೆಯಲ್ಲಿ ಅಪರಿಚಿತ ವಾಹನವೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಸಂಜೆ ನಡೆದಿದೆ.
ಮಲ್ಲಾರು ಮೂಲದ ಯುವಕ ಅಲ್ ಫಾಜ್ ಮೃತ ವ್ಯಕ್ತಿ. ಶಾಹಿಲ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾದ ಯುವಕ ಎಂದು ತಿಳಿದುಬಂದಿದೆ.
ಅಲ್ ಫಾಜ್ ಮತ್ತು ಶಾಹಿಲ್ ಕಟಪಾಡಿಯ ಅಚ್ಚಡದ ಚಪ್ಪಲಿ ಗೋಡಾನ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸದ ನಿಮಿತ್ತ ಕಟಪಾಡಿಯಿಂದ ಉಡುಪಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.
ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದ್ದು ಕಟಪಾಡಿ ಹೊರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಕ್ಯಾಂಪಸ್ ಪ್ಲೇಸ್‌ಮೆಂಟ್: ನೇಕಾರನ ಮಗನಿಗೆ ವಾರ್ಷಿಕ 21.35 ಲಕ್ಷ ರೂ. ಆಫರ್!
You seem to have an Ad Blocker on.
To continue reading, please turn it off or whitelist Udayavani.