ತಾಲೂಕು ಘೋಷಣೆಗೆ ಆ16 ರ ಗಡುವು: 17 ರಂದು ಮಹಾಲಿಂಗಪುರ ಬಂದ್

Team Udayavani, Aug 10, 2022, 9:45 PM IST

1-sdsdasdada

ಮಹಾಲಿಂಗಪುರ: ಇದೇ ಅಗಷ್ಟ್ 16 ರೊಳಗೆ ರಾಜ್ಯ ಸರ್ಕಾರವು ಮಹಾಲಿಂಗಪೂರ ಪಟ್ಟಣವನ್ನು ತಾಲೂಕು ಕೇಂದ್ರವೆಂದು ಘೋಷಿಸಬೇಕು. ಇಲ್ಲದಿದ್ದರೆ ಆಗಸ್ಟ್ 17 ರಂದು ಮಹಾಲಿಂಗಪುರ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ, ಹೋರಾಟದ ಸ್ವರೂಪವನ್ನು ತೀವ್ರಮಟ್ಟಕ್ಕೆ ಬದಲಿಸುವದಾಗಿ ನಿರ್ಣಯ ಕೈಗೊಳ್ಳಲಾಯಿತು.

ಬುಧವಾರ ಪಟ್ಟಣದ ಕೌಜಲಗಿ ನಿಂಗಮ್ಮ ರಂಗಮಂದಿರದಲ್ಲಿ ಮಹಾಲಿಂಗಪೂರ ತಾಲೂಕು ಹೋರಾಟ ಸಮಿತಿಯಿಂದ ಹೋರಾಟದ ಮುಂದಿನ ರೂಪರೇಷೆಗಳ ಕುರಿತು ಕರೆಯಲಾಗಿದ್ದ ಸಭೆಯಲ್ಲಿ ಭಾಗವಹಿಸಿದ ಬಹುತೇಕರು ಮಹಾಲಿಂಗಪುರ ತಾಲೂಕು ಆಗುವರೆಗೂ ಹೋರಾಟ ಮುಂದುವರೆಯಲಿ, ಆ. 17 ರ ಮಹಾಲಿಂಗಪುರ ಬಂದ್ ನಂತರ ತಾಲೂಕು ಹೋರಾಟದ ಸ್ವರೂಪವನ್ನು ಉಗ್ರರೂಪಕ್ಕೆ ಬದಲಿಸಲು ಸಹಮತ ವ್ಯಕ್ತಪಡಿಸಿದರು.

ಮಹಾಲಿಂಗಪುರ ಹೋರಾಟ ಸಮಿತಿಯ ಮಹಾಲಿಂಗಪ್ಪ ಕೋಳಿಗುಡ್ಡ, ಪುರಸಭೆಯ ಮಾಜಿ ಅಧ್ಯಕ್ಷ ಜಿ.ಎಸ್.ಗೊಂಬಿ ಮಾತನಾಡಿ ಸರ್ಕಾರವು ಶೀಘ್ರದಲ್ಲೇ ಹೊಬಳಿ ಕೇಂದ್ರವನ್ನಾಗಿ ಘೋಷಿಸುತ್ತದೆ. ಅದನ್ನು ಒಪ್ಪಿಕೊಂಡು ಹೋರಾಟ ಮೊಟಕುಗೊಳಿಸೋಣ ಎನ್ನುತ್ತಿದ್ದಂತೆ ಸಭೆಯಲ್ಲಿ ಭಾಗವಹಿಸಿದ ಮುಖಂಡರು, ತಾಲೂಕು ಹೋರಾಟ ಸಮೀತಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ, ಯಾವುದೇ ಕಾರಣಕ್ಕೂ ವೇದಿಕೆಯನ್ನು ತೆರವುಗೊಳಿಸುವದಿಲ್ಲ. ತಾಲೂಕು ಹೋರಾಟ ಆಗುವರೆಗೂ ಹೋರಾಟವನ್ನು ನಿಲ್ಲಿಸುವದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಧರೆಪ್ಪ ಸಾಂಗ್ಲೀಕರ, ಮಹಾಂತೇಶ ಹಿಟ್ಟಿನಮಠ, ರಂಗನಗೌಡ ಪಾಟೀಲ, ಸಿದ್ದು ಪಾಟೀಲ, ವಿರೇಶ ಆಸಂಗಿ, ಅರ್ಜುನ ಹಲಗಿಗೌಡರ, ಗಂಗಾಧರ ಮೇಟಿ, ನಿಂಗಪ್ಪ ಬಾಳಿಕಾಯಿ, ಜಾವೇದ ಬಾಗವಾನ, ಚನ್ನಬಸು ಹುರಕಡ್ಲಿ, ನ್ಯಾಯವಾದಿ ಎಂ.ಎಸ್.ಮನ್ನಯ್ಯನವರಮಠ, ಸುರೇಶ ಮಡಿವಾಳರ, ಮಲ್ಲಪ್ಪ ಸಿಂಗಾಡಿ, ಶಂಕರ ಹುಕ್ಕೇರಿ, ಸಂಗಪ್ಪ ಹಲ್ಲಿ, ಮಹಾದೇವ ಮೇಟಿ, ಶಿವಾನಂದ ತಿಪ್ಪಾ, ಮನೋಹರ ಶಿರೋಳ ಮಾತನಾಡಿ ಪಕ್ಷಾತೀತ ಮತ್ತು ಜಾತ್ಯಾತೀತವಾಗಿ ಮಹಾಲಿಂಗಪುರ ತಾಲೂಕು ಆಗುವರೆಗೂ ಹೋರಾಟ ಮುಂದುವರೆಯಲಿ ಎಂದರು.

ಪುರಸಭೆ ಅಧ್ಯಕ್ಷ ಬಸವರಾಜ ಹಿಟ್ಟಿನಮಠ, ಸದಸ್ಯ ಯಲ್ಲನಗೌಡ ಪಾಟೀಲ, ಮುಖಂಡರಾದ ಆರ್.ಟಿ.ಪಾಟೀಲ, ಈರಪ್ಪ ದಿನ್ನಿಮನಿ, ಮಹಾಲಿಂಗಪ್ಪ ಕುಳ್ಳೋಳ್ಳಿ, ಜಮೀರ ಯಕ್ಸಂಬಿ, ಶೇಖರ ಅಂಗಡಿ, ಚನ್ನು ದೇಸಾಯಿ, ಪ್ರಕಾಶ ಚನ್ನಾಳ, ಶಿವನಗೌಡ ಪಾಟೀಲ, ಈಶ್ವರ ಚಮಕೇರಿ, ಮುಸ್ತಕ ಚಿಕ್ಕೋಡಿ, ಬಲವಂತಗೌಡ ಪಾಟೀಲ, ಸಿದ್ದು ಶಿರೋಳ, ಪಂಡಿತ ಪೂಜೇರಿ, ಶ್ರೀಶೈಲಪ್ಪ ಉಳ್ಳೆಗಡ್ಡಿ, ಅಸ್ಲಂ ಕೌಜಲಗಿ ಸೇರಿದಂತೆ ಹಲವರು ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹಿರಿಯರು ಭಾಗವಹಿಸಿದ್ದರು.

ಮುಖಂಡರಿಂದ ಕೇಳಿಬಂದ ಪ್ರಮುಖ ವಿಷಯಗಳು
ತಾಲೂಕು ಹೋರಾಟದ ಈವರೆಗಿನ ಲೆಕ್ಕಪತ್ರವನ್ನು ಸಾರ್ವಜನಿಕವಾಗಿ ಬಹಿರಂಗ ಪಡಿಸಬೇಕು. ನೂತನ ತಾಲೂಕು ಹೋರಾಟ ಸಮೀತಿ ರಚಿಸುವದು, ಪಕ್ಷಾತೀತವಾಗಿ ತಾಲೂಕು ಆಗುವರೆಗೂ ನಿಶ್ವಾರ್ಥವಾಗಿ ಹೋರಾಟ ಮಾಡುವಂತರನ್ನು ಸಮಿತಿಯಲ್ಲಿ ಸೇರಿಸಿಕೊಳ್ಳುವದು, ಮಹಾಲಿಂಗಪುರ ಮತ್ತು ಸಂಬಂಧಿಸಿದ ಎಲ್ಲಾ ಗ್ರಾಮಗಳ ಹಿರಿಯರನ್ನು ಒಳಗೊಂಡಂತೆ ವಿವಿಧ ಉಪ ಸಮಿತಿಗಳ ರಚನೆ, ಹೋರಾಟದಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯದೇ ಒಗ್ಗಟ್ಟಿನ ಪ್ರದರ್ಶನ ಮಾಡುವದು, ಹೋರಾಟ ಉದ್ದೇಶ ಯಾರ ಮತ್ತು ಯಾವ ಪಕ್ಷದ ವಿರುದ್ಧವಲ್ಲ, ಅದು ಕೇವಲ ಮಹಾಲಿಂಗಪುರ ತಾಲೂಕು ರಚನೆಗಾಗಿ ಎಂಬ ಸಿದ್ದಾಂತಕ್ಕೆ ಸರ್ವರು ಬದ್ದರಾಗಿ ಹೋರಾಟ ಮುಂದುವರೆಸಿದಾಗ ಮಾತ್ರ ತಾಲೂಕು ಹೋರಾಟ ಯಶಸ್ವಿಯಾಗಲು ಸಾಧ್ಯ ಎಂಬ ಅಭಿಪ್ರಾಯಗಳು ಸಭೆಯಲ್ಲಿ ಭಾಗವಹಿಸಿದ್ದ ಪ್ರಮುಖ ಪ್ರಮುಖಂಡರಿಂದ ಕೇಳಿಬಂದವು.

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

ಮುಧೋಳ: ಹಲಗಲಿಯಲ್ಲಿ ಸಾಂಸ್ಕೃತಿಕ ಭವನ ನಿರ್ಮಾಣಕ್ಕೆ ಸಾಥ್‌

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.